ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತ ದುರಂತ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ) ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.
ಕಾಲ್ತುಳಿತದಲ್ಲಾದ ದುರಂತದಿಂದ ಸರ್ಕಾರ, ಸಚಿವರ ಮೇಲಿನ ಜನರ ಆಕ್ರೋಶದ ಹಾದಿ ತಪ್ಪಿಸಲು ನಮ್ಮ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ) ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ.
ಆರ್‌ಸಿಬಿ ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆಯನ್ನು ವಿಧಾನಸೌಧದ ಎದುರು ನಡೆಸುವಂತೆ ಕರೆ ಕೊಟ್ಟಿದ್ದೇ ಸರ್ಕಾರ ಎಂದು ರಿಟ್ ಅರ್ಜಿಯಲ್ಲಿ ಕೆಎಸ್ಸಿಎ ಉಲ್ಲೇಖಿಸಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವರು ವಿಧಾನಸೌಧ ಗ್ರ್ಯಾಂಡ್ ಸ್ಟೆಪ್ಸ್ ವೇದಿಕೆಯಲ್ಲಿ ಆಟಗಾರರನ್ನು ಸನ್ಮಾನಿಸಿದ್ದಾರೆ. ಈಗ ಕೆಎಸ್ಸಿಎ ಆಡಳಿತ ಮಂಡಳಿಯವರನ್ನು ಬಂಧಿಸಲು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಮಾಧ್ಯಮಗಳ ಮೂಲಕವೇ ಸಿಎಂ ಬಂಧಿಸುವ ಆದೇಶ ನೀಡಿದ್ದಾರೆ. ಪೊಲೀಸರನ್ನು ಅಮಾನತುಗೊಳಿಸುವ ಮೂಲಕ ಲೋಪ ಒಪ್ಪಿಕೊಂಡಿದ್ದಾರೆ. ಈಗ ಕೆಎಸ್ಸಿಎ ಮೇಲೆ ಹೊಣೆ ಹೊರಿಸಲು ಯತ್ನಿಸುತ್ತಿದ್ದಾರೆ” ಎಂದು ರಿಟ್ ಅರ್ಜಿಯಲ್ಲಿ ದೂರಲಾಗಿದೆ.