ಛತ್ತೀಸ್‌ಘಡ | ನಕಲಿ ಎಸ್‌ಸಿ, ಎಸ್‌ಟಿ ಪ್ರಮಾಣ ಪತ್ರಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬೆತ್ತಲೆ ಪ್ರತಿಭಟನೆ  

Date:

Advertisements

ನಕಲಿ ಜಾತಿ ಪ್ರಮಾಣ ಪತ್ರವನ್ನು ಬಳಸಿಕೊಂಡು ಅನರ್ಹರು ಮೀಸಲಾತಿ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಸೇರಿದ ಯುವಕರು ಛತ್ತೀಸ್‌ಘಡ ವಿಧಾನಸಭೆಯ ಮುಂಗಾರು ಅಧಿವೇಶನದ ಮೊದಲ ದಿನವಾದ ಮಂಗಳವಾರ ವಿಧಾನಸೌಧದ ಬಳಿ ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು.

ಸುಮಾರು 20 ಯುವಕರು ಭಿತ್ತಿಪತ್ರಗಳನ್ನು ಹಿಡಿದುಕೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ರಾಜ್ಯ ವಿಧಾನಸಭೆ ಭವನದ ಕಡೆಗೆ ಬೆತ್ತಲೆಯಾಗಿ ಸಾಗಿದರು. ಈ ಸಂದರ್ಭದಲ್ಲಿ ಪೊಲೀಸರು ಅವರನ್ನು ಮುಂದೆ ಹೋಗದಂತೆ ಬೆನ್ನಟ್ಟಿ ತಡೆದು ತಮ್ಮ ವಶಕ್ಕೆ ಪಡೆದರು.

ಛತ್ತೀಸ್‌ಘಡ ವಿಧಾನಸಭೆಯ ಮುಂದೆ ನಡೆದ ನಗ್ನ ಪ್ರದರ್ಶನ ನಡೆಸಿದ ಪ್ರತಿಭಟನಾಕಾರರು, ನಕಲಿ ಜಾತಿ ಪ್ರಮಾಣಪತ್ರ ಹೊಂದಿರುವ ವ್ಯಕ್ತಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

Advertisements

ರಾಜ್ಯ ರಚನೆಯಾದಾಗಿನಿಂದ ಸರ್ಕಾರಿ ಉದ್ಯೋಗಗಳು ಮತ್ತು ರಾಜಕೀಯ ಸ್ಥಾನಗಳಲ್ಲಿ ಎಸ್‌ಟಿ ಎಸ್‌ಟಿಗೆ ಮೀಸಲಾದ ಕೋಟಾಗಳನ್ನು ದುರ್ಬಳಕೆ ಮಾಡಿಕೊಂಡಿರುವ ಮೀಸಲಾತಿ ವರ್ಗಗಳಿಗೆ ಸೇರದ ವ್ಯಕ್ತಿಗಳ ನಿದರ್ಶನಗಳನ್ನು ಹಲವಾರು ಸರ್ಕಾರಿ ಇಲಾಖೆಗಳು ವರದಿ ಮಾಡಿವೆ. ಈ ಬಗ್ಗೆ ಸ್ಪಂದಿಸಿದ ರಾಜ್ಯ ಸರ್ಕಾರವು ಉನ್ನತ ಮಟ್ಟದ ಜಾತಿ ಪರಿಶೀಲನಾ ಸಮಿತಿ ರಚಿಸಿತ್ತು.

ಈ ಸುದ್ದಿ ಓದಿದ್ದೀರಾ? ಕನ್ನಡ ಚಿತ್ರರಂಗದ ಸದ್ಯದ ದೊಡ್ಡ ಸಮಸ್ಯೆ ಯಾವುದು? ರಾಜ್ ಬಿ ಶೆಟ್ಟಿ ಹೇಳಿದ್ದು ನಿಜವೇ?

ಸಮಿತಿ ತನಿಖೆ ಕೈಗೊಂಡು 2000 ರಿಂದ 2020 ರವರೆಗಿನ ಅವಧಿಯ 758 ಪ್ರಕರಣಗಳಲ್ಲಿ 267 ಜಾತಿ ಪ್ರಮಾಣ ಪತ್ರಗಳ ವಂಚನೆ ಪ್ರಕರಣಗಳನ್ನು ದಾಖಲಿಸಿದೆ. ಇದರ ಪರಿಣಾಮವಾಗಿ, ನಕಲಿ ಪ್ರಮಾಣ ಪತ್ರಗಳನ್ನು ಹೊಂದಿರುವ ಅಧಿಕಾರಿಗಳು ಮತ್ತು ನೌಕರರನ್ನು ನಿರ್ಣಾಯಕ ಸ್ಥಾನಗಳಿಂದ ತಕ್ಷಣವೇ ತೆಗೆದುಹಾಕಲು ಸರ್ಕಾರವು ಆದೇಶವನ್ನು ಹೊರಡಿಸಿತು. ಈ ಆದೇಶಗಳ ಅಸಮರ್ಪಕ ಅನುಷ್ಠಾನದ ಬಗ್ಗೆ ಎಸ್‌ಟಿ ಎಸ್‌ಟಿ ಸಮುದಾಯದ ಸಂಘರ್ಷ ಸಮಿತಿಯ ವಕ್ತಾರ ವಿನಯ್‌ ಕೌಶಲ್ ನಿರಾಶೆ ವ್ಯಕ್ತಪಡಿಸಿದ್ದಾರೆ.

ನಕಲಿ ಪ್ರಮಾಣ ಪತ್ರ ಪಡೆದುಕೊಂಡ ಕೆಲವರು ನಿವೃತ್ತರಾದರು ಮತ್ತು ಒಂದಷ್ಟು ಜನ ಸಮಿತಿಯ ವರದಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದರು. ಹೆಚ್ಚುವರಿಯಾಗಿ, ಸರ್ಕಾರದ ನಿರ್ದೇಶನದ ಹೊರತಾಗಿಯೂ ಅನೇಕ ನಕಲಿ ಪ್ರಮಾಣ ಪತ್ರ ಹೊಂದಿರುವವರು ಬಡ್ತಿಗಳನ್ನು ಪಡೆಯಲು ಮತ್ತು ಮಹತ್ವದ ಸ್ಥಾನಗಳನ್ನು ನಿರ್ವಹಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವಿನಯ್‌ ಕೌಶಲ್ ಬೇಸರ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X