ಬೆಂಗಳೂರು | ಬೀದಿನಾಯಿಗಳ ಗಣತಿಗೆ ಮೊದಲ ಬಾರಿಗೆ ಡ್ರೋನ್ ಬಳಕೆ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೀದಿನಾಯಿಗಳ ಗಣತಿಗೆ ಡ್ರೋನ್ ಬಳಸಲು ಮುಂದಾಗಿದೆ.

ಕಳೆದ ನಾಲ್ಕು ವರ್ಷಗಳ ಬಳಿಕ ನಗರದಲ್ಲಿರುವ ಬೀದಿನಾಯಿಗಳ ಸಮೀಕ್ಷೆಯನ್ನು ಬಿಬಿಎಂಪಿ ಪಶುಪಾಲನಾ ವಿಭಾಗ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಸಹಯೋಗದಲ್ಲಿ ನಡೆಸುತ್ತಿದೆ. ಈಗಾಗಲೇ ಬೀದಿನಾಯಿಗಳ ಗಣತಿ ಆರಂಭವಾಗಿದ್ದು, ಪ್ರಮುಖ ಸ್ಥಳಗಳಲ್ಲಿ ಡ್ರೋನ್ ಬಳಸಿ ಗಣತಿ ಮಾಡಲಾಗುತ್ತಿದೆ.

ಬಿಬಿಎಂಪಿ ವ್ಯಾಪ್ತಿಯ 840 ಚದರ ಕಿಲೋ ಮೀಟರ್‌ ಅನ್ನು ತಲಾ 0.5 ಚ.ಕಿ.ಮೀ ವ್ಯಾಪ್ತಿಯಂತೆ 6,850 ಮೈಕ್ರೋ ವಲಯಗಳಾಗಿ ವಿಂಗಡಿಸಿಕೊಂಡು ಪ್ರತಿ ದಿನ 0.5 ಕಿ.ಮೀ ವ್ಯಾಪ್ತಿಯಲ್ಲಿ ತಲಾ ಒಂದು ತಂಡ ಬೈಕ್‌ನಲ್ಲಿ ಗಣತಿ ನಡೆಸುತ್ತಿದ್ದಾರೆ. ಆದರೆ, ಕೆರೆ ಅಂಗಳದಲ್ಲಿ ಬೈಕ್‌ ಸಂಚಾರ ಮಾಡಲು ಸಾಧ್ಯವಿಲ್ಲ. ಹಾಗಾಗಿ, ಡ್ರೋನ್‌ ಹಾರಾಟ ನಡೆಸಲಿದೆ.

Advertisements

ಗಣತಿ ಮಾಡುವ ಸಿಬ್ಬಂದಿ ನೂರಾರು ಎಕರೆ ಪ್ರದೇಶದಲ್ಲಿ ಓಡಾಟ ಮಾಡಿ ಗಣತಿ ನಡೆಸುವುದು ಕಷ್ಟವಾಗಿದೆ. ಹಾಗಾಗಿ, ಪ್ರಮುಖವಾಗಿ ಸಾರಕ್ಕಿ ಕೆರೆ, ಎಲೆಮಲ್ಲಪ್ಪ ಚೆಟ್ಟಿಕೆರೆ ಹಾಗೂ ಹುಳಿಮಾವು ಕೆರೆಯಲ್ಲಿ ಡ್ರೋನ್‌ ಬಳಕೆ ಮಾಡಲಾಗುತ್ತಿದೆ. ಡ್ರೋನ್‌ಗೆ ಯಾವುದೇ ವೆಚ್ಚವಿಲ್ಲ. ಉಚಿತವಾಗಿ ಗಣತಿ ಪ್ರಕ್ರಿಯೆ ಮಾಡುವುದಕ್ಕೆ ಡ್ರೋನ್‌ ಸ್ಟಾರ್ಟ್‌ಅಪ್‌ ಕಂಪನಿಗಳು ಮುಂದೆ ಬಂದಿವೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೆತ್ತ ತಂದೆ-ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿದ ಮಗ

ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಬೀದಿನಾಯಿಗಳ ಗಣತಿಗೆ ಡ್ರೋನ್‌ ಬಳಕೆ ಮಾಡಲಾಗುತ್ತಿದೆ. ಮೊದಲಿಗೆ ಕೆರೆಯ ಅಂಗಳದಲ್ಲಿ ಡ್ರೋನ್‌ ಬಳಕೆ ಮಾಡಲಾಗುತ್ತಿದೆ. ಇಲ್ಲಿ ಗಣತಿ ಮಾಡುವುದು ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ಮೈದಾನ, ಖಾಲಿ ನಿವೇಶನ, ಪಾರ್ಕ್‌ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಬಳಕೆ ಮಾಡಲಾಗುವುದು. ಇದರಿಂದ ಶ್ರಮ ಮತ್ತು ಸಮಯ ಉಳಿತಾಯವಾಗುತ್ತದೆ. ತ್ವರಿತಗತಿಯಲ್ಲಿ ಗಣತಿ ಕಾರ್ಯ ಮುಗಿಸಬಹುದು ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಡಾ. ತ್ರಿಲೋಕಚಂದ್ರ ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X