ಬಸ್ ಮತ್ತು ಲಾರಿ ನಡುವೆ ಅಪಘಾತವಾಗಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದರೆ 15ಕ್ಕೂ ಅಧಿಕ ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆನಚಿನಮರಡಿ ಗ್ರಾಮದ ಹೊರವಲಯದಲ್ಲಿ ಅಪಘಾತ ಸಂಭವಿಸಿದ್ದು, ಕೊಳವಿ ಗ್ರಾಮ ಯಲ್ಲವ್ವ ಬೀರನಗಡ್ಡಿ(70) ಎಂಬ ಮಹಳೆ ಮೃತ ಪಟ್ಟಿದ್ದಾಳೆ.
ಬೈಲಹೊಂಗಲ ಗೋಕಾಕ ಮಾರ್ಗದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಬಸ್‌ಗೆ ಲಾರಿ ಡಿಕ್ಕಿಯಾಗಿದೆ. ಲಾರಿ ಡಿಕ್ಕಿ ರಭಸಕ್ಕೆ ಪಲ್ಟಿಯಾಗಿದ್ದ ಬಸ್ ನಡಿ ಮಹಿಳೆ ಸಿಲುಕಿ ಸಾವನ್ನಪ್ಪಿದ್ದಾಳೆ. ಪಲ್ಟಿಯಾಗಿದ್ದ ಬಸ್‌ನಲ್ಲಿದ್ದ ಪ್ರಯಾಣಿಕರು ಕಿಟಕಿ ಗಾಜುಗಳನ್ನು ಒಡೆದು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ರವಾನಿಸಾಗಿದೆ. ಗೋಕಾಕ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.