ಕೊಡಗು | ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರ : ಸುಬ್ರಾಯ ಸಂಪಾಜೆ

Date:

Advertisements

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ನಗರದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಬುಧವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ‘ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141 ನೇ ಜನ್ಮದಿನೋತ್ಸವ ಹಾಗೂ ವಿಜಯ ವಿಷ್ಣು ಭಟ್ ದತ್ತಿ ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಾಹಿತಿ ಸುಬ್ರಾಯ ಸಂಪಾಜೆ ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರ ಎಂದು ಸ್ಮರಿಸಿದರು.

” ಶಿಕ್ಷಣ, ಉದ್ಯೋಗ, ಆರೋಗ್ಯ, ನೀರಾವರಿ, ಕೈಗಾರಿಕೆ, ವಿದ್ಯುತ್, ಆರ್ಥಿಕ ಹೀಗೆ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದರು. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದ ಶ್ರೇಷ್ಠ ರಾಜರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ಮೇಲ್ಪಂಕ್ತಿಯಿಂದ ಕೂಡಿತ್ತು. ಆಡಳಿತದಲ್ಲಿ ಜನರು ಪಾಲ್ಗೊಳ್ಳುವಂತೆ ಮಾಡಿದ್ದರು. ಕೊಡಗಿನ ಸಾಂಸ್ಕೃತಿಕ ಹಾಗೂ ಪಾರಂಪರಿಕ ಶ್ರೀಮಂತಿಕೆ ಹೊಂದಿರುವ ಬುಡಕಟ್ಟು ಜನಾಂಗಗಳ ಬಗ್ಗೆ ವಿಸ್ತ್ರುತವಾದ ಅಧ್ಯಯನ ನಡೆಯುವಂತಾಗಬೇಕು ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

” ಕೊಡಗು ಜಿಲ್ಲೆ ಸೇನಾ ಕ್ಷೇತ್ರ ಹಾಗೂ ಕ್ರೀಡಾ ಪರಂಪರೆಗೆ ಹೆಸರಾಗಿದೆ. ಸೈನಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಜಿಲ್ಲೆಯವರು ತಮ್ಮದೇ ಆದ ಛಾಪು ಮೂಡಿಸಿದ್ದು, ಆ ನಿಟ್ಟಿನಲ್ಲಿ ಈ ಬಗ್ಗೆಯೂ ಸಹ ಅಧ್ಯಯನ ಮಾಡುವಂತಾಗಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾನಪದ ಮತ್ತು ಸಾಮಾಜಿಕ ಅಧ್ಯಯನ ಸಾಕಷ್ಟು ನಡೆದಿವೆ. ಅದೇ ರೀತಿ ಕೊಡಗು ಜಿಲ್ಲೆಯಲ್ಲಿಯೂ ಜಾನಪದ ಮತ್ತು ಸಾಮಾಜಿಕ ಅಧ್ಯಯನಕ್ಕೆ ಹೆಚ್ಚಿನ ಒತ್ತು ನೀಡುವಂತಾಗಬೇಕು. ‘ಕೊಡಗು ಜಿಲ್ಲೆಯಲ್ಲಿ ಗಮಕ ಕ್ಷೇತ್ರವನ್ನು ಉಳಿಸಿ ಬೆಳೆಸುವಂತಾಗಬೇಕು. ಹಿಂದೆ ಗೋಪಾಲಕೃಷ್ಣ ಅವರು ಗಮಕ ಕ್ಷೇತ್ರದಲ್ಲಿ ಹೆಸರು ಮಾಡಿದ್ದರು. ಮುಂದಿನ ದಿನಗಳಲ್ಲಿ ಗಮಕ ಸಂಗೀತ ಕ್ಷೇತ್ರವನ್ನು ಉಳಿಸುವಂತಾಗಬೇಕು. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ” ಎಂದು ಸಲಹೆ ನೀಡಿದರು.’

Advertisements

ವಿಜಯ ವಿಷ್ಣುಭಟ್ ದತ್ತಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸ್ಮಿತಾ ಅಮೃತರಾಜ್ ‘ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಲೋಕ ದರ್ಶನ ಮಾಡಲು ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತಾಗಬೇಕು. ಕಸಾಪ ಬರಹಗಾರರಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಆ ನಿಟ್ಟಿನಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಎಲ್ಲರಿಗೂ ಅವಕಾಶಗಳು ದೊರೆಯುವಂತಾಗಬೇಕು ‘ ಎಂದರು.

ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್ ಮಾತನಾಡಿ ” ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರು ಸಂಸ್ಥಾನದ ತಮ್ಮ ಅಧಿಕಾರಾವಧಿಯಲ್ಲಿ ಕೃಷ್ಣರಾಜ ಸಾಗರ, ವಾಣಿ ವಿಲಾಸ ಸಾಗರ ಅಣೆಕಟ್ಟು ಕಟ್ಟಿಸಿ ಕೃಷಿಕರ ಕಣ್ಮಣಿಯಾಗಿದ್ದಾರೆ. ಮೈಸೂರು ವೈದ್ಯಕೀಯ ಕಾಲೇಜು, ಮೈಸೂರು ವಿಶ್ವವಿದ್ಯಾನಿಲಯ, ಕನ್ನಡ ಸಾಹಿತ್ಯ ಪರಿಷತ್ತು, ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ, ಶಿವನಸಮುದ್ರ ಜಲ ವಿದ್ಯುತ್ ಯೋಜನೆ, ಮೈಸೂರು ಸ್ಯಾಂಡಲ್ ಸೋಪು, ಭಾರತೀಯ ವಿಜ್ಞಾನ ಸಂಸ್ಥೆ, ಮೈಸೂರು ಬ್ಯಾಂಕ್, ಸ್ತ್ರೀಯರಿಗೆ ಕಡ್ಡಾಯ ಶಿಕ್ಷಣ, ಹೀಗೆ ಹಲವಾರು ಅಭಿವೃದ್ಧಿ ಮತ್ತು ಪ್ರಗತಿಪರ ಕಾರ್ಯಕ್ರಮ ಜಾರಿಗೊಳಿಸುವ ಮೂಲಕ ಮೈಸೂರು ರಾಜ್ಯ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಿದ್ದಾರೆ ” ಎಂದು ಹೇಳಿದರು.

ಸಾಹಿತಿ ನಾಗೇಶ್ ಕಾಲೂರು ಮಾತನಾಡಿ ‘ ಕನ್ನಡ ಭಾಷೆಗೆ ತನ್ನದೇ ಆದ ಇತಿಹಾಸವಿದೆ. ಅವರವರ ಭಾಷೆಯನ್ನು ಪ್ರೀತಿಸಬೇಕು, ಗೌರವಿಸಬೇಕು. ಹಾಗೂ ಇತರ ಭಾಷೆಗಳನ್ನು ಸಹ ಗೌರವಿಸಬೇಕು. ಯಾರೂ ಸಹ ಸಣ್ಣತನ ಪ್ರದರ್ಶಿಸಬಾರದು. ಅವರವರ ಮಾತೃ ಭಾಷೆ ಅವರಿಗೆ ಹೃದಯ ಶ್ರೀಮಂತಿಕೆ ಭಾಷೆಯಾಗಿದೆ. ಆ ನಿಟ್ಟಿನಲ್ಲಿ ಮತ್ತೊಂದು ಭಾಷೆಯನ್ನು ಗೌರವಿಸಬೇಕು ‘ ಎಂದರು.

ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮಾತನಾಡಿ ‘ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 40 ದತ್ತಿ ಪ್ರಶಸ್ತಿ ಸ್ಥಾಪಿಸಲಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರನ್ನು ಗೌರವಿಸುತ್ತಾ ಬರಲಾಗಿದೆ. ಪ್ರಸಕ್ತ ವರ್ಷದಿಂದ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮಗಳನ್ನು ಆರಂಭಿಸಲಾಗಿದೆ ‘ ಎಂದರು.

ಕಸಾಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ ಬೂಕರ್ ಪ್ರಶಸ್ತಿ ವಿಜೇತರಾದ ಮಡಿಕೇರಿಯ ದೀಪಾ ಬಸ್ತಿ ಅವರಿಗೆ ಜೂನ್ 09 ಅಥವಾ 10 ರಂದು ಸನ್ಮಾನ ಕಾರ್ಯಕ್ರಮ ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದರು.

ಈ ವಿಶೇಷ ವರದಿ ಓದಿದ್ದೀರಾ?ಮೈಸೂರು | ಶವಾಗಾರದಲ್ಲಿ ಕೆಲಸ ಮಾಡುವ ಏಕಮೇವ ಮಹಿಳೆ ರಾಜಮ್ಮ

ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷ ಪುದಿಯ ನೆರವನ ರೇವತಿ ರಮೇಶ್, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್, ಕಸಾಪ ಕಾರ್ಯಕಾರಿ ಸಮಿತಿ ಸದಸ್ಯರಾದ ಬಾರಿಯಂಡ ಜೋಯಪ್ಪ, ಕಾವೇರಿ ಪ್ರಕಾಶ್, ಬೈತಡ್ಕ ಜಾನಕಿ, ಕಟ್ರತನ ಲಲಿತ ಅಯ್ಯಣ್ಣ, ಲೋಕನಾಥ ಅಮೆಚೂರು, ಪ್ರೇಮ ರಾಘವಯ್ಯ, ಸುನಿತಾ ಲೋಕೇಶ್, ಸುಂದರಿ ಮಾಚಯ್ಯ, ಸಹನಾ ಕಾಂತಬೈಲು, ಗೀತಾ, ನೀತು, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ, ಶಿಕ್ಷಣ ಇಲಾಖೆಯ ಕೃಷ್ಣಪ್ಪ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X