ಕಾರು ಮತ್ತು ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಗೂಡ್ಸ್ ವಾಹನ ಪಲ್ಟಿ ಹೊಡೆದ ಪರಿಣಾಮದಿಂದ ರಸ್ತೆ ಬಳಿ ನಿಂತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಸ್ಕೆಬೈಲ್ ಗ್ರಾಮದಲ್ಲಿ ಭಾನುವಾರ ನಡೆದಿದೆ
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಾರು-ಬೈಕ್ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಸಾವು
ಎರಡು ವಾಹನಗಳು ನಡುವೆ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಇದ್ದ ಸುಧಾಕರ್ ಎಂಬ ವ್ಯಕ್ತಿ ಸಾವನಪ್ಪಿದ್ದಾರೆ. ಸುಧಾಕರ್ ಚಿನ್ನಿಗ ಗ್ರಾಮ ಪಂಚಾಯಿತಿಯ ಅಟೆಂಡರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಹಾಗೆಯೇ, ಸ್ಥಳದಲ್ಲೇ ಇದ್ದ ಇವರಿಗೆ ಗಂಭೀರ ಗಾಯಗಳಾಗಿವೆ.