ಪ್ರಜಾಪ್ರಭುತ್ವದ ಧ್ವನಿ ಹತ್ತಿಕ್ಕಲಾಗಿದೆ ಎಂದು ಆರೋಪಿಸಿ 10 ಪ್ರಶ್ನೆ ಸರ್ಕಾರದ ಮುಂದಿಟ್ಟ ಬಿಜೆಪಿ

Date:

Advertisements

ಅರ್ಹತೆ ಇಲ್ಲದ ಅಸಮರ್ಥ ಕಾಂಗ್ರೆಸ್‌ ಸರ್ಕಾರ ಸರ್ಕಾರ ಪ್ರಶ್ನೆ ಕೇಳುವುದಕ್ಕೆ ಅವಕಾಶ ಕೊಡದೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡಿದೆ ಎಂದು ಆರೋಪಿಸಿರುವ ಬಿಜೆಪಿಯು ಸರ್ಕಾರದ ಮುಂದೆ ಹತ್ತು ಪ್ರಶ್ನೆಗಳನ್ನು ಇಟ್ಟಿದೆ.

  • ಖಾಸಗಿ ರಾಜಕೀಯ ಕಾರ್ಯಕ್ರಮಕ್ಕೆ ಅನೈತಿಕವಾಗಿ ರಾಜ್ಯದ ಐಎಎಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದು ಹೇಗೆ?
  • ಬಂಧಿತ ಐವರು ಉಗ್ರರ ವಿರುದ್ಧ ಪ್ರೈಮಾಫೇಸಿ ಸಾಕ್ಷಿಗಳಿದ್ದರೂ ಗೃಹ ಸಚಿವರು ಕ್ಲೀನ್ ಚೀಟ್ ಕೊಟ್ಟಿದ್ದೇಕೆ?
  • ಮುಂಗಾರು ಕೈಕೊಟ್ಟು ಕಂಗಾಲಾದ ರೈತರು ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ. 42 ರೈತರು ಸಾವಿಗೆ ಶರಣಾಗಿದ್ದಾರೆ. ಸರ್ಕಾರದ ಕ್ರಮಗಳೇನು?
  • ಕಾನೂನು ಸುವ್ಯವಸ್ಥೆ ಹದಗೆಟ್ಟು ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಶೇಕಡಾ 35 ರಷ್ಟು ಕ್ರೈಮ್ ರೇಟ್ ಹೆಚ್ಚಾಗಿದೆ. ಗೃಹ ಸಚಿವರು ಮಾಡುತ್ತಿರುವುದಾದರೂ ಏನು?
  • ಅಧಿಕಾರಕ್ಕೆ ಬರಲು ಗ್ಯಾರಂಟಿಗಳನ್ನು ಘೋಷಣೆ ಮಾಡಿ ಗದ್ದುಗೆ ಹಿಡಿದು ಇದೀಗ ಕಂಡೀಷನ್ ಹಾಕಿದ್ದು ಅಲ್ಲದೆ, ಅದನ್ನು ಜಾರಿ ಮಾಡದೆ ಕಾಲ ಹರಣ ಮಾಡುತ್ತಿರುವುದು ಏಕೆ?
  • ತರಕಾರಿ, ಹಾಲು, ವಿದ್ಯುತ್, ನೀರು ಹೀಗೆ ಎಲ್ಲ ಬೆಲೆಗಳನ್ನು ಏರಿಸುತ್ತಾ ಜನರ ರಕ್ತವನ್ನು ಹೀರುತ್ತಿರುವುದು ಏಕೆ?
  • ನೂರಾರು ಕೋಟಿ ಕೈಬದಲಾಗಿರುವ ಶ್ಯಾಡೋ ಸಿಎಂ ನೇತೃತ್ವದ ವರ್ಗಾವಣೆ ದಂಧೆಗೆ ಕೊನೆ ಎಂದು?
  • ಸರ್ಕಾರಿ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಸಭೆ ಮಾಡುವ, ಟಾರ್ಗೆಟ್‌ ನೀಡುವ ಅಧಿಕಾರ ಸುರ್ಜೇವಾಲಾರಿಗೆ ಕೊಟ್ಟಿದ್ದು ಯಾರು?
  • ಕಲುಷಿತ ನೀರು ಪೂರೈಕೆ, ಬಿಸಿಯೂಟದಲ್ಲಿ ವಿಷಪ್ರಾಶನ, ಕೊಳೆತ ಮೊಟ್ಟೆಗಳನ್ನು ಕೊಟ್ಟು ಜನಸಾಮಾನ್ಯರ ಜೀವನದ ಜತೆ ಚೆಲ್ಲಾಟವಾಡುತ್ತಿರುವುದು ಏಕೆ?
  • ರೈತ ವಿರೋಧಿ, ಜನ ವಿರೋಧಿ, ನಾಡ ವಿರೋಧಿ, ಧರ್ಮ ವಿರೋಧಿ ನಿಲುವುಗಳನ್ನು ಕೈಗೊಂಡು ಏನನ್ನು ಸಾಧಿಸಲು ಹೊರಟಿದ್ದೀರಿ..?

ಈ ಸುದ್ದಿ ಓದಿದ್ದೀರಾ? ಅಧಿವೇಶನ | ಸಭಾಧ್ಯಕ್ಷರ ವಿರುದ್ಧ ಪ್ರತಿಭಟನೆ; ಎಚ್‌ಡಿಕೆ, ಬೊಮ್ಮಾಯಿ ಪೊಲೀಸರ ವಶಕ್ಕೆ

“ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ಎರಡು ತಿಂಗಳಲ್ಲಿ ನೂರೆಂಟು ಸಮಸ್ಯೆಗಳು, ಹತ್ತಾರು ಪ್ರಶ್ನೆಗಳು ಉದ್ಭವಿಸಿವೆ. ಕಾಂಗ್ರೆಸ್ ಈ ಪ್ರಶ್ನೆಗಳಿಂದ ದೂರ ಓಡುತ್ತಿದೆ, ಪ್ರಶ್ನಿಸುವ ನಮ್ಮ ಶಾಸಕರನ್ನು ಅಮಾನತು ಮಾಡಿ ಪ್ರಜಾಪ್ರಭುತ್ವವನ್ನು ದಮನಿಸುತ್ತಿದೆ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ಮೇಲಾಗುತ್ತಿದೆ ದಾಳಿ ಎಂದು ಬಿಜೆಪಿ ಆರೋಪಿಸಿದೆ.”

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X