ಕಾಲ್ತುಳಿತ | ಜವಾಬ್ದಾರಿ ನಿರ್ವಹಿಸಿಲ್ಲದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ: ಸಿಎಂ ಸಿದ್ದರಾಮಯ್ಯ

Date:

Advertisements

ಕಾಲ್ತುಳಿತ ಪ್ರಕರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ರಾಜಕೀಯ ಮಾಡುತ್ತಿದೆ. ಈ ಪ್ರಕರಣದಲ್ಲಿ ನಾನು ರಾಜಕೀಯ ಮಾಡಲು ಹೋಗುವುದಿಲ್ಲ. ಮೇಲ್ನೋಟಕ್ಕೆ ಜವಾಬ್ದಾರಿ ನಿರ್ವಹಿಸಿಲ್ಲದವರ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆದ ಮಾಜಿ ಮುಖ್ಯಮಂತ್ರಿ ರವರದ ಡಿ ದೇವರಾಜ ಅರಸುರವರ 43ನೇ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

“ರಾಜ್ಯ ಕಂಡಂತಹ ಮುತ್ಸದ್ದಿ ರಾಜಕಾರಣಿಗಳಲ್ಲಿ ಅರಸು ಒಬ್ಬರು. ಬಡವರು, ಅನ್ಯಾಯ, ತುಳಿತಕ್ಕೊಳಗಾದವರಿಗೆ, ಅವಕಾಶಗಳಿಂದ ವಂಚಿತರಾದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದವರು. ರಾಜಕೀಯದಲ್ಲಿ ಅವಕಾಶ ಸಿಗದ ಜನಾಂಗದವರಿಗೆ ಪ್ರಾತಿನಿಧ್ಯ ದೊರಕಿಸಿಕೊಟ್ಟರು. ಅವರಿಂದಾಗಿ ಬಡತನ ನಿರ್ಮೂಲನಾ ಕಾರ್ಯಕ್ರಮ ಕರ್ನಾಟಕದಲ್ಲಿ ಅಚ್ಚುಕಟ್ಟಾಗಿ ನೆರವೇರಿತು. ರಾಜಕೀಯದಲ್ಲಿ ಅವಕಾಶ ಸಿಗದ ಜನಾಂಗದವರಿಗೆ ಪ್ರಾತಿನಿಧ್ಯ ದೊರಕಿಸಿಕೊಟ್ಟರು. ಹಾವನೂರು ಆಯೋಗವನ್ನು ರಚನೆ ಮಾಡಿ, ಅದರ ವರದಿ ಪಡೆದು ಜಾರಿ ಮಾಡಿ ಉದ್ಯೋಗದಲ್ಲಿ ಮೀಸಲಾತಿ ಕೊಟ್ಟರು” ಎಂದರು.

Advertisements

“ಸಾಮಾಜಿಕ ನ್ಯಾಯದಲ್ಲಿ ಬಲವಾದ ನಂಬಿಕೆ ಇಟ್ಟ ದೇವರಾಜ ಅರಸು ಅವರು ನಿರ್ಗತಿಕರು, ಭೂ ರಹಿತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದರು. ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿ ಮಾಡಿ ಭೂರಹಿತರನ್ನು ಭೂ ಒಡೆಯರಾಗಿಸಿದರು. ಜೀತ ಪದ್ಧತಿಯನ್ನು ರದ್ದು ಮಾಡಿ, ಮಲ ಹೊರುವ ಪದ್ಧತಿಯನ್ನು ನಿಲ್ಲಿಸಿದರು. ಅವರ ಕಾರ್ಯಕ್ರಮಗಳ ಉದ್ದನೆಯ ಪಟ್ಟಿಯೇ ಇದೆ. ದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು” ಎಂದು ಹೇಳಿದರು.

ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆಯಿದ್ದ ರಾಜಕಾರಣಿ

“ಮೈಸೂರು ರಾಜ್ಯಕ್ಕೆ 1973 ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದ ಮುತ್ಸದ್ದಿ , ಜನಪರವಾದ ಕಾಳಜಿ, ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆಯಿರುವ ರಾಜಕಾರಣಿಯನ್ನು ಸರ್ಕಾರ ಸ್ಮರಿಸಿದೆ. ಅವರು ಮಾಡಿರುವ ಕೆಲಸಗಳು ನಮಗೆ ಸ್ಫೂರ್ತಿ ಮತ್ತು ಪ್ರೇರಣೆ. ನಮ್ಮ ಸರ್ಕಾರ ಅವರಿಂದ ಸ್ಪೂರ್ತಿ ಪಡೆದು ಸಾಮಾಜಿಕ ನ್ಯಾಯಾದೆಡೆಗೆ ದೃಢವಾದ ಹೆಜ್ಜೆಗಳನ್ನು ಇರಿಸಿದ್ದೇವೆ. ಅದೇ ನಾವು ಅವರಿಗೆ ಸಲ್ಲಿಸುವ ಗೌರವ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X