ಬೀದರ್‌ | ಪಡಿತರ ಚೀಟಿ : ಇ-ಕೆವೈಸಿ ಕಡ್ಡಾಯ; ಜೂನ್ 30ವರೆಗೆ ಕಾಲಾವಕಾಶ

Date:

Advertisements

ಬೀದರ್ ಜಿಲ್ಲೆಯ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲ ಸದಸ್ಯರ ಇ-ಕೆವೈಸಿ ಮಾಡಿಸುವುದು ಕಡ್ಡಾಯ‌ ಆಗಿರುವುದರಿಂದ ಪಡಿತರ ಚೀಟಿಯಲ್ಲಿರುವ ಎಲ್ಲ ಸದಸ್ಯರ ಇ-ಕೆವೈಸಿ (ಬಯೋಮೆಟ್ರಿಕ್) ಆಗಿರುವ ಬಗ್ಗೆ ನ್ಯಾಯಬೆಲೆ ಅಂಗಡಿಗೆ ತೆರಳಿ ಪರಿಶೀಸಿಕೊಳ್ಳಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಜಿಲ್ಲೆಯ ಔರಾದ (1,636), ಬಸವಕಲ್ಯಾಣ (4,691), ಭಾಲ್ಕಿ (2,919), ಬೀದರ (12,873), ಹುಮನಾಬಾದ (2,585), ಕಮಲನಗರ (1,245), ಹುಲಸೂರ (160), ಚಿಟಗುಪ್ಪಾ (1,379) ಸೇರಿ ಒಟ್ಟು 27,488 ಬಾಕಿ ಪಡಿತರದಾರರ ಇ-ಕೆವೈಸಿ ಬಾಕಿ ಇದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ʼಇ-ಕೆವೈಸಿ ಸಂಗ್ರಹಣೆಯ ಕಾರ್ಯ ಪ್ರತಿ ದಿನ ಬೆಳಿಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಮಾಡಿಸಿಕೊಳ್ಳಲು ಜೂನ್ 30 ರವರೆಗೆ ಕಾಲಾವಕಾಶ ನೀಡಲಾಗಿದೆ. ಇದಕ್ಕೆ ಸರ್ಕಾರವೇ ನ್ಯಾಯಬೆಲೆ ಅಂಗಡಿಯವರಿಗೆ ಹಣ ಪಾವತಿ ಮಾಡುತ್ತಿರುವುದರಿಂದ ಪಡಿತರ ಚೀಟಿದಾರರು ಈ ಪ್ರಕ್ರಿಯೆಗೆ ಯಾವುದೇ ಹಣ ಸಂದಾಯ ಮಾಡುವ ಅವಶ್ಯಕತೆ ಇರುವುದಿಲ್ಲ. ಇದು ಸಂಪೂರ್ಣ ಉಚಿತವಾಗಿರುತ್ತದೆʼ ಎಂದಿದ್ದಾರೆ.

Advertisements

ʼಆಧಾರ್ ಮತ್ತು ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರ ಹೆಸರು ವ್ಯತ್ಯಾಸವಿದ್ದಲ್ಲಿ, ಅಂತಹವರು ತಮ್ಮ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಿಸಿಕೊಂಡಲ್ಲಿ ಸರಿಯಾಗುವುದು. ಬೆರಳಚ್ಚು ಹೊಂದಾಣಿಕೆ ಆಗದಿರುವ ಪಡಿತರ ಚೀಟಿ ಸದಸ್ಯರು ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಅಪಡೇಟ್ ಮಾಡಿಕೊಳ್ಳಬೇಕುʼ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಛಲವಾದಿ ನಾರಾಯಣಸ್ವಾಮಿ, ಎನ್.ರವಿಕುಮಾರ್‌ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X