ಕ್ರೂಸರ್ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಧಾರವಾಡದ ಕಲಘಟಗಿ ತಾಲೂಕಿನ ಗಲಗಿನಗಟ್ಟಿ ಕ್ರಾಸ್‌ನಲ್ಲಿ ನಡೆದಿದೆ.
ಕುಂದಗೋಳ ತಾಲೂಕಿನ ಯಲಿವಾಳ ಗ್ರಾಮದ ಸಾತ್ವಿಕಗೌಡ ಮುದಿಗೌಡ್ರ (5) ಸ್ಥಳದಲ್ಲೇ ಮೃತಪಟ್ಟಿದ್ದು, ದೇವಕ್ಕ ಮುದಿಗೌಡ್ರ (57) ಚಿಕಿತ್ಸೆಗೆ ಸ್ಪಂದಿಸದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಪಾಲ್ಗೊಂಡು ವಾಪಸ್ಸಾಗುವಾಗ ಈ ಘಟನೆ ನಡೆದಿದೆ. ಇನ್ನು ವಾಹನದಲ್ಲಿದ್ದ ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿದ್ದಾರೆ.
ಈ ಬಗ್ಗೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಧಾರವಾಡ | ಕುಡಿದ ಅಮಲಿನಲ್ಲಿ ವ್ಯಕ್ತಿ ಆತ್ಮಹತ್ಯೆ