ಹುಟ್ಟುಹಬ್ಬದ ದಿನವೇ ವ್ಯಕ್ತಿಯೊಬ್ಬರು ಮೃ*ತಪಟ್ಟ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಪರಪುವಿನಲ್ಲಿ ಜೂ. 7ರಂದು ಸಂಭವಿಸಿದೆ.
ಕುಕ್ಕುಂದೂರು ಗ್ರಾಮದ ಪರಪು ನಿವಾಸಿ, ಆಟೋ ಚಾಲಕ, ಕುಕ್ಕುಂದೂರು ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಸಾಲ್ಯಾನ್ (36) ಮೃತಪಟವರು.
ಹುಟ್ಟಹಬ್ಬದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಮಗುವಿಗೆ ಐಸ್ ಕ್ರೀಂ ತರಲೆಂದು ಮನೆಯಿಂದ ಸ್ಕೂಟಿಯಲ್ಲಿ ಪೇಟೆಗೆ ಬಂದಿದ್ದ ಸುಬ್ರಹ್ಮಣ್ಯ ಅವರು 10.30ರ ವೇಳೆಗೆ ಮನೆಗೆ ವಾಪಸಾಗುತ್ತಿದ್ದಾಗ ಪರಪು ಸೇತುವೆ ಬಳಿ ನಿಯಂತ್ರಣ ಕಳೆದುಕೊಂಡು ಸ್ಕೂಟಿ ಸಹಿತ ಹೊಳೆಗೆ ಬಿದ್ದಿದ್ದರು. ರಾತ್ರಿಯಿಡೀ ಹುಡುಕಾಡಿದರೂ ಸುಬ್ರಹ್ಮಣ್ಯ ಅವರ ಸುಳಿವು ಸಿಕ್ಕಿರಲಿಲ್ಲ. ಊರಿನವರು ಹುಡುಕುವಾಗ ಸೇತುವೆಯಡಿ ಸ್ಕೂಟಿಯೊಂದಿಗೆ ಮೃತದೇಹ ಪತ್ತೆಯಾಗಿದೆ.
ಮೃತರು ತಂದೆ, ತಾಯಿ, ಸಹೋದರಿ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.