ಆರ್‌ಸಿಬಿ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ಸಂಸ್ಥೆ ಮತ್ತು ಕಾರ್ಯಕ್ರಮ ಆಯೋಜಕರಾದ ಡಿಎನ್‌ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳನ್ನು ಪೊಲೀಸರು ಬಂದಿಸಿದ್ದಾರೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಟರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿತ್ತು.