ಪಡಿತರ ಅಂಗಡಿಯಲ್ಲಿ ಘರ್ಷಣೆ ನಡೆದು 19 ವರ್ಷದ ದಲಿತ ಯುವಕನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ನಡೆದಿದೆ. ಆತನ ಸಹೋದರನ ಮೇಲೂ ಗುಂಡು ಹಾರಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಈ ಘಟನೆಯನ್ನು ಖಂಡಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, 19 ವರ್ಷದ ಪಂಕಜ್ ಪ್ರಜಾಪತಿಯನ್ನು ಹಾಡಹಗಲೇ ಗುಂಡಿಕ್ಕಿ ಕೊಲ್ಲಲಾಗಿದೆ. ದಲಿತನಾಗಿ ತನ್ನ ಪಾಲನ್ನು ಕೇಳಿದ ಕಾರಣಕ್ಕೆ ಈ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
