ಕೆ.ಆರ್.ಪೇಟೆ ದಲಿತ ಯುವಕ ಸಾವು ಪ್ರಕರಣ: ಆರೋಪಿತ ಅಧಿಕಾರಿಗಳ ಅಮಾನತಿಗೆ ಆಗ್ರಹ

Date:

Advertisements

ಮಂಡ್ಯ ಜಿಲ್ಲೆಯ ಕೆ.ಆರ್‍‌.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ಇತ್ತೀಚೆಗೆ ದಲಿತ ಯುವಕನ ಸಾವಿನ ಪ್ರಕರಣದಲ್ಲಿ ಲೋಪ ಎಸಗಿರುವ ಆರೋಪ ಇರುವ ಎಲ್ಲಾ ಪೊಲೀಸ್‌ ಅಧಿಕಾರಿ, ಸಿಬ್ಬಂದಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ದಿವಾಕರ್‍‌ ಅವರನ್ನು ಅಮಾನತು ಮಾಡಿ, ಪ್ರಕರಣದ ತನಿಖೆ ನಡೆಸಬೇಕು ಎಂದು ನಾವು ದ್ರಾವಿಡ ಕನ್ನಡಿಗರು ಚಳವಳಿಯ ಅಬಿ ಗೌಡ ಆಗ್ರಹಿಸಿದ್ದಾರೆ.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆಯಲ್ಲಿ ಲೋಪ ಇವೆ. ಹೀಗಾಗಿ ಆರೋಪಿತ ಅಧಿಕಾರಿಗಳನ್ನು ಅಮಾನತು ಮಾಡಲು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮೀನಾಮೇಷ ತೋರುತ್ತಿರುವುದು ಯಾಕೆ ಎಂದು ಪ್ರಶ್ನಿಸಿದರು.

ಸಾವಿಗೀಡಾದ ಜಯಕುಮಾರ್‍‌ ಹಿಂದಿನ ದಿನವೇ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೂ ಪೊಲೀಸ್‌ ಅಧಿಕಾರಿಗಳಾದ ಆನಂದೇ ಗೌಡ, ದಪೇದಾರ್‍‌ ವೈರಮುಡಿ, ಸುಬ್ಬಯ್ಯ, ಚಲುವರಾಜು ಯಾವುದೇ ಕ್ರಮ ವಹಿಸಿಲ್ಲ. ಅಲ್ಲದೆ ಮೃತದೇಹದ ಮರಣೋತ್ತರ ಪರೀಕ್ಷೆಯ ಬಳಿಕ ಪರಿಹಾರ ನೀಡಿ ಕೈ ತೊಳೆದುಕೊಳ್ಳುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ದಿವಾಕರ್‍‌ ಅವರು ಮೃತದೇಹವನ್ನು ಹೂಳುವ ಬದಲಿಗೆ ಸುಟ್ಟು ಹಾಕಿದ್ದಾರೆ. ಇದರಿಂದ ಉನ್ನತ ತನಿಖೆಗೆ ಮತ್ತೆ ಮರಣೋತ್ತರ ಪರೀಕ್ಷೆಗೆ ಮೃತದೇಹವೇ ಸಿಗದಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Advertisements

ಪ್ರಕರಣದ ತನಿಖೆಯನ್ನು ಈ ಅಧಿಕಾರಿಗಳೇ ನಡೆಸುತ್ತಿದ್ದಾರೆ. ಹೀಗಿರುವಾಗ ನ್ಯಾಯ ಸಿಗಲು ಸಾಧ್ಯವೇ ಎಂದು ಪ್ರಶ್ನಿಸಿದ ಅವರು, ಆರೋಪಿತ ಎಲ್ಲಾ ಅಧಿಕಾರಿಗಳನ್ನು ಅಮಾನತು ಮಾಡಿ ಬಳಿಕ ಸಾವಿನ ಪ್ರಕರಣವನ್ನು ತನಿಖೆ ನಡೆಸಬೇಕು. ಆರೋಪಿತ ಅಧಿಕಾರಿಗಳನ್ನು ಅಮಾನತು ಮಾಡದಿದ್ದರೆ ಜೂನ್‌ 9ರಿಂದ ನಿರಂತರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಎಂ.ವಿ.ಕೃಷ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಹೇಮಾವತಿ ನಾಲೆ ಅಕ್ರಮ; ಸರ್ಕಾರಿ ಗೋಮಾಳ ಒತ್ತುವರಿ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ಮಂಡ್ಯ ಜಿಲ್ಲೆ, ಕೃಷ್ಣರಾಜ ಪೇಟೆ ತಾಲ್ಲೂಕು ಕಚೇರಿ ಅವರಣ ದಲ್ಲಿಂದು ಕರ್ನಾಟಕ...

ಮಂಡ್ಯದಲ್ಲಿ ಚಿನ್ನಾಭರಣ ದರೋಡೆ: ಕೃತ್ಯ ನೋಡಿದ ವ್ಯಕ್ತಿಯನ್ನು ಕೊಲೆಗೈದು ಪರಾರಿಯಾದ ಕಳ್ಳರು

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಶನಿವಾರ ತಡರಾತ್ರಿ ಆಘಾತಕಾರಿ...

ಮಂಡ್ಯ | ಗುಡಿ, ಮಸೀದಿ, ಚರ್ಚುಗಳ ಪ್ರಭಾವದಿಂದ ದೂರವಿರಬೇಕಾಗಿದೆ: ನ್ಯಾ. ಬಿ ಟಿ ವಿಶ್ವನಾಥ್

ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ದೇಶದ ಮಕ್ಕಳನ್ನು ನಾವು ಗುಡಿ, ಮಸೀದಿ,...

ಮಂಡ್ಯ | ಅಬಕಾರಿ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ: 60 ಲಕ್ಷ ರೂ. ಲಂಚಕ್ಕೆ ಬೇಡಿಕೆ ಜಿಲ್ಲಾಧಿಕಾರಿ – ಆರೋಪ

ಬೋರ್ಡಿಂಗ್‌ ಮತ್ತು ಲಾಡ್ಜಿಂಗ್‌ ತೆರೆಯಲು 'ಸಿಎಲ್‌7' ಪರವಾನಗಿ ನೀಡಲು ಮಂಡ್ಯ ಅಬಕಾರಿ...

Download Eedina App Android / iOS

X