ಬಳ್ಳಾರಿ | ನೀರಿನ ಮೂಲಗಳ ಸಂರಕ್ಷಣೆ ಸಾರ್ವಜನಿಕರ ಆದ್ಯತೆಯಾಗಬೇಕು: ಡಾ. ಯಲ್ಲಾ ರಮೇಶ್‌ಬಾಬು

Date:

Advertisements

ಕುಡಿಯುವ ನೀರಿನ ಮೂಲಗಳ ಸಂರಕ್ಷಣೆಯು ಸಾರ್ವಜನಿಕರ ಆದ್ಯತೆಯೂ ಆಗಿದ್ದು, ಅವುಗಳನ್ನು ಕಾಪಾಡಿಕೊಳ್ಳುವುದರ ಜೊತೆಗೆ ಕುದಿಸಿ ಆರಿಸಿ ಸೋಸಿದ ನೀರನ್ನು ಕುಡಿಯುವ ಮೂಲಕ ಸಂಭಾವ್ಯ ವಾಂತಿ-ಭೇದಿ ಪ್ರಕರಣಗಳು ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್‌ಬಾಬು ಅವರು ಹೇಳಿದರು.

ನಗರದ ಗೌತಮ್ ನಗರ ಕೊಳಚೆ ಪ್ರದೇಶಕ್ಕೆ ಭೇಟಿ ನೀಡಿ ಮಾತನಾಡಿದ ಅವರು, “ಕಲುಷಿತ ನೀರು ಹಾಗೂ ಆಹಾರ ಸೇವನೆಯಿಂದ ಸಾಮಾನ್ಯವಾಗಿ ವಾಂತಿ ಭೇದಿ ಸೇರಿದಂತೆ ಟೈಫಾಯಿಡ್, ಕಾಲರಾ ಮುಂತಾದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುತ್ತವೆ. ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಕುಡಿಯುವ ನೀರಿನ ಮೂಲಗಳು ಕಲುಷಿತವಾಗುವ ಸಾಧ್ಯತೆ ಇರುತ್ತವೆ. ಮನೆಯ ಮುಂದೆ ನಳದ ಪೈಪ್‌ಗಳು ತಗ್ಗಿನಲ್ಲಿ ಕಂಡುಬರುತ್ತಿದ್ದು, ಇದರಿಂದ ಅನಗತ್ಯ ನೀರು ಸಂಗ್ರಹವಾಗಿ ಪುನಃ ನೀರಿನ ಪೈಪ್‌ಗಳಲ್ಲಿ ವಾಪಸ್ಸು ಹೋಗುವ ಮೂಲಕ ನೀರು ಕಲುಷಿತವಾಗುವ ಸಾಧ್ಯತೆಯಿದೆ. ಈ ಹಿನ್ನಲೆ ನಳದ ಪೈಪ್‌ಗಳು ಮನೆಯ ಮುಂದೆ ನೆಲದ ಮೇಲ್ಮಟ್ಟದಲ್ಲಿ ಇರುವಂತೆ ಜಾಗೃತವಹಿಸಬೇಕು” ಎಂದು ತಿಳಿಸಿದರು.

“ಸಂಭಾವ್ಯ ವಾಂತಿ-ಭೇದಿ ಕಂಡುಬರದಂತೆ ಜಾಗ್ರತೆ ವಹಿಸಲು ಮಲ-ಮೂತ್ರ ವಿಸರ್ಜನೆಗಾಗಿ ಶೌಚಾಲಯಗಳನ್ನು ಬಳಸಬೇಕು. ಸಾಧ್ಯವಾದಷ್ಟು ಬಿಸಿ ಆಹಾರ ಸೇವೆನೆಗೆ ಆದ್ಯತೆ ನೀಡಬೇಕು. ರಸ್ತೆ ಬದಿ ತೆರೆದಿಟ್ಟ ಅಥವಾ ಕತ್ತರಿಸಿದ ಹಣ್ಣು ತಿನ್ನಬಾರದು. ಊಟದ ಮೊದಲು ಹಾಗೂ ಶೌಚದ ನಂತರ ಕೈಗಳನ್ನು ಸಾಬೂನು ಮತ್ತು ನೀರಿನಿಂದ ತಪ್ಪದೇ ತೊಳೆಯಬೇಕು. ಮನೆಯಲ್ಲಿ ವಾಂತಿ-ಭೇದಿ ಅಥವಾ ಕಾಲರಾ ಸೋಂಕಿತರಿದ್ದಲ್ಲಿ ಮನೆಯಲ್ಲೇ ತಯಾರಿಸಿದ ಗಂಜಿ, ಬೇಳೆ ತಿಳಿಸಾರು, ನಿಂಬು ಪಾನಕ ಹಾಗೂ ಸಾಧ್ಯವಾದರೆ ಎಳೆನೀರು ಕೊಡಬೇಕು. ಜಿಲ್ಲೆಯಲ್ಲಿ ಜಿಲ್ಲಾ ಕಾಲರಾ ನಿಯಂತ್ರಣ ತಂಡ ಈಗಾಗಲೇ ನಿರಂತರವಾಗಿ ನೀರಿನ ಮೂಲಗಳ ಪರೀಕ್ಷೆ ಕೈಗೊಳ್ಳುತ್ತಿದ್ದು, ಸಾರ್ವಜನಿಕರು ಸಾಂಕ್ರಾಮಿಕ ರೋಗಗಳಿಂದ ಜಾಗೃತರಾಗಿರಬೇಕು” ಎಂದು ತಿಳಿಸಿದರು.

Advertisements

ಇದನ್ನೂ ಓದಿ: ಬಳ್ಳಾರಿ | ಜೂ.16 ರಂದು ಅಕ್ಕಿ, ಗೋಧಿ ಬಹಿರಂಗ ಹರಾಜು

“ವಾಂತಿಭೇದಿ ಉಂಟಾದ ಸಂದರ್ಭದಲ್ಲಿ ದೇಹದ ನಿರ್ಜಲೀಕರಣ ತಡೆಯಲು ಓಆರ್‌ಎಸ್ ಜೀವಜಲ ದ್ರಾವಣವು ಅತ್ಯಂತ ಪರಿಣಾಕಾರಿಯಾಗಿದ್ದು, ಒಂದು ಲೀಟರ್ ನೀರಿಗೆ ಸಂಪೂರ್ಣ ಒಂದು ಪೊಟ್ಟಣದ ಪುಡಿಯನ್ನು ಸ್ವಚ್ಚವಾದ ಪಾತ್ರೆಯಲ್ಲಿ ಹಾಕುವ ಮೂಲಕ ದ್ರಾವಣ ತಯಾರಿಸಿ ಒಂದು ದಿನದ ಒಳಗಡೆ ಜೀವಜಲ ದ್ರಾವಣ ಕುಡಿಯುವ ಮೂಲಕ ಖಾಲಿ ಮಾಡಬೇಕು. 24 ಗಂಟೆಗಳ ನಂತರ ಪುನಃ ಬಳಸಬಾರದು” ಎಂದು ತಿಳಿಸಿದರು.

ಗೌತಮ್ ನಗರ ಬಡಾವಣೆಯ ʼನಮ್ಮ ಕ್ಲಿನಿಕ್ʼ ವೈದ್ಯ ಡಾ.ಸ್ಯಾಮ್ಯುಯೆಲ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್.ದಾಸಪ್ಪನವರ, ಹೆಚ್‌ಐಒ ದುರ್ಗಾಪ್ರಸಾದ್, ಯೋಗಾನಂದ, ಆಶಾಕಾರ್ಯಕರ್ತೆ ಸಾಜಿಯಾ, ಗೀತಾ, ಸುಮಿತ್ರ, ವೀರಭದ್ರ ಹಾಗೂ ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X