ಉತ್ತರ ಪ್ರದೇಶದ ಲಕ್ನೋ ಮೆಟ್ರೋ ನಿಲ್ದಾಣದ ಬಳಿ ಎರಡೂವರೆ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಎನ್‌ಕೌಂಟರ್ ಮಾಡಲಾಗಿದೆ. ಆರೋಪಿಯನ್ನು 26 ವರ್ಷದ ದೀಪಕ್ ವರ್ಮಾ ಎಂದು ಗುರುತಿಸಲಾಗಿದೆ.
ಈ ಹಿಂದೆ ಆರೋಪಿ ದೀಪಕ್ ವರ್ಮಾ ಬಗ್ಗೆ ಸುಳಿವು ನೀಡಿದರೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದರು. ಶುಕ್ರವಾರ ಮುಂಜಾನೆ ಅಲಂಬಾಗ್ ಪ್ರದೇಶದಲ್ಲಿ ಪತ್ತೆಯಾದ ಆರೋಪಿಯ ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ(ಕೇಂದ್ರ ವಲಯ) ಆಶಿಶ್ ಶ್ರೀವಾಸ್ತವ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಲೈಂಗಿಕ ದೌರ್ಜನ್ಯ ಆರೋಪಿ ‘ಎನ್‌ಕೌಂಟರ್’; ಘಟನೆ ಬಗ್ಗೆ ಸಿಐಡಿ ತನಿಖೆ
ಲಕ್ನೋ ಮೆಟ್ರೋ ನಿಲ್ದಾಣದ ಅಡಿಯಲ್ಲಿ ವಾಸಿಸುವ ದಂಪತಿಗಳು ಗುರುವಾರ ತಮ್ಮ ಮಗಳ ಮೇಲೆ ಅತ್ಯಾಚಾರ ನಡೆದಿದೆ ಎಂದು ಅಲಂಬಾಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆಯ ತನಿಖೆಗಾಗಿ ಪೊಲೀಸರು ಐದು ತಂಡಗಳನ್ನು ರಚಿಸಿದ್ದರು. ಜೊತೆಗೆ ಆರೋಪಿಯ ಸುಳಿವು ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದರು.
ಮೆಟ್ರೋ ನಿಲ್ದಾಣದಲ್ಲಿ ಅಳವಡಿಸಲಾದ ಸಿಸಿಟಿವಿ ಪರಿಶೀಲಿಸಲಾಗಿದ್ದು ಗುರುವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬಿಳಿ ಸ್ಕೂಟರ್‌ನಲ್ಲಿ ಒಬ್ಬ ವ್ಯಕ್ತಿ ಮಗುವನ್ನು ಬಲವಂತವಾಗಿ ಮೆಟ್ರೋ ನಿಲ್ದಾಣದ ಲಿಫ್ಟ್ ಹಿಂದೆ ಕರೆದುಕೊಂಡು ಹೋಗಿರುವುದು ಕಂಡು ಬಂದಿದೆ ಎಂದು ವರದಿಯಾಗಿದೆ.
“ನಾವು ಸ್ಕೂಟರ್ ನಂಬರ್ ಪರಿಶೀಲಿಸಿದೆವು. ಈ ವೇಳೆ ಆರೋಪಿಯ ಐಶ್‌ಬಾಗ್ ಪ್ರದೇಶದ ನಿವಾಸಿ ದೀಪಕ್ ವರ್ಮಾ ಎಂದು ತಿಳಿದುಬಂದಿದೆ. ಗುರುವಾರ ತಡರಾತ್ರಿ, ಆರೋಪಿ ಪರಾರಿಯಾಗುತ್ತಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಒಂದು ತಂಡ ಸ್ಥಳಕ್ಕೆ ತಲುಪಿ ಆತನನ್ನು ತಡೆಯುವ ಪ್ರಯತ್ನ ಮಾಡಿದೆ. ಆದರೆ ಆರೋಪಿ ಗುಂಡು ಹಾರಿಸಿದ್ದಾನೆ. ಈ ವೇಳೆ ಎನ್‌ಕೌಂಟರ್ ನಡೆದಿದ್ದು, ಗುಂಡಿನ ದಾಳಿಯಲ್ಲಿ ವರ್ಮಾ ಗಂಭೀರವಾಗಿ ಗಾಯಗೊಂಡಿದ್ದನು. ಲೋಕಬಂಧು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾನೆ” ಎಂದು ಪೊಲೀಸ್ ಅಧಿಕಾರಿ ಆಶಿಶ್ ಶ್ರೀವಾಸ್ತವ ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ | ಅತ್ಯಾಚಾರಕ್ಕೊಳಗಾದ 13 ವರ್ಷದ ಬಾಲಕಿ ಗರ್ಭಿಣಿ : ಆಸ್ಪತ್ರೆಯಲ್ಲಿ ಸಾವು
ಆರೋಪಿ ನೀರು ಮಾರಾಟ ಮಾಡುವ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಇನ್ನು ಸದ್ಯ ಬಾಲಕಿ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
2016ರಿಂದ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಅಧಿಕವಾಗಿದೆ. ಅದರಲ್ಲಿಯೂ ಪ್ರಮುಖವಾಗಿ ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಗರ್ಭಪಾತ, ಅತ್ಯಾಚಾರ-ಕೊಲೆ – ಇಂತಹ ಅಪರಾಧಗಳು ಹೆಚ್ಚಾಗುತ್ತಿದೆ. ಎನ್‌ಜಿಒ ಸಿಆರ್‌ವೈ ವರದಿಯ ಪ್ರಕಾರ ದೇಶದಲ್ಲಿ 2016ರಿಂದ 2022ರ ನಡುವೆ ಅಪ್ರಾಪ್ತರ ಮೇಲೆ ಅತ್ಯಾಚಾರ ಪ್ರಕರಣಗಳು ಸುಮಾರು ಶೇಕಡ 96ರಷ್ಟು ಏರಿಕೆಯಾಗಿದೆ. 2020 ಹೊರತುಪಡಿಸಿ 2016ರಿಂದ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. 2021ರಿಂದ 2022ರ ನಡುವೆ ಶೇಕಡ 6.9ರಷ್ಟು ಪ್ರಕರಣಗಳು ಅಧಿಕವಾಗಿದೆ.
