ಉಗ್ರರ ವಿರುದ್ಧದ ಕೇಸ್‌ಗಳನ್ನು ಕೂಡಲೇ ಎನ್‌ಐಎ ತನಿಖೆಗೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ. ಬೆಂಗಳೂರು ಸುರಕ್ಷತೆ ಬಗ್ಗೆ ಅಧಿಕಾರಿಗಳು ಫೀಲ್ಡ್ ಗೆ ಇಳಿಯಬೇಕು. ಇದರ ಹಿಂದೆ ಅಂತಾರಾಷ್ಟ್ರೀಯ ಸಂಸ್ಥೆಗಳ ಬೆಂಬಲವಿದೆ. ಬೆಂಗಳೂರಿನಲ್ಲಿ ಸ್ಪೋಟ ಮಾಡುವ ಹುನ್ನಾರ ಇದೆ. ಇದನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಕಳೆದ ಎರಡು ತಿಂಗಳಿಂದ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾಧ ನಿಯಂತ್ರಣ ಕೈ ತಪ್ಪುತ್ತಿದೆ. ನಿತ್ಯ ಕೊಲೆ ಸುಲಿಗೆ ಸಾಮಾನ್ಯವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಬಹಳಷ್ಟು ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ರಿಜಿಸ್ಟರ್ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಮಾಡುವುದು ಪೊಲೀಸರ ಕೆಲಸ. ಈ ಸರ್ಕಾರ ಬಂದ ಮೇಲೆ ಮಧ್ಯವರ್ತಿಗಳು ಕೈ ಹಾಕಿ ನಿಯಂತ್ರಣ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು. ಬೆಂಗಳೂರಿನಲ್ಲಿ ಕ್ಲಬ್ ಚಟುವಟಿಕೆಗಳು ಹೆಚ್ಚಾಗಿದೆ, ಹಫ್ತಾ ವಸೂಲಿ ತೀವ್ರವಾಗುತ್ತಿದೆ ಎಂದು ದೂರಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸ್ಫೋಟಕ್ಕೆ ಸಂಚು; ಐವರು ಶಂಕಿತ ಉಗ್ರರ ಬಂಧನ
ಇಲ್ಲೇ ನೆಲಸಿ ಅಪರಾಧ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುವಂತ ಕೆಲಸ ಆಗುತ್ತಿದೆ. ಅಂತಾರಾಷ್ಟ್ರೀಯ ಐಎಸ್‌ಐ ಇವರ ಸಂಪರ್ಕದಲ್ಲಿದ್ದಾರೆ. ಸಿಸಿಬಿ ಅಧಿಕಾರಿಗಳನ್ನು ಬಹಿರಂಗ ಪಡಿಸಿ, ಇದರ ಆಳ ಮತ್ತು ಉದ್ದ ದೊಡ್ಡದಿದೆ. ಇದಕ್ಕೆಲ್ಲಾ ಅಂತಾರಾಷ್ಟ್ರೀಯ ಕುಮ್ಮಕ್ಕು ಇದೆ. ಉಗ್ರರನ್ನು ಬಂಧಿಸಿದ ಸಿಸಿಬಿಗೆ ಅಭಿನಂದನೆ ಸಲ್ಲುಸುತ್ತೇನೆ ಎಂದರು.