ಬಿಜೆಪಿಯಿಂದ ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ ನಡೆ ಪ್ರದರ್ಶನ : ಸಿಎಂ ಸಿದ್ದರಾಮಯ್ಯ ಕಿಡಿ

Date:

Advertisements
  • ವಿರೋಧ ಪಕ್ಷಗಳು ಪ್ರಬಲವಾಗಿದ್ದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿ
  • ಕೇಶವಕೃಪದವರು ನೋಡಲಿ ಅಂತ ಡ್ರಾಮಾ ಮಾಡಿದ ಬಿಜೆಪಿ ಸದಸ್ಯರು

ಬಿಜೆಪಿಯವರು ಸುಳ್ಳು ಹೇಳುತ್ತಾ ನಕಲಿ ಪ್ರತಿಭಟನೆಯ ಡ್ರಾಮಾ ಮಾಡಿದ್ದಾರೆ. ಅವತ್ತು ಬಿಜೆಪಿಯ ರಾಷ್ಟ್ರೀಯ ನಾಯಕರಿಗೆ ಯಾವ ರೀತಿ ನಡೆಸಿಕೊಂಡಿದ್ದೇವೋ ಈಗಲೂ ಅದೇ ರೀತಿ ನಡೆದುಕೊಂಡಿದ್ದೇವೆ. ಇದು ಹಿಂದಿನಿಂದ ನಡೆದುಕೊಂಡಿರುವ ಪದ್ಧತಿ. ಅದರಂತೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿದಾನಸಭಾ ಅಧಿವೇಶನದಲ್ಲಿ ಬಿಜೆಪಿ ಸದಸ್ಯರು ಸ್ಪೀಕರ್ ಮುಖಕ್ಕೆ ಪೇಪರ್ ಹರಿದು ಎಸೆದದ್ದು ಮತ್ತು ಸ್ಪೀಕರ್ ಪೀಠಕ್ಕೆ ಅವಮಾನಿಸಿದ್ದನ್ನು ವಿರೋಧಿಸಿ ಸದನದಲ್ಲಿ ಮಾತನಾಡಿದ ಅವರು, “ಬಿಜೆಪಿ ಸದಸ್ಯರು ಹಿಂದಿನದ್ದೆಲ್ಲ ಮರೆತರಂತೆ ಡ್ರಾಮಾ ಆಡುತ್ತಾ, ಅಮಾನವೀಯವಾಗಿ ವರ್ತಿಸಿದ್ದಾರೆ. ಸ್ಪೀಕರ್ ಜತೆ ಮತ್ತು ಅವರ ಪೀಠದ ಎದುರು ಅತ್ಯಂತ ಅಸಹ್ಯವಾಗಿ ಅಮಾನವೀಯವಾಗಿ ವರ್ತಿಸಿದ್ದಾರೆ. ನಾವೂ ವಿರೋಧ ಪಕ್ಷದಲ್ಲಿದ್ದೆವು. ಇಷ್ಟು ಅಸಹ್ಯವಾಗಿ ನಡೆದುಕೊಂಡ ಸಣ್ಣ ಉದಾಹರಣೆ ಇಲ್ಲ” ಎಂದರು.

“ನಾವು ಬಸವಣ್ಣನವರ ಸಂಸ್ಕಾರದಂತೆ ನುಡಿದಂತೆ ನಡೆದು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದನ್ನು ನಾಡಿನ ಜನ ಸ್ವಾಗತಿಸಿದ್ದಾರೆ, ಸಂಭ್ರಮಿಸಿದ್ದಾರೆ. ಇದನ್ನು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ, ಸಂಕಟ ತಡೆದುಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಈ ಡ್ರಾಮಾ ಮಾಡುತ್ತಿದ್ದಾರೆ” ಎಂದು ಟೀಕಿಸಿದರು.

Advertisements

“ಕರ್ನಾಟಕ ವಿಧಾನಸಭೆಯಲ್ಲಿ ಇಂದು ಅತ್ಯಂತ ಬೇಸರದ ಸಂಗತಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅರ್ಥಪೂರ್ಣ ವಿರೋಧ ಪಕ್ಷ ಇರಬೇಕು ಎನ್ನುವುದು ನನ್ನ ನಂಬಿಕೆ. ಈ ಕಾರಣಕ್ಕೇ ನಾವು ಬಿಜೆಪಿ ಮುಕ್ತ ಎನ್ನುವ ಮಾತನ್ನು ಯಾವತ್ತೂ ಆಡಿಲ್ಲ. ಇವರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಗೌರವ ಇಲ್ಲ. ಇನ್ನೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡದೇ ಪ್ರಜಾಪ್ರಭುತ್ವ ವ್ಯವಸ್ಥೆ ವಿರುದ್ಧವಾಗಿ ಬಿಜೆಪಿ ನಡೆದುಕೊಳ್ಳುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಲಿಕುಂಟೆ ಮೂರ್ತಿ ಪ್ರಕರಣ : ಟ್ರೋಲರ್‌ಗಳ ವಿರುದ್ಧ ಕ್ರಮ ಅಗತ್ಯ

“ಅಂಬೇಡ್ಕರ್, ಬುದ್ದ, ಬಸವ ಮುಂತಾದ ಮಹನೀಯರ ಪ್ರಜಾಪ್ರಭುತ್ವವಾದಿ ಮೌಲ್ಯಗಳ ಮುಂದುವರೆದ ಪರಂಪರೆಯ ಪ್ರಾತಿನಿಧಿಕ ಸಂಸ್ಥೆಯಾಗಿದ್ದ ವಿಧಾನಸಭೆಗೆ ಬಿಜೆಪಿಯವರು ಅಗೌರವ ಸಲ್ಲಿಸಿದ್ದಾರೆ. ಪ್ರಜಾಪ್ರಭುತ್ವ ಮಾದರಿಯಲ್ಲಿ ಮತ್ತು ಸದನದ ನಿಯಮಾವಳಿಗಳ ಆಧಾರದಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿಯವರಿಗೆ ಅವಕಾಶ ಇತ್ತು. ಆದರೆ ಸ್ಪೀಕರ್ ಮುಖಕ್ಕೆ ಪತ್ರ ಎಸೆಯುವುದು, ಸ್ಪೀಕರ್ ಪೀಠಕ್ಕೆ ಎಸೆಯುವುದು, ಅವಮಾನ ಮಾಡುವುದು ನಿಯಮ ಬಾಹಿರ. ಇದು ಅನಾಗರಿಕ ನಡವಳಿಕೆ” ಎಂದು ಬೇಸರ ವ್ಯಕ್ತಪಡಿಸಿದರು.

“ದಿವಂಗತ ಅನಂತ್ ಕುಮಾರ್ ಅವರು ಬದುಕಿದ್ದಾಗ ರಾಜ್ಯದಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಗೆ ಬರುವ ಬಿಜೆಪಿ ರಾಷ್ಟ್ರೀಯ ನಾಯಕರನ್ನು ರಾಜ್ಯದ ಅತಿಥಿಗಳನ್ನಾಗಿ ಘೋಷಿಸಿ ಆ ಶಿಷ್ಟಾಚಾರದಂತೆ ಕ್ರಮ ವಹಿಸಲು ನನ್ನ ಬಳಿ ಬಂದು ಮನವಿ ಮಾಡಿದ್ದರು. ಆಗ ನಾನು ಮುಖ್ಯಮಂತ್ರಿ ಆಗಿ ಬಿಜೆಪಿ ನಾಯಕರಿಗೆ ಶಿಷ್ಟಾಚಾರದ ಪ್ರಕಾರ ರಾಜ್ಯದ ಅತಿಥಿಗಳು ಎಂದು ಘೋಷಿಸಿ ಗೌರವ ನೀಡಿದ್ದೆವು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X