ಪ್ರತಿ ಶಾಸಕ ಜನರ ಧ್ವನಿಯಾದಾಗ ಮಾತ್ರ ಪರಿಣಾಮಕಾರಿ ಕೆಲಸ ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

ಪ್ರತಿ ಶಾಸಕ ಜನರ ಸಮಸ್ಯೆಗಳು, ಜನರ ಧ್ವನಿಯಾಗಿ ಮಾತನಾಡುವುದು ಮುಖ್ಯ. ಸದನದ ಇತರರಿಗೆ ಅವರ ಭಾಷಣ, ವಿಚಾರಗಳು ಮಾದರಿಯಾಗಲಿವೆ. ಸಮಾಜಕ್ಕೆ ಸಂಬಂಧಿಸಿದಂತೆ ಮಾತನಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

2021- 22 ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ವಿರೋಧ ಪಕ್ಷದ ಮಾಜಿ ನಾಯಕ ಎಸ್ ಆರ್ ಪಾಟೀಲರಿಗೆ ಹಾಗೂ 2022 – 23 ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಜುಲೈ 18) ಅಭಿನಂದಿಸಿ ಮಾತನಾಡಿದರು.

“ಸಂಸತ್ತು, ವಿಧಾನಸಭೆಯನ್ನು ದೇವರು ಎಂದು ಕರೆಯುತ್ತೇವೆ. ಎಲ್ಲರಿಗೂ ಒಳಿತು ಮಾಡು ಎಂದು ಕೇಳಿಕೊಂಡರೆ ಒಳಿತಾಗುತ್ತದೆ. ನಾವು ಇಲ್ಲಿಗೆ ಬರುವುದು ದೇಗುಲಕ್ಕೆ ಬಂದಂತೆ. ನಾವು ಜನಸೇವಕರು. ಇಬ್ಬರು ಶಾಸಕರು ಜನಪರ ಕಾಳಜಿ ಇಟ್ಟುಕೊಂಡು ಜನರ ಧ್ವನಿಯಾಗಿ ಕೆಲಸ ಮಾಡಿದ್ದಾರೆ. ಪ್ರತಿಯೊಬ್ಬರೂ ಜನರ ಧ್ವನಿಯಾದಾಗ ಮಾತ್ರ ಸರ್ಕಾರ ಪರಿಣಾಮಕಾರಿಯಾಗಿ ಕೆಲಸ ಮಾಡಬಹುದು. ಶಾಸಕರಾದವರಿಗೆ ಅಧ್ಯಯನ ಬಹಳ ಮುಖ್ಯ” ಎಂದು ಮುಖ್ಯಮಂತ್ರಿ ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಛತ್ತೀಸ್‌ಘಡ | ನಕಲಿ ಎಸ್‌ಟಿ, ಎಸ್‌ಟಿ ಪ್ರಮಾಣ ಪತ್ರಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬೆತ್ತಲೆ ಪ್ರತಿಭಟನೆ

“ಭಾರತ ಸಂವಿಧಾನ ಕೇವಲ ವಕೀಲರ ದಾಖಲೆಯಲ್ಲ. ಅದು ಜೀವನ್ಮುಖಿಯಾದುದ್ದು, ಅದರ ಚೈತನ್ಯ ನಿರಂತರವಾದುದು. ನಮ್ಮ ಸಮಾಜ ಹೇಗಿರಬೇಕೆಂದು, ಹೇಗೆ ಆಳಿಸಿಕೊಳ್ಳಬೇಕೆಂದು ಅಂಬೇಡ್ಕರ್ ಅವರು ಸಂವಿಧಾನ ರಚಿಸಿದರು. ಸರ್ಕಾರ, ಮೇಲ್ಮನೆ, ಕೆಳಮನೆ ಶಾಸಕರು ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಸಾಮಾಜಿಕ ಬದ್ಧತೆ ನಮ್ಮ ಮುಖ್ಯ ಗುರಿಯಾಗಿರಬೇಕು. ಆಗ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ” ಎಂದು ಸಿಎಂ ತಿಳಿಸಿದರು.

“ಎಲ್ಲ ಶಾಸಕರು ಉತ್ತಮರೇ ಎಂದು ಭಾವಿಸಿದ್ದೇನೆ. ಇವರಿಬ್ಬರೂ ಅತ್ಯುತ್ತಮ ಶಾಸಕರು. ಜನರ ಧ್ವನಿಯಾಗಲು ಮೇಲ್ಪಂಕ್ತಿಯನ್ನು ಬಿಟ್ಟುಹೋಗಿದ್ದಾರೆ. ಎಸ್ ಆರ್ ಪಾಟೀಲರು ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಎಲ್ಲ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿದ್ದಾರೆ. ವಿರೋಧ ಪಕ್ಷದ ನಾಯಕರಾಗಿ ಸದನದಲ್ಲಿ ಬಹಳ ಮಾತನಾಡಿದ್ದಾರೆ. ಕೃಷ್ಣಾ ಮೂರನೇ ಹಂತ ಆಗಬೇಕೆಂದು ಬಲವಾಗಿ ವಾದ ಮಾಡಿದ್ದಾರೆ. ಸಮಾಜದ ಎಲ್ಲ ವರ್ಗದ ಜನ, ಅವಕಾಶ ವಂಚಿತರ ಬಗ್ಗೆ ಧ್ವನಿಯಾಗಿ ಕೆಲಸ ಮಾಡುವಲ್ಲಿ ಇತರರಿಗಿಂತ ಮುಂದೆ ಹೋಗಿದ್ದಾರೆ. ಶಾಸಕರು ಇನ್ನಷ್ಟು ಹೆಚ್ಚು ಜವಾಬ್ದಾರಿಯಿಂದ ಕೆಲಸ ಮಾಡುವಂತಾಗಲಿ” ಎಂದು ಮುಖ್ಯ ಮಂತ್ರಿಗಳು ಹಾರೈಸಿದರು.

ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ಎಂ ಕೆ ಪ್ರಾಣೇಶ್, ಸಚಿವರಾದ ಹೆಚ್ ಕೆ ಪಾಟೀಲ್ ಹಾಗೂ ಎನ್ ಎಸ್ ಬೋಸರಾಜು, ಪರಿಷತ್ ಸದಸ್ಯರಾದ ಭೋಜೇಗೌಡ, ಟಿ ಎ ಶರವಣ, ಮುಖ್ಯ ಸಚೇತಕ ಸಲೀಂ ಅಹ್ಮದ್, ವೈ ಎ ನಾರಾಯಣಸ್ವಾಮಿ, ಶಾಸಕ ಕೋಟ ಶ್ರೀನಿವಾಸ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X