ಅಮಾಯಕ ಜೀವಗಳನ್ನು ಬಲಿ ಪಡೆದ ಸರ್ಕಾರ: ಆರ್‌ ಅಶೋಕ್‌ ವಾಗ್ದಾಳಿ

Date:

Advertisements

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಐಪಿಎಲ್‌ ಟ್ರೋಫಿ ಗೆದ್ದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಯೋಜನೆಯಾಗಿದ್ದ ಸಂಭ್ರಮಾಚರಣೆ ಸೂತಕವಾಗಿ ಬದಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ವಿವಿಧ ಗೇಟ್‌ಗಳಲ್ಲಿ ನಡೆದ ಕಾಲ್ತುಳಿತದಲ್ಲಿ 10 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆ ಸಂಬಂಧ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಐಪಿಎಲ್ ಪಟ್ಟ ಗೆದ್ದಿರುವ ಆರ್‌ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿ ಸಂಭ್ರಮಿಸಬೇಕಾದ ಘಳಿಗೆಯನ್ನು ಸೂತಕದ ಘಳಿಗೆ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿವೇಚನಾರಹಿತ ದುರಾಡಳಿತ ಇವತ್ತು ಅಮಾಯಕ ಜೀವಗಳನ್ನ ಬಲಿ ತೆಗೆದುಕೊಂಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ‘ಕನ್ನಡಿಗರ ಜನಪ್ರಿಯ ಆರ್‌ಸಿಬಿ ತಂಡ ಚಾಂಪಿಯನ್ ಪಟ್ಟ ಗೆದ್ದ ಸಾಧನೆಯಲ್ಲಿ ತಾನೂ ಒಂದಷ್ಟು ಕ್ರೆಡಿಟ್ ಪಡೆಯಬೇಕು ಎನ್ನುವ ಆತುರದಲ್ಲಿ ಸರಿಯಾದ ಪೂರ್ವಸಿದ್ಧತೆ ಇಲ್ಲದೆ, ಯೋಜನೆ ಇಲ್ಲದೆ, ಪೊಲೀಸರಿಗೆ ಕಾಲಾವಕಾಶ ಕೊಡದೆ ಅಭಿನಂದನಾ ಸಮಾರಂಭ ನಡೆಸಲು ರಾಜ್ಯ ಸರ್ಕಾರ ದುಂಬಾಲು ಬಿದ್ದಿದ್ದೆ ಈ ಅನಾಹುತಕ್ಕೆ ಕಾರಣ,” ಎಂದು ಆರೋಪಿಸಿದ್ದಾರೆ.

Advertisements

“ಐಪಿಎಲ್ ಪಂದ್ಯಾವಳಿಯ ಫೈನಲ್ ಮ್ಯಾಚ್ ನಿನ್ನೆ ರಾತ್ರಿಯಷ್ಟೇ ಮುಗಿದಿದೆ. ನಿನ್ನೆ ರಾತ್ರಿಯೆಲ್ಲಾ ನಗರದಾದ್ಯಂತ ಕಾನೂನು ಸುವ್ಯವಸ್ಥೆ ಪಾಲನೆ ಮಾಡುವಲ್ಲಿ ನಿರತರಾಗಿದ್ದ ಪೊಲೀಸ್‌ ಸಿಬ್ಬಂದಿಗೆ ಇವತ್ತು ಬೆಳಿಗ್ಗೆ ಏಕಾಏಕಿ ಮತ್ತೊಮ್ಮೆ ಇಷ್ಟು ದೊಡ್ಡ ಮಟ್ಟದ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಿ ಎಂದರೆ ಅದು ಕಷ್ಟ ಸಾಧ್ಯ ಎನ್ನುವ ಕನಿಷ್ಠ ಪರಿಜ್ಞಾನವೂ ಇಲ್ಲದಿದ್ದಿದ್ದು ಸರ್ಕಾರದ ಸ್ಪಷ್ಟ ವೈಫಲ್ಯ ಮತ್ತು ಅದಕ್ಕಿಂತ ಹೆಚ್ಚಾಗಿ ಬೇಜವಾಬ್ದಾರಿತನ,” ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವೀರಣ್ಣ ಮಡಿವಾಳರ ಅವರನ್ನು ಅವಮಾನಿಸಿದ್ದೇ ಅನಾಗರಿಕತೆ! ಅಮಾನತನ್ನು ವಾಪಸು ಪಡೆಯಿರಿ

ಚಾಂಪಿಯನ್ ಆರ್‌ಸಿಬಿ ತಂಡವನ್ನ ಸ್ವಾಗತಿಸಲು, ತಮ್ಮ ನೆಚ್ಚಿನ ಆಟಗಾರರನ್ನು ನೋಡಲು, ಅವರ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಾರೆ ಎನ್ನುವುದನ್ನು ಅಂದಾಜಿಸುವಲ್ಲಿ ಸರ್ಕಾರ ಎಡವಿದೆ ಎನ್ನುವುದು ಸ್ಪಷ್ಟವಾಗಿ ಕಾಣುತ್ತಿದೆ. ಜನ ಸಂದಣಿ ನಿರೀಕ್ಷಿಸಿ ಹೆಚ್ಚಿನ ಕಾಲಾವಕಾಶ ತೆಗೆದುಕೊಂಡು ವಾರಾಂತ್ಯದಲ್ಲಿ ಈ ಕಾರ್ಯಕ್ರಮ ಮಾಡಬಹುದಿತ್ತು ಎನ್ನಿಸುತ್ತಿದೆ ಎಂದು ಆರ್‌ ಅಶೋಕ್‌ ಅಭಿಪ್ರಾಯಪಟ್ಟಿದ್ದಾರೆ.

ಈ ಸಾವುಗಳಿಗೆ ಸರ್ಕಾರವೇ ಹೊಣೆ ಹೊತ್ತು ಮೃತರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ನೀಡಬೇಕು. ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಭರಿಸಬೇಕು ಎಂದು ಆಗ್ರಹಿಸಿರುವ ಅವರು, ಮೃತ ದುರ್ದೈವಿಗಳ ಕುಟುಂಬಗಳ ದುಃಖದಲ್ಲಿ ಇಡೀ ರಾಜ್ಯವೇ ಭಾಗಿಯಾಗಿದೆ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X