ಬರಗಾಲ ಘೋಷಿಸಿ, ಪ್ರತಿ ಕ್ಷೇತ್ರಕ್ಕೂ 1 ಕೋಟಿ ರೂ. ಅನುದಾನ ನೀಡಿ: ಬಸವರಾಜ ಬೊಮ್ಮಾಯಿ ಆಗ್ರಹ

Date:

Advertisements
  • ‘ಮಳೆ ಇಲ್ಲದೇ ಬರೀ 1 ಲಕ್ಷ ಹೆಕ್ಟೇರ್ ನಲ್ಲಿ ಮಾತ್ರ ಬಿತ್ತನೆ’
  • ‘ಅನ್ನದಾತರ ಆತ್ಮಹತ್ಯೆ ಬಗ್ಗೆ ಲಘುವಾಗಿ ಮಾತನಾಡಬೇಡಿ’

ರಾಜ್ಯದಲ್ಲಿ ಮಳೆ ಅಭಾವ ಉಂಟಾಗಿ ರೈತರು ಬಿತ್ತಿದ ಬೀಜ ಮೊಳಕೆಯಿಡೆದಿಲ್ಲ. ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ ಒಂದು ಕೋಟಿ ರೂ.ಅನುದಾನ ನೀಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ವಿಧಾನಸಭೆಯಲ್ಲಿ ಮಂಗಳವಾರ ನಿಲುವಳಿ ಸೂಚನೆ ಮೇಲೆ ಪ್ರಾಸ್ತಾವಿಕ ಮಾತನಾಡಿದ ಅವರು, “ಇದುವರೆಗೂ 7 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗಬೇಕಿತ್ತು ಆದರೆ ಮಳೆ ಇಲ್ಲದೇ ಬರೀ 1 ಲಕ್ಷ ಹೆಕ್ಟೇರ್ ನಲ್ಲಿ ಮಾತ್ರ ಬಿತ್ತನೆ ಮಾಡಲಾಗಿದೆ ಸರ್ಕಾರ ಇದನ್ನು ಬರಗಾಲ ಎಂದು ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.

“ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಹಲವೆಡೆ ಮಳೆಯ ಅಭಾವ ಉಂಟಾಗಿದೆ. ನಿಗದಿತ ಸಮಯಕ್ಕೂ ಮಳೆ ಬಂದಿಲ್ಲ. ಮಳೆ ಬಾರದ ಕಾರಣ ರೈತರು ಭಿತ್ತನೆ ಬೀಜಗಳನ್ನು ಹಾಕಿಲ್ಲ. ಜುಲೈ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿದೆ. ಆದರೆ, ಎಲ್ಲ ಕಡೆಯೂ ಮಳೆಯಾಗಿಲ್ಲ. ಬಹಳಷ್ಟು ಜನರು ಮೊದಲ ಸಾರಿ ಬಿತ್ತನೆ ಮಾಡಿದ್ದಾರೆ. ನಂತರ ಎರಡನೇ ಬಾರಿಗೂ ಬಿತ್ತನೆ ಮಾಡಿದ್ದಾರೆ. ಮೊಳಕೆ ಬಂದಿಲ್ಲ. ಕುಡಿಯುವ ನೀರಿಗಾಗಿ ಸರ್ಕಾರ ಸಿಇಒ ಗಳಿಗೆ ಕೊಟ್ಟ ಹಣ ಸಾಲುವುದಿಲ್ಲ. ಪ್ರತಿ ಕ್ಷೇತ್ರಗಳಿಗೂ ಒಂದೊಂದು ಕೋಟಿ ಅನುದಾನ ಕೊಡಬೇಕು” ಎಂದರು.

Advertisements

“ರೈತರ ಆತ್ಮಹತ್ಯೆ ಬಗ್ಗೆ ಕೃಷಿ ಸಚಿವರು ಲಘುವಾಗಿ ಮಾತನಾಡಿದ್ದಾರೆ. ಹಿಂದಿನ ವರ್ಷ ರೈತರ ಸಾವು ಇಷ್ಟಾಯಿತು, ಅಷ್ಟಾಯ್ತು ಅನ್ನುವುದು ಸರಿಯಲ್ಲ. ಅಂಕಿ ಅಂಶಗಳ ಮೂಲಕ ರೈತರ ಆತ್ಮಹತ್ಯೆ ಬಗ್ಗೆ ಮಾತನಾಡುವುದು ಸರೀನಾ? ನಿರ್ಲಕ್ಷ್ಯವಾಗಿ, ಬೇಜವಬ್ದಾರಿಯ ಹೇಳಿಕೆ ಸರಿಯಲ್ಲ. ಇದರ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ಕೊಡುವಂತೆ” ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X