ನಟ, ನಿರ್ಮಾಪಕ ಸೃಜನ್ ಲೋಕೇಶ್ ನಾಯಕನಾಗಿ ನಟಿಸುವುದಲ್ಲದೆ, ಪ್ರಥಮ ಬಾರಿಗೆ ನಿರ್ದೇಶನ ಮಾಡಿರುವ ಬಹು ನಿರೀಕ್ಷಿತ “GST” ಚಿತ್ರ ಸದ್ಯದಲ್ಲೇ ತೆರೆಗೆ ಬರಲು ಸಜ್ಜಾಗಿದೆ.
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಿಸಿರುವ ಈ ಚಿತ್ರ ಈಗಾಗಲೇ ಸೆನ್ಸಾರ್ ಪ್ರಕ್ರಿಯೆ ಮುಗಿಸಿಕೊಂಡಿದ್ದು, ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣ ಪತ್ರ ನೀಡಿದೆ.
GST ಚಿತ್ರದಲ್ಲಿ ನಿರ್ಮಾಪಕ ಸಂದೇಶ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸೃಜನ್‌ಗೆ ನಾಯಕಿಯಾಗಿ ರಜನಿ ಭಾರದ್ವಾಜ್ ಜೊತಯಾಗಿದ್ದಾರೆ. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲೇ ಸೃಜನ್ ತಮ್ಮ ತಾಯಿ ಗಿರಿಜಾ ಲೋಕೇಶ್ ಹಾಗೂ ಮಗ ಸುಕೃತ್‌ಗೆ ಆಕ್ಷನ್ ಕಟ್ ಹೇಳಿರುವುದು ಚಿತ್ರದ ವಿಶೇಷತೆಗಳಲ್ಲೊಂದು. ಮನೋರಂಜನೆಯೇ ಪ್ರಧಾನವಾಗಿರುವ GST ಚಿತ್ರಕ್ಕೆ ʼಘೋಸ್ಟ್ ಇನ್ ಟ್ರಬಲ್ʼ ಎಂಬ ಅಡಿಬರಹವಿದೆ.
ಪ್ರಮೋದ್ ಶೆಟ್ಟಿ, ಶೋಭ್ ರಾಜ್, ಶರತ್ ಲೋಹಿತಾಶ್ವ, ನಿವೇದಿತಾ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ ಸೇರಿದಂತೆ ಹಲವು ಹಿರಿಯ ಹಾಗೂ ಪರಿಚಿತ ಕಲಾವಿದರು ತಾರಾಬಳಗದಲ್ಲಿದ್ದಾರೆ. ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಹಾಗೂ ಗುಂಡ್ಲುಪೇಟೆ ಸುರೇಶ್ ಅವರ ಛಾಯಾಗ್ರಹಣವಿದ್ದು, ಚಿತ್ರಕ್ಕೆ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ತೇಜಸ್ವಿ ಕೆ ನಾಗ್ ಚಿತ್ರದ ಸಹ ನಿರ್ದೇಶನದ ಹೊಣೆ ಹೊತ್ತಿದ್ದಾರೆ.
ಇದನ್ನೂ ಓದಿ: ಸೆನ್ಸಾರ್ ಮಂಡಳಿ ಅದುಮಿಟ್ಟಿರುವ ವೆಟ್ರಿಮಾರನ್ ‘ಮಾನುಷಿ’ ಚಿತ್ರದಲ್ಲೇನಿದೆ, ಏನಿದು ವಿವಾದ?