ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ದಶಮಾಪುರ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಚಂದ್ರಶೇಖರ್ (25) ಮೃತ ಯುವಕ. ಬಿತ್ತನೆ ಮಾಡಿದ್ದ ಮೆಕ್ಕೆಜೋಳ ಬೀಜವನ್ನು ಕಾಡುಹಂದಿ ಉಪಟಳದಿಂದ ರಕ್ಷಿಸಲು ಜಮೀನಿಗೆ ತೆರಳಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದರು.