ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ಕ್ಕೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 1ರಂದು ರಾತ್ರಿ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆಯಾಗಿದ್ದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಉಂಟಾಗಿತ್ತು.
ಇದನ್ನು ಓದಿದ್ದೀರಾ? ಮಗಳಿಗೆ ಅಭಿನಂದನೆ, ಸುಹಾಸ್ ಶೆಟ್ಟಿಗೆ ಶ್ರದ್ಧಾಂಜಲಿ: ಶಾಸಕ ಸುನಿಲ್ ಕುಮಾರ್ ಪೋಸ್ಟಿಗೆ ಕಮೆಂಟ್‌ಗಳ ಸುರಿಮಳೆ
ರೌಡಿಶೀಟರ್ ಅನ್ನು ತಮ್ಮ ಕಾರ್ಯಕರ್ತ ಎಂದು ಬಿಜೆಪಿ ಹೇಳಿಕೊಂಡು ಪ್ರಚಾರಕ್ಕಿಳಿಯಿತು. ಅಲ್ಲಲ್ಲಿ ಬಿಜೆಪಿ, ಸಂಘಪರಿವಾರದ ನಾಯಕರು ಮಾಡಿದ ದ್ವೇಷ ಭಾಷಣದಿಂದಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಅಲ್ಲಲ್ಲಿ ಮುಸ್ಲಿಮರ ಮೇಲೆ ದಾಳಿ ನಡೆದಿತ್ತು.
ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಮಂಗಳೂರು ಪೊಲೀಸ್‌ನ ಸಿಸಿಬಿ ಘಟಕ ಈ ಪ್ರಕರಣದ ತನಿಖೆಯನ್ನು ನಡೆಸುತ್ತಿತ್ತು. ಈಗಾಗಲೇ 12 ಮಂದಿ ಆರೋಪಗಳನ್ನು ಸಿಸಿಬಿ ಬಂಧಿಸಿದೆ.
