ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಆಲಂಕಾರು ಗ್ರಾಮದ ಪಜ್ಜಾಪು ಎಂಬಲ್ಲಿ ಅಕ್ರಮವಾಗಿ ಮರ ಕಡಿದು ಸಾಗಾಟಕ್ಕೆ ಯತ್ನಿಸುತ್ತಿದ್ದ ವೇಳೆ ಮೂವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಸವಣೂರಿನ ನಾಸೀರ್, ನವಾಜ್ ಹಾಗೂ ಸಿದ್ದಿಕ್ ತಿಂಗಳಾಡಿ ಎಂಬುವವರೇ ಬಂಧಿತ ಆರೋಪಿಗಳು. ಆರೋಪಿತರಿಂದ ಸುಮಾರು 5 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅಕ್ರಮವಾಗಿ ಹೆಬ್ಬಲಸು ಮರ ಕಡಿದಿದ್ದು, ವಿದ್ಯುತ್ ತಂತಿಗಳ ಮೇಲೆ ಅದು ಬಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಡ್ಯೂಟಿಗೆ ಹಾಕುವ ವಿಚಾರಕ್ಕೆ ಲಂಚ; ಹೋಮ್ ಗಾರ್ಡ್ ಕಮಾಂಡರ್ ಲೋಕಾಯುಕ್ತ ಬಲೆಗೆ
ಮರ ಬಿದ್ದ ಕಾರಣ ಸುಮಾರು 6ಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಕಡಬ ನೆಲ್ಯಾಡಿ ಭಾಗದಲ್ಲಿ ಹಲವು ಗಂಟೆಗಳ ಕಾಲ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಮೆಸ್ಕಾಂ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ. ಅಲ್ಲದೆ, ಇದರಿಂದ ಆಗಿರುವ ನಷ್ಟವನ್ನು ಆರೋಪಿಗಳಿಂದಲೇ ಭರಿಸುವ ಬಗ್ಗೆ ಮೆಸ್ಕಾಂ ಇಲಾಖೆ ಕ್ರಮ ಕೈಗೊಳ್ಳಲಿದೆ.