ಬೆಳಗಾವಿ ಜಿಲ್ಲೆಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬುಧವಾರದ ವಿಧಾನಸಭೆ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ವಿಚಾರ ಘೋಷಣೆ ಮಾಡಿ, ಸದನದ ಗಮನಕ್ಕೆ ತಂದರು. “ಜೈನ ಮುನಿಯನ್ನು ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ” ಎಂದರು.
ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆ ಪ್ರಕರಣದಲ್ಲಿ ಬೇರೆ ಆಯಾಮ ಇದೆ. ಈ ಹಿನ್ನೆಲೆಯಲ್ಲಿ ಇದನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿತ್ತು.