ವಿ. ಪರಿಷತ್ ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ನಿಧನ; ಹೊರಟ್ಟಿ ಸಂತಾಪ

Date:

Advertisements

ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ಅವರು ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಅವರ ಅಗಲಿಕೆಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಡೇವಿಡ್ ಸಿಮಿಯೋನ್ ಅವರ ಅಗಲಿಕೆಗೆ ಸಂತಾಪ ಸೂಚಿಸಿರುವ ಹೊರಟ್ಟಿ, “ವಿಧಾನ ಪರಿಷತ್ತಿನ ಸದಸ್ಯರಾಗಿ ಕ್ರೀಯಾಶೀಲವಾಗಿ ಕಾರ್ಯ ನಿರ್ವಹಿಸಿರುವ ಡೇವಿಡ್ ಸಿಮಿಯೋನ್ ಮೂರು ವರ್ಷಗಳ ಕಾಲ ವಿಧಾನ ಪರಿಷತ್ತಿನ ಉಪಸಭಾಪತಿಯಾಗಿ ಹಾಗೂ ಸುಮಾರು ಒಂದೂವರೆ ವರ್ಷಗಳ ಕಾಲ ಹಂಗಾಮಿ ಸಭಾಪತಿಯಾಗಿ ಸದನವನ್ನು ಸಮರ್ಥವಾಗಿ ನಿರ್ವಹಿಸಿದ್ದರು” ಎಂದು ಸ್ಮರಿಸಿದ್ದಾರೆ.

“ಡೇವಿಡ್ ಸಿಮಿಯೋನ್ ಅವರು ಎಲ್ಲ ಜನಾಂಗಗಳ ಬಗೆಗೂ ಅತೀವ ಪ್ರೀತಿ, ಕಾಳಜಿ ಹೊಂದಿದ್ದರು. ಉತ್ತರ ಕರ್ನಾಟಕ ಅದರಲ್ಲೂ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ, ಸಾಂಸ್ಕೃತಿಕ, ಸಾಮಾಜಿಕ ಸೇರಿದಂತೆ ಎಲ್ಲಾ ರಂಗಗಳ ಅಭಿವೃದ್ದಿಗೆ ಅರ್ಹನಿಶಿ ಶ್ರಮಿಸಿರುವ ಡೇವಿಡ್ ಸಿಮಿಯೋನ್ ತಮ್ಮ ಸರಳತೆ ಹಾಗೂ ಸಜ್ಜನಿಕೆಯಿಂದ ಇಂದಿನ ಯುವ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ” ಎಂದು ಹೇಳಿದ್ದಾರೆ.

Advertisements

“ಡೇವಿಡ್ ಸಿಮಿಯೋನ್ ಅವರ ಅಗಲಿಕೆಯಿಂದ ಕನ್ನಡ ನಾಡು ಉತ್ತಮ ಸಮಾಜ ಸೇವಕ ಹಾಗೂ ಸಂಸದೀಯ ಪಟುವನ್ನು ಕಳೆದುಕೊಂಡಂತಾಗಿದೆ ಎಂದು ಕಂಬನಿ ಮಿಡಿದಿರುವ ಬಸವರಾಜ ಹೊರಟ್ಟಿ, ಡೇವಿಡ್ ಸಿಮಿಯೋನ್ ಅವರ ಅಪಾರ ಅಭಿಮಾನಿಗಳು, ಬಂಧು ಮಿತ್ರರು ಹಾಗೂ ಕುಟುಂಬ ವರ್ಗದವರಿಗೆ ಭಗವಂತ ಅವರ ಅಗಲಿಕೆಯ ದುಖಃವನ್ನು ಸಹಿಸುವ ಶಕ್ತಿ ನೀಡಲಿ” ಎಂದು ಪ್ರಾರ್ಥಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X