ಉಡುಪಿ | ಚಕ್ರವರ್ತಿ ಸೂಲಿಬೆಲೆ ಭಾಷಣಕ್ಕೆ ಅವಕಾಶ ನೀಡಬಾರದೆಂದು ಪೊಲೀಸ್ ಉಪನಿರೀಕ್ಷರಿಗೆ ಮನವಿ

Date:

Advertisements

ಕೋಮು ದ್ವೇಷದ ಭಾಷಣ ಮಾಡಿ ರಾಜ್ಯದ ಸೌಹಾರ್ದ ಪರಂಪರೆಗೆ ಧಕ್ಕೆ ತರುತ್ತಿರುವ ಚಕ್ರವರ್ತಿ ಸೂಲಿಬೆಲೆ ಅವರು ಕುಂದಾಪುರಕ್ಕೆ ಬಂದು ಭಾಷಣ ಮಾಡಲು ಅವಕಾಶ ನೀಡಬಾರದು ಎಂದು ಕುಂದಾಪುರ ಪೊಲೀಸ್ ಉಪನಿರೀಕ್ಷರಿಗೆ ಕರ್ನಾಟಕ ಸೌಹಾರ್ದ ಸಮಿತಿ ಮನವಿ ಮಾಡಿದೆ.

ಹಿಂದುತ್ವವಾದಿ ಕೋಮು ಗುಂಪಾದ ನಮೋ ಬ್ರಿಗೇಡ್ ಜುಲೈ 21ರಿಂದ ಮೂರು ದಿನಗಳ ಕಾಲ ಕಾರ್ಯಕ್ರಮ ಆಯೋಜಿಸಿದೆ. ಕಾರ್ಯಕ್ರಮದಲ್ಲಿ ಸೂಲಿಬೆಲೆ, ‘ಇನ್ನೂ ಮಲಗಿದರೆ, ಏಳುವಾಗ ಭಾರತವಿರುವುದಿಲ್ಲ’ ಎಂಬ ವಿಚಾರದ ಕುರಿತು ಮಾತನಾಡಲಿದ್ದಾರೆ. ಅವರು ಕೋಮು ದ್ವೇಷದ ಭಾಷಣ ಮಾಡಿ, ಸೌಹಾರ್ದತೆ ಕದಡಲು ಪ್ರಚೋದನೆ ನೀಡುವ ಸಾಧ್ಯತೆ ಇರುವುದರಿಂದ ಅವರಿಗೆ ಕುಂದಾಪುರ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದೆ.

ಈ ಹಿಂದೆ ಸೂಲಿಬೆಲೆ ಅವರ ಸ್ವಂತ ಜಿಲ್ಲೆಯಾದ ಉತ್ತರ ಕನ್ನಡಕ್ಕೆ ಪ್ರವೇಶಿಸದಂತೆ ಅಲ್ಲಿನ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ಅಂತೆಯೇ ಕುಂದಾಪುರಕ್ಕೂ ಪ್ರವೇಶಿಸದಂತೆ ಆದೇಶಿಸಬೇಕು ಎಂದು ಸೌಹಾರ್ದ ಸಮಿತಿ ಆಗ್ರಹಿಸಿದೆ.

Advertisements

“ಸೂಲಿಬೆಲೆಯವರು ನೇರವಾಗಿ ಹೇಳದಿದ್ದರೂ, ಒಂದು ರಾಜಕೀಯ ಪಕ್ಷದ ಸಕ್ರಿಯ ಕಾರ್ಯಕರ್ತನಂತೆ ಕೆಲಸ ಮಾಡುತ್ತಾರೆ. ಪ್ರಜಾಪ್ರಭುತ್ವ ದೇಶದಲ್ಲಿ ಎಲ್ಲರಿಗೂ ಅವರವರು ನಂಬಿದ ರಾಜಕೀಯ ಪಕ್ಷದ ಧೋರಣೆಗಳನ್ನು ಪ್ರಚಾರ ಮಾಡುವ ಹಕ್ಕಿದೆ. ಆದರೆ ಯುವ ಮನಸ್ಸುಗಳೇ ಹೆಚ್ಚಿರುವ ಕಾಲೇಜಿನ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಿರುವುದು ಆತಂಕ ಉಂಟುಮಾಡಿದೆ. ಅದೇ ಕಾಲೇಜಿನಲ್ಲಿ ಈ ಹಿಂದೆ ಮತೀಯ ದ್ವೇಷದ ವಿವಾದಗಳನ್ನು ಸೃಷ್ಟಿಸಿ, ಹಲವಾರು ಹೆಣ್ಣು ಮಕ್ಕಳು ತಮ್ಮ ವ್ಯಾಸಂಗವನ್ನು ನಿಲ್ಲಿಸುವಂತಾಗಿತ್ತು” ಎಂದು ಸಮಿತಿಯ ಸಂಚಾಲಕ ರಾಜೇಶ್ ವಡೇರ ತಿಳಿಸಿದ್ದಾರೆ.

ಸಾಮಾಜಿಕ ಸಹಬಾಳ್ವೆಯ ಪರಂಪರೆಗೆ ಧಕ್ಕೆ ತರುವ ಕಾರ್ಯಕ್ರಮಗಳನ್ನು ಶಿಕ್ಷಣ ಸಂಸ್ಥೆಗಳಲ್ಲಿ ನಡೆಸಲು ಅವಕಾಶ ನೀಡಬಾರದು ಎಂದು ಕೋರುತ್ತೇವೆ ಅವರು ಒತ್ತಾಯಿಸಿದ್ದಾರೆ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

5 COMMENTS

  1. You dumb writer do you know the impact of his speach. If you want to know go and visit yuva brigade page on twitter.

    And he is not creating terorist community. Please have some common sense before what he is speaking. And his speach about just the people who cought at Bangalore as suspected Terorist.

  2. ನಿಮ್ಮ ವಿರೋಧಿಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಗೌರವ ಇಲ್ಲ ಅಂದ್ರೆ ನೀವು ಯಾವ ರೀತಿಯ ಸಮಾಜ ನಿರ್ಮಾಣಕ್ಕೆ ಹೊರಟಿದ್ದೀರಾ

  3. ಸೌಹಾರ್ದ ಸಮಿತಿಯವರು ಇನ್ನೂ ನಿದ್ದೆಯಲ್ಲಿದ್ದಾರೆ. ಮೊದಲೆ ಹಿಂದೂಗಳು ಜೀವಂತವಿದ್ದರೂ ಸತ್ತ ಹೆಣದಂತೆ ತಿರುಗುತಿದ್ದರೆ ಇದೊಂದು ಸಮಿತಿಯವರು ಬಂದು ‘ಕಬಾಬ್ ಮೇ ಹಡ್ಡಿ’ ಆಗುತ್ತಿದ್ದಾರಲ್ಲ. ಹಿಂದೂ ವಿರೋಧಿಗಳನ್ನು ಎದುರಿಸುವುದನ್ನು ಬಿಟ್ಟು ಹಿಂದೂಗಳನ್ನೆ ಹಿಂದೂ ಹೆಸರಿನಲ್ಲಿರೋರು ಕೆಣಕುವುದು ಅದೆಷ್ಟು ಸರಿ !!!???

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X