ನಾಳೆಯಿಂದ (ಜೂ.09) ರಾಜ್ಯದಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು, ವ್ಯಾಪಕ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂ.09ರಿಂದ ಜೂ.13ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಧಾರವಾಡ,ವಿಜಯಪುರ, ಚಿಕ್ಕಬಳ್ಳಾಪುರ,ದಾವಣಗೆರೆ, ಕೊಡಗು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಕ್ಯಾಸಲ್ರಾಕ್, ಯಲಬುರ್ಗಾ, ಬೀದರ್, ವಿಜಯಪುರದಲ್ಲಿ ಮಳೆಯಾಗಿದೆ. ಎಚ್ಎಎಲ್ನಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮೋದಿ ಶರಣಾಗಿದ್ದಾರೆ’ ಎಂಬ ರಾಹುಲ್ ಹೇಳಿಕೆಯು ಹಲವು ಪ್ರಶ್ನೆಗಳನ್ನು ಎತ್ತುತ್ತದೆ
ಹೊನ್ನಾವರದಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.