“ವಾಯು ಮಾಲಿನ್ಯ ಮುಕ್ತ ಪರಿಸರ ನಿರ್ಮಾಣ ಆಗಬೇಕು. ಆಗ ಮಾತ್ರ ಈ ವಿಶ್ವ ಪರಿಸರ ದಿನಾಚರಣೆಗೆ ಒಂದು ಅರ್ಥ ಬರುತ್ತದೆ” ಎಂದು ಗದಗ ವಿಭಾಗೀಯ ಅಂಚೆ ಅಧೀಕ್ಷಕ ರಮೇಶ ಮಡಿವಾಳರ ಹೇಳಿದರು.
ಗದಗ ಪಟ್ಟಣದ ಪ್ರಧಾನ ಅಂಚೆ ಕಚೇರಿ ಹಾಗೂ ವಿಭಾಗೀಯ ಕಚೇರಿ ಆಶ್ರಯದಲ್ಲಿ ಪ್ರಧಾನ ಅಂಚೆ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಸಿ ನೆಟ್ಟು ಉದ್ಘಾಟಿಸಿ ಮಾತನಾಡಿದರು.
“ಪ್ರತಿಯೊಬ್ಬ ನಾಗರಿಕರು ಮನೆಗೊಂದು ಗಿಡ ನೆಟ್ಟು ಅದನ್ನು ಪೋಷಿಸಿ, ಅದನ್ನು ಬೆಳೆಸಿದಾಗ ಮಾತ್ರ ನಮ್ಮ ಪರಿಸರ ಸ್ವಚ್ಛವಾಗಿ ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರವನ್ನು ಕೊಡಲಿಕ್ಕೆ ಸಾಧ್ಯವಾಗಲಿದೆ” ಎಂದು ಹೇಳಿದರು.
“ಪರಿಸರವನ್ನು ಹಸಿರು ಮತ್ತು ಉತ್ತಮಗೊಳಿಸಲು ತಳಮಟ್ಟದಲ್ಲಿ ಕೆಲಸ ಮಾಡುವ ದಿಸೆಯಲ್ಲಿ ಪ್ರತಿಯೊಬ್ಬರು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಅಷ್ಟೇ, ಅಲ್ಲದೆ, ಪ್ರತಿಯೊಬ್ಬ ನೌಕರರು ನಿಮ್ಮ ಕಚೇರಿ ಹಾಗೂ ಸುತ್ತಮುತ್ತ ಪರಿಸರವನ್ನು ಸ್ವಚ್ಛ ಮತ್ತು ಸುಂದರವಾಗಿ ಇರಿಸುವ ಸಲುವಾಗಿ ಪ್ರತಿ ವಾರಕ್ಕೆ ಎರಡು ದಿನ ಶ್ರಮದಾನ ಮಾಡಬೇಕು” ಎಂದರು.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಮಾವ, ಅಳಿಯನ ಗಲಾಟೆ ಕೊಲೆಯಲ್ಲಿ ಅಂತ್ಯ
ಗದಗ ಉಪ ವಿಭಾಗದ ಸಹಾಯಕ ಅಂಚೆ ಅಧೀಕ್ಷಕ ಶ್ರೀಕಾಂತ ಜಾದವ, ವಿಭಾಗೀಯ ಸಹಾಯಕ ಅಂಚೆ ಅಧೀಕ್ಷಕ ವಿ.ಸುನೀಲಕುಮಾರ, ರೋಣ ಉಪ ಅಂಚೆ ನಿರೀಕ್ಷಕ ವೆಂಕಟೇಶರಡ್ಡಿ ಕೊಳ್ಳಿ, ಪ್ರಧಾನ ಅಂಚೆ ಪಾಲಕರಾದ ಮಂಜುಳಾ ದೇಗಿನಾಳ, ಸಹಾಯಕ ಪ್ರಧಾನ ಅಂಚೆ ಪಾಲಕರಾದ ದೊಡ್ಡಪ್ಪ ಇಟಗಿ, ಶ್ರೀಕಾಂತ ತೆರದಾಳ, ಡಿ.ಜಿ.ಮ್ಯಾಗೇರಿ, ಶರಣಪ್ಪ ನಾಯ್ಕರ, ವೆಂಕಟೇಶ ಆಕಳವಾಡಿ, ಮನೋಹರ ಕಡಿಯವರ, ಸಿದ್ಧಲಿಂಗೇಶ ಯಂಡಿಗೇರಿ, ಉಮೇಶ ಸಂದಿಮನಿ, ವೆಂಕಪ್ಪ ಗುಗ್ಗರಿ ಮತ್ತಿತರರು ಉಪಸ್ಥಿತರಿದ್ದರು.