ಇಂಗ್ಲೆಂಡ್‌ನ ಸ್ಪೋಟಕ ಆಟಗಾರ ಜೋಸ್ ಬಟ್ಲರ್ ಟಿ20 ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ದಾಖಲೆಗಳನ್ನು ಮುರಿದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ಸ್ವದೇಶದಲ್ಲಿ ಟಿ20 ಸರಣಿ ನಡೆಯುತ್ತಿದ್ದು, ಚೆಸ್ಟರ್ ಲೀ ಸ್ಟ್ರೀಟ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಅತ್ಯಮೋಘ ಆಟವಾಡಿ ಗೆಲುವಿನಲ್ಲಿ ನೆರವಾಗಿದ್ದಾರೆ.
ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 21 ರನ್‌ಗಳಿಂದ ವೆಸ್ಟ್ ಇಂಡೀಸ್ ವಿರುದ್ಧ ಜಯಗಳಿಸಿತು. ಆಂಗ್ಲರ ತಂಡವು ಮೊದಲು ಬ್ಯಾಟ್ ಮಾಡಿ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 188 ರನ್ ಪೇರಿಸಿತು. ಸವಾಲಿನ ಗುರಿಯನ್ನು ಬೆನ್ನಟ್ಟಿದ ವಿಂಡೀಸ್ ತಂಡ 20 ಓವರ್‌ಗಳಲ್ಲಿ 167 ರನ್ ಗಳಿಸಲು ಮಾತ್ರ ಶಕ್ತವಾಗಿ ಸೋಲು ಅನುಭವಿಸಿತು.
ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡದ ಆರಂಭ ಅಷ್ಟು ಉತ್ತಮವಾಗಿರಲಿಲ್ಲ. ಆರಂಭಿಕ ಬ್ಯಾಟರ್ ಬೆನ್ ಡೆಕೆಟ್ ತಂಡದ ಮೊತ್ತ 16 ರನ್ ಆಗಿದ್ದಾಗ ಔಟಾದರು. ಇವರು ಪೆವಿಲಿಯನ್‌ಗೆ ಸೇರುತ್ತಿದ್ದಂತೆ ಕ್ರೀಸ್‌ಗೆ ಬಂದ ಸ್ಟಾರ್ ಆಟಗಾರ ಜೋಸ್ ಬಟ್ಲರ್ ಅಮೋಘ ಆಟವಾಡಿದರು. ಆಟಗಾರ ಜೇಮ್ ಸ್ಮಿತ್ ಅವರ ಜೊತೆಗೂಡಿ 4 ಬೌಂಡರಿ, 2 ಸಿಕ್ಸರ್ ಸಹಾಯದಿಂದ 38 ರನ್ ಬಾರಿಸಿದರು.
ಇದನ್ನು ಓದಿದ್ದೀರಾ? ಕ್ರಿಕೆಟ್‌ಗೆ ಪಿಯೂಷ್ ಚಾವ್ಲಾ ನಿವೃತ್ತಿ; 2 ಬಾರಿ ಭಾರತ ವಿಶ್ವಕಪ್ ಗೆದ್ದಾಗ ತಂಡದ ಪ್ರಮುಖ ಬೌಲರ್
ಎರಡನೇ ವಿಕೆಟ್‌ಗೆ ಈ ಜೋಡಿ ಅರ್ಧಶತದ ಜೊತೆಯಾಟ ನೀಡಿತು. ಇವರು 59 ಎಸೆತಗಳಲ್ಲಿ 6 ಬೌಂಡರಿ, 4 ಸಿಕ್ಸರ್ ಸಹಾಯದಿಂದ 96 ರನ್ ಸಿಡಿಸಿ ತಂಡಕ್ಕೆ ಆಧಾರವಾದರು. ಈ ಮೂಲಕ ಇವರು ಹಲವು ದಾಖಲೆಗಳಿಗೆ ತಮ್ಮ ಹೆಸರನ್ನು ದಾಖಲಿಸಿದರು. ಇದೇ ಸಂದರ್ಭದಲ್ಲಿ ಬಟ್ಲರ್ ವಿರಾಟ್ ಕೊಹ್ಲಿ ದಾಖಲೆಯನ್ನು ಕೂಡ ಅಳಿಸಿದರು. ವೆಸ್ಟ್ ಇಂಡೀಸ್ ವಿರುದ್ಧ ಟ20 ಕ್ರಿಕೆಟ್‌ನಲ್ಲಿ ಅತಿ ಹೆ್ಚ್ಚು ರನ್ ಬಾರಿಸಿದ ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದರು. ವಿರಾಟ್ ಕೊಹ್ಲಿ ತಮ್ಮ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿಂಡೀಸ್ ವಿರುದ್ಧ 570 ರನ್ ಸಿಡಿಸಿದ್ದರು. ಈ ದಾಖಲೆಯನ್ನು ಜೋಸ್ ಬಟ್ಲರ್ ಮುರಿದು ವಿಂಡೀಸ್ ವಿರುದ್ಧ 611 ರನ್ ಬಾರಿಸಿದರು. ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ ಮೊದಲ ಸ್ಥಾನದಲ್ಲಿದ್ದಾರೆ. ಇವರು ವಿಂಡೀಸ್ ವಿರುದ್ಧ 693 ರನ್ ಬಾರಿಸಿದ್ದಾರೆ.
ಇದೇ ಪಂದ್ಯದಲ್ಲಿ ಬಟ್ಲರ್ ಬಾರಿಸಿದ ಅರ್ಧಶತಕ ರೋಹಿತ್ ಶರ್ಮಾ ಹಾಗೂ ಪಾಕ್‌ನ ಬಾಬರ್ ಅಜಮ್ ದಾಖಲೆಯನ್ನು ಬದಿಗೆ ಸರಿಸಿತು. ರೋಹಿತ್, ಬಾಬರ್ ಇಬ್ಬರೂ ವಿಂಡೀಸ್ ವಿರುದ್ಧ ಟಿ20 ಕ್ರಿಕೆಟ್‌ನಲ್ಲಿ 5 ಅರ್ಧಶತಕ ಬಾರಿಸಿದ ಹಿರಿಮೆ ಹೊಂದಿದ್ದರು. ಈ ಪಟ್ಟಿಗೆ ಬಟ್ಲರ್ ಕೂಡ ಸೇರ್ಪಡೆಯಾದರು. ವೆಸ್ಟ್ ಇಂಡೀಸ್ ವಿರುದ್ಧದ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಹಿರಿಮೆ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಅವರಿಗೆ ಸಲ್ಲುತ್ತದೆ. ಇವರು ವಿಂಡೀಸ್ ವಿರುದ್ಧ 7 ಅರ್ಧಶತಕ ಬಾರಿಸಿದ್ದಾರೆ.