ರಾಯಚೂರು | ಬಾಲಕಿ ಸಾವು ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

Date:

Advertisements

ಗಿಲ್ಲೆಸುಗೂರು ಕ್ಯಾಂಪ್ ಬಳಿ ಅಲೆಮಾರಿ ಸಮುದಾಯದ ಬಾಲಕಿಯ ಅನುಮಾನಾಸ್ಪದ ಸಾವನ್ನು ಸೂಕ್ತ ತನಿಖೆಗೊಳಪಡಿಸಿ ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಿ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ರಾಯಚೂರು ಜಿಲ್ಲೆಯ ಮಸ್ಕಿ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಸಲ್ಲಿಸಿದ ಕಾರ್ಯಕರ್ತರು, “ಪ್ರಜಾಪ್ರಭುತ್ವ ದೇಶದಲ್ಲಿ ದಿನನಿತ್ಯ ಅನ್ಯಾಯ ಅತ್ಯಾಚಾರ ಕೊಲೆ ಸುಲಿಗೆಗಳು ಎಗ್ಗಿಲ್ಲದೆ ಸಾಗುತ್ತಿವೆ. ಮಹಿಳೆ, ಬಾಲಕಿಯರ ಮೇಲೆ ಪುರುಷನ ದಬ್ಬಾಳಿಕೆ ಮತ್ತು ಆತನ ನೀಚತನದ ಪರಮಾವಧಿಗೆ ಹಿಡಿದ ಕೈಗನ್ನಡಿಯಂತೆ ಇಂದು ಮತ್ತೊಂದು ಘಟನೆಗೆ ರಾಯಚೂರು ಜಿಲ್ಲೆಯ ಕೃತ್ಯ ಸಾಕ್ಷಿಯಾಗಿದೆ” ಎಂದು ಆಗ್ರಹಿಸಿದರು.

“ರಾಯಚೂರು ತಾಲೂಕಿನ ಇಡಪನೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಿಲ್ಲೆಸುಗೂರು ಕ್ಯಾಂಪಿನಲ್ಲಿ ಜುಲೈ 13ರಂದು ಮಧ್ಯಾಹ್ನ ಅಲೆಮಾರಿ ಸಮುದಾಯಗಳಲ್ಲಿ ಅಲಕ್ಷಿತ ಜಾತಿಗಳಲ್ಲೊಂದಾದ ಬುಡ್ಗಜಂಗಮ ಸಮುದಾಯದ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿ ಬೇವಿನ ಮರಕ್ಕೆ ನೇಣು ಹಾಕಿದ್ದರು” ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

Advertisements

“ಕ್ಯಾಂಪಿನ ಹೊರ ವಲಯದ ಬೇವಿನ ಮರಕ್ಕೆ ಹಗ್ಗ ಬಿಗಿದ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ. ಮೃತದೇಹ ಸಿಕ್ಕ ಸ್ಥಳ ಮತ್ತು ಪರಿಸ್ಥಿತಿ ನೋಡಿದರೆ, ನೂರಕ್ಕೆ ನೂರು ರೇಪ್‌ ಅಂಡ್‌ ಮರ್ಡರ್ ಆಗಿರುವುದು ಖಚಿತ” ಎಂದು ಸಂಶಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಜುಲೈ 21 ರೈತ ಹುತಾತ್ಮ ದಿನಾಚರಣೆ; ಮದ್ಯ ಮಾರಾಟ ನಿಷೇಧಕ್ಕೆ ಜಿಲ್ಲಾಧಿಕಾರಿ ಆದೇಶ

“ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ದೂರು ದಾಖಲಾಗಿದ್ದು, ಮೂರು ಮಂದಿ ಆರೋಪಿತ ಯುವಕರನ್ನು ಬಂಧಿಸಲಾಗಿದೆ.
ಆದ್ದರಿಂದ ಆ ಬಾಲಕಿಯ ಸಾವಿಗೆ ಸೂಕ್ತ ನ್ಯಾಯ ಸಿಗಬೇಕು ಮತ್ತು ತಪ್ಪಿತಸ್ಥರನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು. ಅಲೆಮಾರಿ ಸಮುದಾಯದ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿ ಆ ಕುಟುಂಬಕ್ಕೆ ಸರ್ಕಾರಿ ಸೌಲಭ್ಯ ನೀಡಬೇಕು” ಎಂದು ಮನವಿ ಮಾಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X