ಜೂನ್ 12ರಂದು ನಡೆಯುವ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ ನಿಮಿತ್ತ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ವಿಲೇವಾರಿಯ ಸ್ವಚ್ಛವಾಹಿನಿ ವಾಹನಗಳಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧಿ ಕುರಿತು ಸಂದೇಶ ಹಾಗೂ ಜಿಂಗಲ್ಸ್ ಹಾಕಬೇಕು. ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಡಂಗೂರ ಸಾರುವ ಮೂಲಕ ಮಕ್ಕಳನ್ನು ಶಾಲೆಗೆ ಸೇರಿಸುವಂತೆ, ಬಾಲ ಕಾರ್ಮಿಕ ಪದ್ಧತಿ ನಿಷೇಧದ ಮೂಡಿಸಬೇಕು” ಎಂದು ಹೇಳಿದರು.
”ಜಾಥಾ, ಸರ್ಕಾರಿ ಶಾಲೆಗಳಲ್ಲಿ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಬೇಕು. ಬಾಲಕಾರ್ಮಿಕ ಮುಕ್ತ ಗ್ರಾಮಕ್ಕೆ ಬಹುಮಾನ ನೀಡಬೇಕು” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಸಿ ನೆಡುವ ಮೂಲಕ ಹುಟ್ಟುಹಬ್ಬ ಆಚರಿಸಿ: ಕುಲಸಚಿವ ಶಂಕರಗೌಡ ಸೋಮನಾಳ
ಟಾಸ್ಕ್ ಫೋರ್ಸ್ ಸಭೆ : ಬಾಲಕಾರ್ಮಿಕ ಪದ್ದತಿ ನಿವಾರಣೆಗಾಗಿ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಟಾಸ್ಕ್ ಫೋರ್ಸ್ ಸಭೆಯು ಡಿ ಸಿ ಟಿ ಭೂಬಾಲನ್ ಅಧ್ಯಕ್ಷತೆಯಲ್ಲಿ ಜರುಗಿತು. ಬಾಲ ಕಾರ್ಮಿಕರನ್ನು ನೇಮಿಸಿಕೊಂಡ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಿದ ಅವರು, ದೂರುಗಳು ಬಂದಲ್ಲಿ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ, ತಪ್ಪಿತಸ್ಥ ಮಾಲೀಕರಿಂದ ಕಾರ್ಪಸ್ ವಸೂಲಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು. ತಿಳಿಸಿದರು.