ಕಲಬುರಗಿ | ಪೌರಕಾರ್ಮಿಕನ ಮೇಲೆ ಹಲ್ಲೆ: ಮುನ್ಸಿಪಲ್ ಕಾರ್ಮಿಕರ ಸಂಘ ಪ್ರತಿಭಟನೆ

Date:

Advertisements

ಹಾವೇರಿ ನಗರಸಭೆಯ ಪೌರಕಾರ್ಮಿಕನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಹಾಗೂ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಮಿಕರಿಂದ ಕೆಲಸ ಮಾಡಿಸಿಕೊಳ್ಳುತ್ತಿರುವುದನ್ನು ರದ್ದುಪಡಿಸಿ ನೇರ ಪಾವತಿಯಡಿ ತರಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದ ಸದಸ್ಯರು ಪಾಲಿಕೆ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಮಾತನಾಡಿ, ʼಹಾವೇರಿ ನಗರಸಭೆಯಲ್ಲಿ ಅಧಿಕಾರಿಗಳ ಮೌಖಿಕ ಆದೇಶದ ಮೇರೆಗೆ ಬ್ಯಾನರ್ ತೆರವುಗೊಳಿಸಿದ ಪೌರಕಾರ್ಮಿಕರ ಮೇಲೆ ಪುಂಡರ ಗುಂಪೊಂದು ಹಲ್ಲೆ ನಡೆಸಿರುವ ವಿಡಿಯೊ ಹರಿದಾಡುತ್ತಿದೆ. ಪುಂಡರ ಗುಂಪು ನಿರ್ದಯತೆಯಿಂದ ಅಮಾನವೀಯವಾಗಿ ನಡೆಸಿರುವ ದಾಳಿ ತೀವ್ರ ಖಂಡನೀಯ. ಈ ದಾಳಿಯ ಕುರಿತು ತಕ್ಷಣ ಸಮಗ್ರ ತನಿಖೆ ನಡೆಸಬೇಕು. ದಾಳಿಕೋರರು ಹಾಗೂ ಅವರ ಹಿಂದೆ ಇರುವವರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕುʼ ಎಂದು ಆಗ್ರಹಿಸಿದರು.

ʼನಗರ ಮತ್ತು ಪಟ್ಟಣಗಳಲ್ಲಿ ಈ ರೀತಿಯ ಬಲಾಢ್ಯರು, ಪುಢಾರಿಗಳ ಗುಂಪುಗಳು ಕಟ್ಟುವ ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಲು ಅಧಿಕಾರಿಗಳು ಕಾರ್ಮಿಕರಿಗೆ ಹೇಳುತ್ತಾರೆ. ತೆರವುಗೊಳಿಸಿದರೆ ಈ ಗುಂಪು ದಾಳಿ ಮಾಡುತ್ತದೆ. ತೆರವುಗೊಳಿಸದಿದ್ದರೆ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳುವರು. ಈ ಇಬ್ಬದಿಗೆ ಸಮಸ್ಯೆ ಇತ್ಯರ್ಥವಾಗಬೇಕು. ಪೌರಕಾರ್ಮಿಕರಿಗೆ ರಕ್ಷಣೆ ಒದಗಿಸಬೇಕು. ದಾಳಿಗೆ ಒಳಗಾಗಿರುವ ಪೌರಕಾರ್ಮಿಕರಾದ ರಾಜು ದೊಡ್ಡಮನಿ ಮತ್ತು ಪೀರಪ್ಪ ಅವರಿಗೆ ಸರ್ಕಾರಿ ವೆಚ್ಚದಲ್ಲಿ ಉತ್ತಮ ಚಿಕಿತ್ಸೆ ನೀಡಬೇಕುʼ ಎಂದು ಒತ್ತಾಯಿಸಿದರು.

Advertisements

ʼಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರು ಗುತ್ತಿಗೆ ಪದ್ಧತಿಯಡಿ ಕೆಲಸ ಮಾಡುತ್ತಿದ್ದು, ಬಿಟ್ಟಿ ಚಾಕರಿಗೆ ಸಮನಾಗಿ ದುಡಿಯುತ್ತಿದ್ದಾರೆ. ಅವರನ್ನು ನೇರ ಪಾವತಿಯಡಿ ತಂದು ಕಾಯಮಾತಿ ಮಾಡಬೇಕುʼ ಎಂದರು.

ಇದನ್ನೂ ಓದಿ : ಮಣಿಪುರದಲ್ಲಿ ಹಿಂಸಾಚಾರ ಸೃಷ್ಟಿಸುತ್ತಿರುವ ‘ಆರಂಬೈ ತೆಂಗೋಲ್’ ಹುಟ್ಟಿದ್ದು ಹೇಗೆ?

ಸಂಘದ ಗೌರವ ಸಂಚಾಲಕಿ ಕೆ.ನೀಲಾ, ಸಂಚಾಲಕ ಲೋಹಿತ್, ಸಹ ಸಂಚಾಲಕಿ ಚಂದಮ್ಮ, ಸದಸ್ಯರಾದ ಕಮಲಾಬಾಯಿ, ನಾಗಮ್ಮ, ಈರಪ್ಪ, ಕವಿತಾ, ದಲಿತ ಹಕ್ಕುಗಳ ಸಮಿತಿಯ ಸಹ ಸಂಚಾಲಕ ಪಾಂಡುರಂಗ ಮಾವಿನಕರ್, ಸಿಐಟಿಯು ಕಾರ್ಮಿಕ ಸಂಘಟನೆಯ ಖಜಾಂಚಿ ನಾಗಯ್ಯಸ್ವಾಮಿ, ಡಿವೈಎಫ್‌ಐ ರಾಜ್ಯ ಘಟಕದ ಅಧ್ಯಕ್ಷೆ ಲವಿತ್ರ ವಸ್ತ್ರದ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X