ಮಾಜಿ ಸಂಸದನನ್ನು ಜರ್ಮನಿಯಲ್ಲಿ ವರಿಸಿದ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ

Date:

Advertisements

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಮೇ 3ರಂದು ಜರ್ಮನಿಯಲ್ಲಿ ಮದುವೆಯಾಗಿದ್ದಾರೆ. ಬಿಜು ಜನತಾದಳದ (ಬಿಜೆಡಿ) ನಾಯಕ, ಮಾಜಿ ಸಂಸದ ಪಿನಾಕಿ ಮಿಶ್ರಾ ಅವರನ್ನು ಮಹುವಾ ವಿವಾಹವಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮಹುವಾ ಮೊಯಿತ್ರಾ ಚಿನ್ನದ ಆಭರಣಗಳನ್ನು ಧರಿಸಿ, ಪಿನಾಕಿ ಮಿಶ್ರಾ ಅವರ ಕೈಗಳನ್ನು ಹಿಡಿದು ನಗುತ್ತಿರುವ ಚಿತ್ರ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.

50 ವರ್ಷದ ಮಹುವಾ ಮೊಯಿತ್ರಾ ಅವರಿಗೆ ಇದು ಎರಡನೇ ಮದುವೆ. ಅವರು ಈ ಹಿಂದೆ ಡ್ಯಾನಿಶ್ ಹಣಕಾಸು ತಜ್ಞ ಲಾರ್ಸ್ ಬ್ರೋರ್ಸನ್ ಅವರನ್ನು ವಿವಾಹವಾಗಿದ್ದರು. ಮದುವೆಯ ಬಗ್ಗೆ ಮಹುವಾ ಮೊಯಿತ್ರಾ, ಪಿನಾಕಿ ಮಿಶ್ರಾ ಅಥವಾ ಅವರ ಪಕ್ಷಗಳು ಯಾವುದೇ ಅಧಿಕೃತ ಹೇಳಿಕೆಯನ್ನು ಈವರೆಗೆ ನೀಡಿಲ್ಲ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಭಿಮಾನಿಗಳ ಅತಿರೇಕ ಮತ್ತು ಸರ್ಕಾರದ ಅವಿವೇಕ

ಅಸ್ಸಾಂನಲ್ಲಿ ಅಕ್ಟೋಬರ್ 12, 1974ರಂದು ಜನಿಸಿದ ಮಹುವಾ ಮೊಯಿತ್ರಾ ಅವರು ಮೌಂಟ್ ಹೋಲಿಯೋಕ್ ಕಾಲೇಜಿನಿಂದ ಅರ್ಥಶಾಸ್ತ್ರ ಮತ್ತು ಗಣಿತದಲ್ಲಿ ಪದವಿ ಪಡೆದಿದ್ದಾರೆ.

ರಾಜಕಾರಣಕ್ಕೆ ಕಾಲಿಡುವ ಮುನ್ನ ಬ್ಯಾಂಕರ್‌ ಆಗಿದ್ದ ಮಹುವಾ, 2010ರಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸೇರಿದ್ದರು. 2019ರಲ್ಲಿ ಪಶ್ಚಿಮ ಬಂಗಾಳದ ಕರಿಂಪುರ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಚುನಾವಣೆಯಲ್ಲಿ ಗೆದ್ದು ಲೋಕಸಭೆ ಪ್ರವೇಶಿಸಿದ್ದರು. ಮಹುವಾ ಅವರು ಪ್ರಸ್ತುತ ಎರಡನೇ ಅವಧಿಗೆ ಸಂಸತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

65 ವರ್ಷದ ಪಿನಾಕಿ ಮೊದಲು ಸಂಗೀತಾ ಮಿಶ್ರಾ ಅವರನ್ನು ಜನವರಿ 16, 1984 ರಂದು ವಿವಾಹವಾಗಿದ್ದರು. ಇಬ್ಬರು ಮಕ್ಕಳನ್ನು ಹೊಂದಿದ್ದಾರೆ. ಪಿನಾಕಿ ಈಗ ಮಹುವಾ ಮೊಯಿತ್ರಾ ಅವರನ್ನು ಮದುವೆಯಾಗಿದ್ದಾರೆ. ಪಿನಾಕಿ ಅವರು ಬಿಜೆಡಿಯಿಂದ ಮೂರು ಬಾರಿ ಸಂಸದರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಹಿಂದೂ ಧರ್ಮ ಪ್ರಚಾರಕ ಪ್ರೇಮಾನಂದರಿಗೆ ತನ್ನ ಕಿಡ್ನಿ ದಾನ ಮಾಡಲು ಮುಂದಾದ ಮುಸ್ಲಿಂ ಯುವಕ

ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ 26 ವರ್ಷದ ಮುಸ್ಲಿಂ ಯುವಕನೊಬ್ಬ ತನ್ನ ಒಂದು...

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್...

ಲಕ್ನೋ | ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡು ಸುಳ್ಳು ಆರೋಪ ಸೃಷ್ಟಿ: ವಕೀಲನಿಗೆ ಜೀವಾವಧಿ ಶಿಕ್ಷೆ

ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡ ಮತ್ತು ಸುಳ್ಳು ಆರೋಪಗಳನ್ನು ದಾಖಲಿಸಿದ ವಕೀಲರೊಬ್ಬರಿಗೆ...

Download Eedina App Android / iOS

X