ರಾಯಚೂರು | ಜೂ 28,29 ರಂದು ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ; ಅರ್ಜುನ ಗೊಳಸಂಗಿ

Date:

Advertisements

11 ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ಇದೇ ಜೂ.28 ಮತ್ತು 29 ರಂದು ರಾಯಚೂರಿನಲ್ಲಿ ಆಯೋಜಿಸಲಾಗಿದೆ.ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಡಾ.ಜಯದೇವಿ ಗಾಯಕವಾಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ದಸಾಪ ರಾಜ್ಯಾಧ್ಯಕ್ಷ ಡಾ.ಅರ್ಜುನ ಗೊಳಸಂಗಿ ತಿಳಿಸಿದರು.

ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪ್ರಾದೇಶಿಕತೆ ಮತ್ತು ಮಹಿಳಾ ಪ್ರಾತಿನಿದಿಕತೆ, ಸಾಹಿತ್ಯ ಸಾಧನೆಯನ್ನು ಪರಿಗಣಿಸಿ ದಸಾಪ ರಾಜ್ಯ ಕಾರ್ಯಕಾರಿ ಸಮಿತಿಯು ಈ ಭಾಗದ ಮಹಿಳಾ ಸಾಹಿತಿಯಾಗಿರುವ ಡಾ.ಜಯದೇವಿ ಗಾಯಕವಾಡ ಅವರನ್ನು ಆಯ್ಕೆಮಾಡಿದೆ ಎಂದರು.

ಸಂವಿಧಾನ ಭಾರತ ಎನ್ನುವ ಪ್ರಧಾನ ಆಶಯದಡಿ ಸ್ಥಳೀಯ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಸಮ್ಮೇಳದಲ್ಲಿ ಆಶಯದಂತೆಯೇ ಚರ್ಚೆ, ಸಂವಾದಗಳು, ಕವಿಗೋಷ್ಠಿಗಳನ್ನು ರೂಪಿಸಲಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಮೀಷನರ್ ದಯಾನಂದ ಅವರ ಅಮಾನತು ಕೂಡಲೇ ಹಿಂಪಡೆಯಲು ಆಗ್ರಹ

ಸಮ್ಮೇಳನವನ್ನು ಚಿಂತಕ, ಸಾಹಿತಿ ಪ್ರೊ.ಬರಗೂರು ರಾಮಚಂದ್ರ ಅವರು ಉದ್ಘಾಟಿಸಲಿದ್ದು, ಸಾಹಿತಿ, ಡಾ.ಎಲ್‌.ಹನುಮಂತಯ್ಯ ಆಶಯ ನುಡಿಗಳನ್ನಾಡಲಿದ್ದಾರೆ. ದಸಾಪ ಪುಸ್ತಕಗಳನ್ನು ಕಸಾಪ ಮಾಜಿ ರಾಜ್ಯಾಧ್ಯಕ್ಷ ಡಾ.ಮನು ಬಳಿಗಾರ ಬಿಡುಗಡೆಗೊಳಿಸಲಿದ್ದು, ಸಾಹಿತಿ ಕುಂವೀ ಅವರು ದಸಾಪ ನೀಡುವ ಗೌರವ ಪ್ರಶ್ತಿ ಹಾಗೂ ಪುಸ್ತಕ ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ. ಇನ್ನು ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ ಮುಖ್ಯ ಭಾಷಣಕಾರರಾಗಿ ಪಾಲ್ಗೊಳ್ಳಲಿದ್ದಾರೆ.

ಸಮ್ಮೇಳನದಲ್ಲಿ ಎರಡು ಕವಿಗೋಷ್ಠಿಗಳನ್ನು ಸಂಯೋಜಿಸಲಾಗಿದ್ದು, ಒಂದು ಮಹಿಳಾ ಕವಿಗೋಷ್ಠಿ, ಸರ್ವರಿಗೂ ಸಂವಿಧಾನ, ಮೀಸಲಾತಿ ಒಳಗೆ-ಹೊರಗೆ ಎಂಬ ವಿಷಯಗಳ ಕುರಿತ ಎರಡೂ ಸಂವಾದ ಗೋಷ್ಠಿಗಳು, ರಾಯಚೂರು ಜಿಲ್ಲೆಯ ದಲಿತ ಬಂಡಾಯ ಸಾಹಿತ್ಯ ಹಾಗೂ ದಲಿತ ಲೋಕದ ವರ್ತಮಾನ ವಿಷಯಗಳ ಕುರಿತು ಸಂಕೀರ್ಣಗೋಷ್ಠಿಯನ್ನು ನಡೆಸಲಾಗುತ್ತಿದೆ. ಇದರೊಟ್ಟಿಗೆ ಚಿತ್ರಕಲಾ ಪ್ರದರ್ಶನ ಹಾಗೂ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದಸಾಪ ಪದಾಧಿಕಾರಿಗಳಾದ ಡಾ.ವೈ.ಎಂ.ಭಜಂತ್ರಿ, ಡಾ.ಎಚ್‌.ಬಿ.ಕೋಲ್ಕಾರ,ಸುಭಾಸ ಹೊದ್ಲೂರ,ತಾಯರಾಜ ಮರ್ಚೇಟ್ಹಾಳ,ಡಾ.ಹುಸೇನಪ್ಪ ಅಮರಾಪುರ, ಧರ್ಮಾವತಿ, ಪಾರ್ಥ ಸಿರವಾರ, ರಂಗಮುನಿದಾಸ ಸೇರಿ ಇತರರು ಇದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X