ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿಯವರ ಆರೋಗ್ಯದಲ್ಲಿ ಏರುಪೇರಾಗಿದ್ದು ಶನಿವಾರ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಾಗಿದ್ದಾರೆ.
78 ವರ್ಷದ ಕಾಂಗ್ರೆಸ್ ನಾಯಕಿ 2024ರ ಡಿಸೆಂಬರ್‌ನಲ್ಲಿ ಆಸ್ಪತ್ರೆಗೆ ದಾಖಲಾಗಿ ಹಲವು ಪರೀಕ್ಷೆ, ತಪಾಸಣೆಗಳನ್ನು ಮಾಡಿಕೊಂಡಿದ್ದರು.
ಇದನ್ನು ಓದಿದ್ದೀರಾ? ಕರ್ನಾಟಕದಿಂದ ಸೋನಿಯಾ ಗಾಂಧಿ ರಾಜ್ಯಸಭೆಗೆ ಸ್ಪರ್ಧೆ?
ಇಂದು(ಜೂನ್ 7) ಶಿಮ್ಲಾದಲ್ಲಿರುವ ಸೋನಿಯಾ ಅವರ ಆರೋಗ್ಯ ಹದಗೆಟ್ಟಿರುವುದನ್ನು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಪ್ರಧಾನ ಸಲಹೆಗಾರ(ಮಾಧ್ಯಮ) ನರೇಶ್ ಚೌಹಾಣ್ ಅವರು ಮಾಧ್ಯಮಗಳಿಗೆ ದೃಢಪಡಿಸಿದ್ದಾರೆ.
“ಸಣ್ಣ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಅವರನ್ನು ಪರೀಕ್ಷಿಸುತ್ತಿದ್ದಾರೆ. ಅವರ ಆರೋಗ್ಯ ಸದ್ಯ ಸ್ಥಿರವಾಗಿದೆ” ಎಂದು ತಿಳಿಸಿದ್ದಾರೆ.
