ತುಮಕೂರು | ಮಾನಸಿಕ ಅಸ್ವಸ್ಥ, ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ ಗಡೀಪಾರು ಮಾಡಿ, ನಿಮ್ಹಾನ್ಸ್ ನಲ್ಲಿ ಚಿಕಿತ್ಸೆ ಕೊಡಿಸಲು ಒತ್ತಾಯ

Date:

Advertisements

ಸಹವರ್ತಿ ಟಿವಿ ವರದಿಗಾರನ ಮೇಲೆ ಹಲ್ಲೆ, ಜಾತಿ ನಿಂದನೆ ಮಾಡಿದ ಆರೋಪಿ ಮಾನಸಿಕ ಅಸ್ವತ್ಥ ಮಂಜುನಾಥ್ ತಾಳಮಕ್ಕಿ ಯನ್ನು ಗಡೀಪಾರು ಮಾಡಿ, ಸೂಕ್ತಿ ಚಿಕಿತ್ಸೆ ಕೊಡಿಸಬೇಕು ಎಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಪ್ರಗತಿ ಪರ ಚಿಂತಕ ದೊರೆರಾಜು ಮಾತನಾಡಿ ಮಾಧ್ಯಮ ರಂಗದಲ್ಲಿ ಕೆಲಸ ನಿರ್ವಹಿಸುವ ದಲಿತ ಸಮುದಾಯದ ಸಮಯ ಮಂಜುನಾಥ್ ಮೇಲೆ ಮಂಜುನಾಥ್ ತಾಳಮಕ್ಕಿ ಹಲ್ಲೆ ಮತ್ತು ಜಾತಿ ನಿಂದನೆ ಮಾಡಿರುವ ಪ್ರಕರಣದಲ್ಲಿ ಪೊಲೀಸರು ಜಾತಿನಿಂದನೆ ಪ್ರಕರಣವನ್ನಷ್ಟೇ ಎಫ್‌ಐಆರ್ ನಲ್ಲಿ ನಮೂದಿಸುವ ಮೂಲಕ ಹಲ್ಲೆ ಪ್ರಕರಣವನ್ನು ಮರೆಮಾಚಿದ್ದಾರೆ. ಸದರಿ ಪ್ರಕರಣದಲ್ಲಿ ಹಲ್ಲೆ ಮಾಡಿರುವುದನ್ನು ಎಫ್ ಐಆರ್ ನ ಲ್ಲಿ ನಮೂದಿಸಲು ಜಿಲ್ಲಾ ದಂಡಾಧಿಕಾರಿಗಳು ಸಂಬಂಧ ಪಟ್ಟವರಿಗೆ ನಿರ್ದೇಶನ ನೀಡಬೇಕು. ಹಾಗೂ ಪ್ರಕರಣದಲ್ಲಿ ಹಲ್ಲೆ ಮಾಡಿರುವ ಮಂಜುನಾಥ್ ತಾಳಮಕ್ಕಿ ಮಾನಸಿಕ ಅಸ್ವಸ್ಥನಾಗಿದ್ದು, ಮಾನಸಿಕ ಅಸ್ವಸ್ಥತೆತೆಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ನ್ಯಾ ಯಾಲಯದಲ್ಲಿ ಒಪ್ಪಿಕೊಂಡಿದ್ದು, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಮಂಜುನಾಥ್ ತಾಳಮಕ್ಕಿಗೆ ನಿಮ್ಹಾನ್ಸ್   ತಜ್ಞರಿಂದ ಸೂಕ್ತ ಚಿಕಿತ್ಸೆ ಕೊಡಿಸಬೇಕು ಎಂದು ಒತ್ತಾಯಿಸಿದರು.

ಮಾಧ್ಯಮ ವ್ಯಕ್ತಿಯಾಗಿರುವುದರಿಂದ ದಿನನಿತ್ಯ ಗಣ್ಯರನ್ನು, ಅತಿಗಣ್ಯರನ್ನು ಭೇಟಿ ಮಾಡಬೇಕಾದ ಅನಿವಾರ್ಯತೆ ಇದ್ದು, ಈ ಸಂದರ್ಭದಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡು ಗಣ್ಯರು, ಅತಿ ಗಣ್ಯರಿಗೆ ಅಪಾಯ ಉಂಟು ಮಾಡಬಹುದಾದ ಅವಕಾಶ ಹೆಚ್ಚಿರುವುದರಿಂದ ಮಂಜುನಾಥ್ ತಾಳಮಕ್ಕಿ ಅವರಿಗೆ ಸೂಕ್ತ ಚಿಕಿತ್ಸೆಗೆ ಶಿಫಾರಸ್ಸು ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಬೇಕು ಎಂದರು.

Advertisements
1001553849

ಎಸ್ ಸಿ ಎಸ್ ಟಿ ನೌಕರರ ಸಮನ್ವಯ ಸಮಿತಿ ಮಾಜಿ ಅಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣಪ್ಪ ಮಾತನಾಡಿ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಬೇಕಾದ ಹೊಣೆಗಾರಿಕೆಯನ್ನು ಹೊತ್ತಿರುವ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಮಾಜದಲ್ಲಿ ಸ್ವಾಸ್ಥ್ಯವನ್ನು ಕಾಪಾ ಡಲು ಮಾನಸಿಕ ಅಸ್ವಸ್ಥರಾಗಿರುವ ಮಂಜುನಾಥ್ ತಾಳಮಕ್ಕಿ ಅಂತವರನ್ನು ಸಮಾಜದಲ್ಲಿ ಸ್ವೆಚ್ಛವಾಗಿ ಓಡಾಡಲು ಬಿಡುವುದರಿಂದ ದಲಿತ ವಿರೋಧಿ ಮನ ಸ್ಥಿತಿಯನ್ನು ಹೊಂದಿರುವ ವ್ಯಕ್ತಿಯಾಗಿರುವ ಮಂಜುನಾಥ್ ತಾಳಮಕ್ಕಿ ಇನ್ನಷ್ಟು ದಲಿತರ ಮೇಲೆ ಹಲ್ಲೆ ಮಾಡುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ ಹಾಗಾಗಿ ಮಂಜುನಾಥ್ ತಾಳಮಕ್ಕಿ ಅವರ ಮಾನಸಿಕ ಆರೋಗ್ಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಚಿಕಿತ್ಸೆಗೆ ಶಿಫಾರಸ್ಸು ಮಾಡಬೇಕು ಎಂದು ಒತ್ತಾಯಿಸಿದರು.

ಮಾನಸಿಕ ಅಸ್ವಸ್ಥ ಮಂಜುನಾಥ್ ತಾಳಮಕ್ಕಿ ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಜಿಲ್ಲಾಡಳಿತ ಕ್ರಮವಹಿಸದೇ ಹೋದಲ್ಲಿ, ಮುಂದಿನ ದಿನಗಳಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಡಳಿತದ ವಿರುದ್ಧ ನಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ತುಮಕೂರು ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊಲೆ, ದೌರ್ಜನ್ಯ, ಅಸ್ಪೃಶ್ಯತಾಚರಣೆ ದೂರುಗಳ ವಿರುದ್ಧ ಕೌಂಟರ್ ಕೇಸ್ಗಳನ್ನು ಹಾಕದಂತೆ ಕ್ರಮವಹಿಸುವ ಮೂಲಕ ದಲಿತರ ಸಂವಿಧಾನಾತ್ಮಕ ರಕ್ಷಣೆಯನ್ನು ಕಲ್ಪಿಸಬೇಕಾಗಿರುವ ಜವಾಬ್ದಾರಿ ಸರ್ಕಾರದ ಮೇಲಿದೆ. ಮಧುಗಿರಿ ತಾಲ್ಲೂಕು ಕವಣದಾಲ ಗ್ರಾಮದಲ್ಲಿ ದೇವಾಲಯ ಪ್ರವೇಶವನ್ನು ನಿರ್ಬಂಧಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲೆಯ ಎಲ್ಲ ದೇಗುಲ ಗಳಲ್ಲಿಯೂ ದಲಿತರಿಗೆ ದೇವಾಲಯಕ್ಕೆ ಮುಕ್ತ ಪ್ರವೇಶ ಎಂಬ ನಾಮಫಲಕ ಅಳವಡಿಸಬೇಕು. ಹಾಗೂ ಈ ಬಗ್ಗೆ ಅರಿವು ಮೂಡಿಸಲು ಜಿಲ್ಲೆಯ ಎಲ್ಲಾ ತಾಲ್ಲೂಕು ದಂಡಾಧಿಕಾರಿಗಳಿಗೆ ನಿರ್ದೇಶಿಸಬೇಕು ಎಂದು ಜಿಲ್ಲೆಯ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ ಮನವಿ ಮಾಡಿದೆ.

ಇದೇ ಸಂದರ್ಭದಲ್ಲಿ ಮುಖಂಡರಾದ ನರಸೀಯಪ್ಪ, ನರಸಿಂಹಯ್ಯ, ನಿಟ್ಟೂರು ರಂಗಸ್ವಾಮಿ ದೊಡ್ಡಯ್ಯ, ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್, ಎಂ.ಕೆ. ಸುಬ್ರಹ್ಮಣ್ಯ,ಡಿಎಸ್ಎಸ್ ಸಂಚಾಲಕ ಪಿ.ಎನ್.ರಾಮಯ್ಯ, ಬೇವಿನಹಳ್ಳಿ ಚನ್ನಬಸವಯ್ಯ, ರಾಮಯ್ಯ ಸೇರಿದಂತೆ ಜಿಲ್ಲೆಯ ದಲಿತ ಪರ, ಪ್ರಗತಿ ಪರ ಸಂಘನೆಯ ಮುಖಂಡರು ಇದ್ದರು. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X