ಬೆಂಗಳೂರು | ಹೆತ್ತ ತಂದೆ-ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿದ ಮಗ

Date:

Advertisements
  • ರಾಡ್‌ನಿಂದ ದಂಪತಿ ಮೇಲೆ ಹಲ್ಲೆ ಮಾಡಿದ ಆರೋಪಿ ಮಗ
  • ಘಟನಾ ಸ್ಥಳಕ್ಕೆ ಕೊಡಿಗೆಹಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ

ಬೆಂಗಳೂರಿನ ಕೊಡಿಗೆಹಳ್ಳಿ ಬ್ಯಾಟರಾಯನಪುರದಲ್ಲಿ ಹೆತ್ತ ತಂದೆ-ತಾಯಿಯನ್ನೇ ಮಗ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ.

ಆರೋಪಿ ಶರತ್ ಎಂಬಾತ ತಂದೆ ಭಾಸ್ಕರ್ ರಾವ್, ತಾಯಿ ಶಾಂತಾ ಎಂಬುವವರನ್ನು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿದ್ದಾನೆ.

ಮೃತ ತಂದೆ ಭಾಸ್ಕರ್ ರಾವ್ ಖಾಸಗಿ ಕ್ಯಾಂಟೀನ್​ವೊಂದರಲ್ಲಿ ಕ್ಯಾಶಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತ ತಾಯಿ ಶಾಂತಾ ಇತ್ತೀಚೆಗೆ ಕೇಂದ್ರದ ನೌಕರಿಯಿಂದ ನಿವೃತ್ತಿಯಾಗಿ ಮನೆಯಲ್ಲಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಹಿರಿಯ ಪುತ್ರ ಕೆಲಸಕ್ಕೆ ಹೋಗುತ್ತಿದ್ದರು. ಇನ್ನೋರ್ವ ಮಗ ಆರೋಪಿ ಶರತ್ ಮನೆಯಲ್ಲೇ ಇರುತ್ತಿದ್ದನು.

Advertisements

ಈತನಿಗೆ ಕುಡಿಯುವ ಚಟವಿತ್ತು. ಆಗಾಗ ಸೈಕೋ ರೀತಿ ವರ್ತಿಸುತ್ತಿದ್ದನು. ನಿತ್ಯ ಕುಡಿದು ಬಂದು ತಂದೆ-ತಾಯಿ ಜತೆಗೆ ಜಗಳವಾಡುತ್ತಿದ್ದನು. ಜುಲೈ 17ರಂದು ಸಾಯಂಕಾಲ ಕುಡಿದುಕೊಂಡು ಬಂದು ಆರೋಪಿ ತಂದೆ-ತಾಯಿ ಜತೆಗೆ ಜಗಳ ಆರಂಭಿಸಿದ್ದಾನೆ. ಈ ವೇಳೆ, ರಾಡ್‌ನಿಂದ ಇಬ್ಬರ ಮೇಲೂ ಹಲ್ಲೆ ಮಾಡಿ, ಹತ್ಯೆ ಮಾಡಿದ್ದಾನೆ. ಬಳಿಕ, ಮನೆಯ ಬೀಗ ಹಾಕಿಕೊಂಡು ಪರಾರಿಯಾಗಿದ್ದಾನೆ.

ಜುಲೈ 18ರ ಬೆಳಗ್ಗೆ ಇನ್ನೋರ್ವ ಮಗ ತಂದೆ ತಾಯಿಗೆ ಕರೆ ಮಾಡಿದ್ದಾನೆ. ಯಾರೂ ಕರೆ ಸ್ವೀಕರಿಸದ ಕಾರಣ ಪಕ್ಕದ ಮನೆಯವರಿಗೆ ಕರೆ ಮಾಡಿ ಹೇಳಿದ್ದಾನೆ. ಈ ವೇಳೆ ದಂಪತಿ ಇಬ್ಬರು ಕೊಲೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಕೊಡಿಗೆಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮಿಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜುಲೈ 17ರ ಸಂಜೆ ಅಥವಾ ರಾತ್ರಿ ಸಮಯದಲ್ಲಿ ಕೊಲೆ ಮಾಡಿರಬಹುದು ಎಂದು ಶಂಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 40 ವರ್ಷದ ಮದ್ಯವ್ಯಸನಿ ಮಗನಿಗೆ ಬೆಂಕಿ ಹಚ್ಚಿದ ತಾಯಿ

ಬೆಂಗಳೂರು | ನೇಣು ಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಟೆಕ್ಕಿ

ಬೆಂಗಳೂರಿನ ಜೋಗುಪಾಳ್ಯದಲ್ಲಿ ಮಹಿಳಾ ಟೆಕ್ಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ದಿವ್ಯಾ(30) ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ. ಜೋಗುಪಾಳ್ಯದಲ್ಲಿರುವ ಪತಿಯ ಮನೆಯಲ್ಲಿ ದಿವ್ಯಾ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಅರವಿಂದ್ ಎಂಬುವವರ ಜತೆಗೆ 2014ರಲ್ಲಿ ದಿವ್ಯಾ ಮದುವೆ ಮಾಡಿಕೊಂಡಿದ್ದರು. ಮದುವೆ ಆದ ನಂತರ ದಿವ್ಯಾಳಿಗೆ ಪತಿಯ ಮನೆಯವರು ಕಿರುಕುಳ ನೀಡುತ್ತಿದ್ದರು. ಪತಿ ಮತ್ತು ಆತನ ಕುಟುಂಬದವರೆ ಮಗಳನ್ನು ಕೊಲೆ ಮಾಡಿದ್ದಾರೆ ಎಂದು ದಿವ್ಯಾಳ ಪೋಷಕರು ಆರೋಪಿಸಿದ್ದಾರೆ.

ದಿವ್ಯಾಳ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಹಲಸೂರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ದಿವ್ಯಾಳ ಪತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X