ಬೆಳಗಾವಿ ನಗರದ ಕಾಲೇಜು ರಸ್ತೆಯಲ್ಲಿ ತಾಯಿಯೇ ಸ್ವಂತ ಮಗಳನ್ನು ಭಿಕ್ಷಾಟನೆಗೆ ಬಿಟ್ಟಿದ್ದು ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ತಾಯಿ ಮತ್ತು ಮಗಳನ್ನು ವಶಕ್ಕೆ ಪಡೆದಿದ್ದಾರೆ.
ಕಾಲೇಜು ರಸ್ತೆಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಭಿಕ್ಷೆ ಬೇಡುತ್ತಿರುವುದನ್ನು ಗಮನಿಸಿದ ಮಕ್ಕಳ ಕಲ್ಯಾಣ ಸಮಿತಿಯ ಅಧಿಕಾರಿಗಳು, ಬಾಲಕಿಯನ್ನು ವಶಕ್ಕೆ ಪಡೆಯಲು ಮುಂದಾದಾಗ, ತಾಯಿ ವಿರೋಧ ವ್ಯಕ್ತಪಡಿಸಿದ್ದು . ಅಧಿಕಾರಿಗಳು ತಾಯಿ ಹಾಗೂ
ಮಕ್ಕಳನ್ನು ಭಿಕ್ಷಾಟನೆಗೆ ಅಥವಾ ಕೂಲಿ ಕೆಲಸಕ್ಕೆ ಕಳುಹಿಸುವುದು ಕಾನೂನುಬಾಹಿರವಾಗಿದ್ದು, ಇದು ಬಾಲಕಾರ್ಮಿಕ ಕಾಯಿದೆಯಡಿ ಗಂಭೀರ ಅಪರಾಧವೆಂದು ಪರಿಗಣಿಸಲಾಗುತ್ತದೆ.
ಮಕ್ಕಳ ರಕ್ಷಣಾ ಸಮಿತಿಯ ಅಧಿಕಾರಿಗಳು ಬಾಲಕಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದು, ತಾಯಿಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.