ಉಡುಪಿ | ಆರ್.ಸಿ.ಬಿ ಸಂಭ್ರಮಾಚರಣೆ-ಕಾಲ್ತುಳಿತ, 11 ಜನರ ಸಾವು – ಸರ್ಕಾರದ ನಿರ್ಲಕ್ಷ್ಯಕ್ಕೆ ಸಿಪಿಐ(ಎಂ) ಖಂಡನೆ

Date:

Advertisements

ಆರ್.ಸಿ.ಬಿ. ತಂಡದ ಗೆಲುವಿನ ಸಂಭ್ರಮಾಚರಣೆಗೆ ಸಾವಿರಾರು ಜನರು ಸೇರುವುದನ್ನು ರಾಜ್ಯ ಸರ್ಕಾರ ಅಂದಾಜಿಸಿ ಸರಿಯಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲ್ಲದ ಪರಿಣಾಮ ಭದ್ರತಾ ವೈಫಲ್ಯದಿಂದ ಕಾಲ್ತುಳಿತ ಸಂಭವಿಸಿ 11 ಜನರ ಸಾವು ಮತ್ತು ಹಲವಾರು ಮಂದಿ‌ ಗಂಭೀರವಾದ ಸ್ಥಿತಿಗೆ ದೂಡುವಂತೆ ಮಾಡಿರುವುದನ್ನು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್ 3ರ ರಾತ್ರಿ ನಡೆದ ಐಪಿಎಲ್ ಪೈನಲ್ ಪಂದ್ಯದಲ್ಲಿ ಆರ್.ಸಿ.ಬಿ. ತಂಡವು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿರುದ್ಧ ಗೆಲುವು ಪಡೆದು ಟ್ರೋಫಿ ತನ್ನದಾಗಿಸಿಕೊಂಡಿತ್ತು. ಈ ಗೆಲುವಿನ ಸಂಭ್ರಮಾಚರಣೆಯನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್.ಸಿ.ಬಿ. ಫ್ರಾಂಚೈಸಿ ಮತ್ತು ವಿಧಾನ ಸೌಧ ಮುಂಭಾಗ ರಾಜ್ಯ ಸರ್ಕಾರ ಆಯೋಜಿಸಿದ್ದವು. ಈ ಸಂಭ್ರಮಾಚರಣೆಗೆ ಕನಿಷ್ಡ ವ್ಯವಸ್ಥೆಗಳನ್ನು ಮಾಡಿಕೊಳ್ಳದೆ ಎರಡು ಕಡೆ ಕಾರ್ಯಕ್ರಮಕ್ಕೆ ಅವಕಾಶ ‌ನೀಡಿದ್ದು ಸರಿಯಾದ ಕ್ರಮವಲ್ಲ.

ಎರಡು ಕಡೆ ಕಾರ್ಯಕ್ರಮವನ್ನು ಆಯೋಜಿಸಿದ ಮೇಲೆ ಅದಕ್ಕೆ ತಕ್ಕಂತಹ ಸಿದ್ಧತೆಯನ್ನು ರಾಜ್ಯ ಸರ್ಕಾರ ಮಾಡಬೇಕಿತ್ತು. ಆರ್.ಸಿ.ಬಿ. ಫ್ರಾಂಚೈಸಿ ಮಾಲೀಕರು ಸಹ ಸೂಕ್ತ ಭದ್ರತೆ ಪಡೆಯಬೇಕಿತ್ತು. ಇಡೀ ಪೋಲೀಸ್ ಇಲಾಖೆಯ ಭದ್ರತೆ ವಿಧಾನ ಸೌಧ ಕಾರ್ಯಕ್ರಮಕ್ಕೆ ನೀಡಿ, ಚಿನ್ನಸ್ವಾಮಿ ಸ್ಟೇಡಿಯಂ ಕಾರ್ಯಕ್ರಮದ ಭದ್ರತಾ ಕೆಲಸಗಳಿಗೆ ನಿರ್ಲಕ್ಷ್ಯತೆ ವಹಿಸಿದಂತೆ ಕಾಣುತ್ತದೆ.‌ ಅಲ್ಲದೆ ಚಿನ್ನಸ್ವಾಮಿ ಸ್ಟೇಡಿಯಂನ ಗೇಟ್ ನ್ನು ಒಮ್ಮೆಲೆ ತೆರೆದಿದ್ದು ನೂಕುನುಗ್ಗಲು ಹೆಚ್ಚಾಗಿ ಈ ದುರಂತಕ್ಕೆ ಎಡೆಮಾಡಿಕೊಟ್ಟಂತಿದೆ. ಇದು ರಾಜ್ಯ ಗೃಹ ಇಲಾಖೆಯ ವೈಫಲ್ಯವಾಗಿದೆ.

Advertisements

ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆದ್ದಾಗ, ಕರ್ನಾಟಕ ತಂಡ ರಣಜಿ ಟ್ರೋಫಿ ಗೆದ್ದಾಗ ನೀಡದಿರುವ ಮಹತ್ವ ಹಾಗೂ ಕ್ರೀಡೆಗಳಿಗೆ ಪ್ರೋತ್ಸಾಹ, ಅನುದಾನ ನೀಡಿದ ರಾಜ್ಯ ಸರ್ಕಾರ ಆರ್.ಸಿ.ಬಿ. ಫ್ರಾಂಚೈಸಿ ತಂಡ ಗೆಲುವಿಗೆ ಮಹತ್ವ ನೀಡಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ಆಯೋಜಿಸಿದ್ದು ದುರದೃಷ್ಟಕರವಾಗಿದೆ.

ಘಟನೆಯಲ್ಲಿ ನ ಎಲ್ಲಾ ಗಾಯಾಳುಗಳ ಚಿಕಿತ್ಸೆ ವೆಚ್ಚಗಳು ಮತ್ತು ಆರೈಕೆ ಅವಧಿಯ ವೆಚ್ಚಗಳನ್ನು ಹಾಗೂ ಮೃತ ವ್ಯಕ್ತಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ರಾಜ್ಯ ಸರ್ಕಾರ ಹಾಗೂ ಆರ್.ಸಿ.ಬಿ. ಫ್ರಾಂಚೈಸಿ ಮಾಲಿಕರು ಘೋಷಿಸಬೇಕೆಂದು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿಯು ಒತ್ತಾಯಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X