ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಈ ಮೊದಲು ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ರಾಜ್ಯ ಸರಕಾರ ಘೋಷಿಸಿತ್ತು.
ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಹಲವರು ಗಾಯಗೊಂಡಿದ್ದರು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರಂತದಲ್ಲಿ ಮೃತಪಟ್ಟವರ ಪ್ರತಿ ಕುಟುಂಬಕ್ಕೆ ಆರಂಭದಲ್ಲಿ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಮೊತ್ತ ಘೋಷಿಸಿತ್ತು. ಆದರೆ ಸರ್ಕಾರ ನಿರ್ಲಕ್ಷಕ್ಕೆ ಬಲಿಯಾದವರಿಗೆ ಕೇವಲ 10 ಲಕ್ಷ ರೂಪಾಯಿ ಮಾತ್ರ ಘೋಷಿಸಿದೆ ಎಂದು ವಿಪಕ್ಷಗಳು ಆರೋಪಿಸಿತ್ತು. ಇತ್ತ ಸರ್ಕಾರದ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಇದೀಗ ಪರಿಹಾರ ಮೊತ್ತವನ್ನು 25 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮೋದಿ ಶರಣಾಗಿದ್ದಾರೆ’ ಎಂಬ ರಾಹುಲ್ ಹೇಳಿಕೆಯು ಹಲವು ಪ್ರಶ್ನೆಗಳನ್ನು ಎತ್ತುತ್ತದೆ
ಆರ್‌ಸಿಬಿ ವಿಜಯೋತ್ಸವದಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದ ಆರ್‌ಸಿಬಿ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿತ್ತು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ದುರಂತದಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆಯ ಹೊಣೆಗಾರಿಕೆ ಕುರಿತು ಆರೋಪಿಗಳು ಕೇಳಿಬರುತ್ತಿದೆ. ಈ ಕುರಿತು ದೂರು ಕೂಡ ದಾಖಲಾಗಿದೆ. ಇತ್ತ ರಾಜ್ಯ ಕ್ರಿಕೆಟ್ ಸಂಸ್ಥೆ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಘಟನೆ ನಡೆದ ಬಳಿಕ ರಾಜ್ಯ ಕ್ರಿಕೆಟ್ ಸಂಸ್ಥೆ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದೆ.