ಇಂದು ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವದ ಮೆರವಣಿಗೆ, ಮುಗಿಲು ಮುಟ್ಟಿದ ಅಭಿಮಾನಿಗಳ ಹರ್ಷ

Date:

Advertisements

ಕೋಟ್ಯಂತರ ಅಭಿಮಾನಿಗಳ ಕಾಯುವಿಕೆ ಕೊನೆಯಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು‌ ತಂಡವು ಐತಿಹಾಸಿಕ ಐಪಿಎಲ್ 2025 ಪ್ರಶಸ್ತಿ ಗೆದ್ದಿದೆ.

ಅಹಮದಾಬಾದ್​ನಲ್ಲಿ ಮಂಗಳವಾರ (ಜೂ.3) ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ವಿಕೆಟ್​ಗಳ ಜಯ ಸಾಧಿಸಿದ ರಜತ್ ಪಾಟೀದಾರ್ ನಾಯಕತ್ವದ ಆರ್​ಸಿಬಿ ಪಡೆ ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿಯಿತು. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ವರ್ಷಗಳ ಬಳಿಕ ಚಾಂಪಿಯನ್ ಪಟ್ಟ ಅಲಂಕರಿಸಿತು.

ಈ ಸಂಭ್ರಮವನ್ನು ಆಚರಿಸಲು ಆರ್‌ಸಿಬಿ ಜೂ.4 ರಂದು ಬೆಂಗಳೂರಿನಲ್ಲಿ ವಿಜಯೋತ್ಸವ ಮೆರವಣಿಗೆಯನ್ನು ಆಯೋಜಿಸಿದೆ. ನಗರದ ಪ್ರಮುಖ ಪ್ರದೇಶಗಳಲ್ಲಿ ಭವ್ಯ ವಿಜಯೋತ್ಸವ ಬಸ್ ಮೆರವಣಿಗೆ ನಡೆಯಲಿದ್ದು, ಅಭಿಮಾನಿಗಳು ತಮ್ಮ ಪ್ರಶಸ್ತಿ ವಿಜೇತ ಕ್ರಿಕೆಟಿಗರನ್ನು ಹತ್ತಿರದಿಂದ ನೋಡಲು ಅವಕಾಶ ಪಡೆಯಲಿದ್ದಾರೆ.

Advertisements

ಆರ್‌ಸಿಬಿಯ ಬಹುನಿರೀಕ್ಷಿತ ವಿಜಯೋತ್ಸವದ ಬಗ್ಗೆ ಸಂತೋಷ ವ್ಯಕ್ತಪಡಿಸಿ, ಮಾಜಿ ಆರ್‌ಸಿಬಿ ದಂತಕಥೆಗಳಾದ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಕೂಡ ವಿಜಯೋತ್ಸವ ಮೆರವಣಿಗೆ ದೃಢಪಡಿಸಿದ್ದಾರೆ.

ಆರ್ಸಿಬಿ ಐಪಿಎಲ್ ಕಿರೀಟ ಧರಿಸುತ್ತಿದ್ದಂತೆಯೇ ದೇಶದೆಲ್ಲೆಡೆ ಅಭಿಮಾನಿಗಳ ಸಂಭ್ರಮ ಉಕ್ಕಿ ಹರಿಯಿತು. ಹದಿನೆಂಟು ವರ್ಷಗಳಿಂದ ಈ ಕ್ಷಣಕ್ಕಾಗಿ ಕಾದಿದ್ದ ಲಕ್ಷಾಂತರ ಜನರು ಬೀದಿಗಿಳಿದು ಸಂಭ್ರಮಿಸಿದರು. ಕುಣಿದರು, ಸಿಹಿ ಹಂಚಿದರು. ಬುಧವಾರ ಬೆಳಗಿನ ಜಾವದವರೆಗೂ ‘ಆರ್‌ಸಿಬಿ..ಆರ್‌ಸಿಬಿ..’ ಎಂಬ ಕೂಗುಗಳು ಪ್ರತಿಧ್ವನಿಸಿದವು.

ಇಂದು ಆರ್‌ಸಿಬಿ ಆಟಗಾರರೇ ವಿಜಯೋತ್ಸವ ಬಸ್ ಮೆರವಣಿಯಲ್ಲಿರುವುದರಿಂದ ಅಭಿಮಾನಿಗಳ ಹರ್ಷಕ್ಕೆ ಪಾರವೇ ಇಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ಕೂಡ ವ್ಯಾಪಕ ಭದ್ರತೆ ಮತ್ತು ಟ್ರಾಫಿಕ್ ನಿಯಂತ್ರಣಕ್ಕೆ ಈಗಾಗಲೇ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಸ್ಥಳದಲ್ಲಿ ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2025ರ ಏಕದಿನ ವಿಶ್ವಕಪ್ ಪಂದ್ಯಗಳು ಬೆಂಗಳೂರಿನಿಂದ ಸ್ಥಳಾಂತರ

2025 ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ವೇಳಾಪಟ್ಟಿಯಲ್ಲಿ ದೊಡ್ಡ ಬದಲಾವಣೆಯಾಗಿದೆ....

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X