ಟ್ರೇಲರ್ ಟ್ರಕ್ ಮತ್ತು ವ್ಯಾನ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂಬತ್ತು ಜನರು ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಬುಧವಾರ ಬೆಳಗಿನ ಜಾವ ಮಧ್ಯಪ್ರದೇಶದ ಝಬುವಾ ಜಿಲ್ಲೆಯಲ್ಲಿ ನಡೆದಿದೆ.
ಸಿಮೆಂಟ್ ತುಂಬಿದ ಟ್ರೇಲರ್ ಟ್ರಕ್ ವ್ಯಾನ್ ಮೇಲೆ ಉರುಳಿಬಿದ್ದು ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಮಧ್ಯಪ್ರದೇಶ : ತಡರಾತ್ರಿ ಬಸ್-ಟ್ರಕ್ ನಡುವೆ ಭೀಕರ ಅಪಘಾತ: 12 ಮಂದಿ ಸಜೀವ ದಹನ
ವಿವಾಹ ಸಮಾರಂಭವೊಂದಕ್ಕೆ ಹಾಜರಾಗಿ ಹಿಂದಿರುಗುತ್ತಿದ್ದ ವೇಳೆ ಬೆಳಗಿನ ಜಾವ 2.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಝಬುವಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮವಿಲೋಚನ್ ಶುಕ್ಲಾ, “ಮೇಘನಗರ ತಹಸಿಲ್ ಪ್ರದೇಶದ ಸಂಜೆಲಿ ರೈಲ್ವೆ ಕ್ರಾಸಿಂಗ್ ಬಳಿ ತಾತ್ಕಾಲಿಕ ರಸ್ತೆಯ ಮೂಲಕ ನಿರ್ಮಾಣ ಹಂತದಲ್ಲಿರುವ ರೈಲು ಮೇಲ್ಸೇತುವೆ(ಆರ್ಒಬಿ) ದಾಟುತ್ತಿದ್ದ ಟ್ರಕ್ ಸಮತೋಲನ ತಪ್ಪಿ ವ್ಯಾನ್ ಮೇಲೆ ಉರುಳಿದೆ” ಎಂದು ತಿಳಿಸಿದ್ದಾರೆ.
