ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲ, ಅತಿ ಹೆಚ್ಚು ಪರವೂರ ಭಕ್ತರು ಬರುವ ದೇವಸ್ಥಾನ. ಅದರಲ್ಲೂ ಕೇರಳದ ಭಕ್ತರು ಇಲ್ಲಿಗೆ ಪ್ರತಿನಿತ್ಯ ಆಗಮಿಸಿ ದೇವಿ ದರ್ಶನ ಪಡೆಯುತ್ತಾರೆ. ಈ ವರ್ಷದ ಮೇ ತಿಂಗಳೊಂದರಲ್ಲೇ 1.40 ಕೋ. ರೂ. ಹುಂಡಿಯಲ್ಲಿ ಸಂಗ್ರಹವಾಗಿದ್ದು, ಒಂದು ತಿಂಗಳ ಅತೀ ಹೆಚ್ಚು ಕಾಣಿಕೆ ಸಂಗ್ರಹವಾಗಿ ದಾಖಲೆ ನಿರ್ಮಿಸಿದೆ.
ಹುಂಡಿಯಲ್ಲಿ ಕಾಣಿಕೆ ರೂಪದಲ್ಲಿ ಸಂಗ್ರಹವಾದ ನಗದು, ಚಿನ್ನಾಭರಣ, ಒಟ್ಟು ಮೊತ್ತ ಇದು. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವನ್ನು ಹೊರತುಪಡಿಸಿದರೆ ಕೊಲ್ಲೂರು ರಾಜ್ಯದಲ್ಲೇ ಅತೀ ಹೆಚ್ಚು ಆದಾಯವಿರುವ ಕ್ಷೇತ್ರವಾಗಿದೆ.
2024-25 ನೇ ಸಾಲಿನ ಜನವರಿ, ಫೆಬ್ರವರಿ, ಮಾರ್ಚ್, ಎಪ್ರಿಲ್, ಮೇ ತಿಂಗಳಲ್ಲಿ ಪ್ರತಿದಿನ 30 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿದ್ದರು ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ಹಾಗು ಕಾರ್ಯನಿರ್ವಹಣಾ ಧಿಕಾರಿ ಪ್ರಶಾಂತಕುಮಾರ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಇದು ಸಂತೋಷದ ವಿಚಾರ ಅಲ್ಲಾ ಏಕೆಂದರೆ ಈ ಹಣ ಸರಕಾರದ ಬೊಕ್ಕಸಕ್ಕೆ ಸೇರಿ ದುರುಪಯೋಗ ಆಗುತ್ತದೆ