ಲಿಂಗಸುಗೂರು ತಾಲೂಕಿನ ಯರಗುಂಟಿ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ವ್ಯಕ್ತಿಯೋರ್ವನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜರುಗಿದೆ.
ಬಸನಗೌಡ ಹನುಮಗೌಡ ಮಾಲಿ ಪಾಟೀಲ್ ( 46 ) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತಪಟ್ಟ ಬಸನಗೌಡ ತೆಲೆಗೆ ಹಾಗೂ ಎಡ ಕುತ್ತಿಗೆಗೆ ಕೊಡಲಿಯಿಂದ ಹೊಡೆದು ಮಾರಣಾಂತಿಕ ಗಾಯಗೊಳಿಸಿ ಕೊಲೆ ಮಾಡಿದ್ದಾರೆ ಎಂದು ಮೃತಪಟ್ಟ ವ್ಯಕ್ತಿಯ ಹೆಂಡತಿ ಪೊಲೀಸ್ ಠಾಣೆಗೆ ದೂರು ನೀಡಿದ ಪ್ರಕಾರ ಪ್ರಕರಣದಲ್ಲಿ ದಾಖಲಾಗಿದೆ.ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸಾಗುವಳಿ ರೈತರಿಗೆ ನಿವೇಶನ ನೀಡಲು ಎಐಕೆಎಸ್ ಒತ್ತಾಯ
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಪುಟ್ಟಮಾದಯ್ಯ ,ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್, ಪಿಐ ಪುಂಡಲೀಕ ಪಟ್ಟಾತಾರ್ ಹಾಗೂ ಶ್ವಾನ ದಳದ ತಂಡದವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
