ಜಾತಿಗಣತಿ ವಿರೋಧಿಸಿದ ಬಿಜೆಪಿ, ಈಗ ಮರು ಸಮೀಕ್ಷೆ ವಿರೋಧಿಸುತ್ತಿರುವುದೇಕೆ: ಡಿ ಕೆ ಶಿವಕುಮಾರ್ ಪ್ರಶ್ನೆ

Date:

Advertisements

ಜಾತಿಗಣತಿ ವಿರೋಧಿಸಿದ ಬಿಜೆಪಿ, ಈಗ ಗೊಂದಲ ನಿವಾರಿಸುವ ಸರ್ಕಾರದ ತೀರ್ಮಾನವನ್ನು ವಿರೋಧಿಸುತ್ತಿರುವುದೇಕೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ನವದೆಹಲಿಯಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಜಾತಿ ಗಣತಿ ವರದಿ ವಿರೋಧ ಮಾಡಿದವರು ಅವರಲ್ಲವೇ? ಅವರು ಜಾತಿಗಣತಿ ವರದಿ ಸ್ವೀಕಾರ ಮಾಡಲಿಲ್ಲ ಯಾಕೆ? ಈ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿಲ್ಲ. ಈ ವರದಿಯಲ್ಲಿ ಯಾರ ಅಂಕಿ ಅಂಶಗಳು ಬಿಟ್ಟುಹೋಗಿವೆ ಅವರ ಮಾಹಿತಿಯನ್ನು ಸೇರಿಸಲು ಅವಕಾಶ ನೀಡಲಾಗುವುದು. ಈಗಾಗಲೇ ನೀಡಿರುವ ವರದಿಯನ್ನು ನಾವು ಬಳಸಿಕೊಳ್ಳುತ್ತೇವೆ. ಸಮಾಜಗಳಿಗೆ ನ್ಯಾಯ ಒದಗಿಸಬೇಕು, ಗೊಂದಲಗಳನ್ನು ಬಗೆಹರಿಸಲು ನಾವು ಮುಂದಾಗಿದ್ದೇವೆ” ಎಂದು ತಿಳಿಸಿದರು.

ಈ ಬಾರಿ ವೈಜ್ಞಾನಿಕವಾಗಿ ಮಾಡಲಾಗುವುದೇ ಎಂದು ಕೇಳಿದಾಗ, “ನಾವು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಜೈನ, ಲಂಬಾಣಿ, ಬೆಸ್ತ ಸೇರಿದಂತೆ ಅನೇಕ ಸಮಾಜದ ಜನರು ನನ್ನನ್ನು ಭೇಟಿ ಮಾಡಿ ಆತಂಕ ವ್ಯಕ್ತಪಡಿಸಿದ್ದರು. ನಮ್ಮ ಶಾಸಕರುಗಳು ಅವರ ಅಭಿಪ್ರಾಯ ತಿಳಿಸಿದ್ದರು. ಈ ಹಿಂದೆಯೂ ವೈಜ್ಞಾನಿಕವಾಗಿ ಸಮೀಕ್ಷೆ ಮಾಡಲಾಗಿತ್ತು. ಮನೆ ಮನೆಗೆ ಹೋಗಿ ನಮ್ಮ ಅಧಿಕಾರಿಗಳು ಸಮೀಕ್ಷೆ ಮಾಡಿ ಚೀಟಿಯನ್ನು ಅಂಟಿಸಿದ್ದರು. ಅವರು ಮಾಡಿದ್ದು ವೈಜ್ಞಾನಿಕವಲ್ಲವೇ? ಕಳೆದ ಬಾರಿ ಅನೇಕರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸದೇ ತಮ್ಮ ಸಮುದಾಯವನ್ನು ಹೇಳಿಕೊಳ್ಳಲು ಹಿಂಜರಿದರು. ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರವಾಗಿ ಹತ್ತಾರು ಬಾರಿ ಜಾಹೀರಾತು ನೀಡಲಾಗಿದೆ” ಎಂದರು.

Advertisements

“ಅಧಿಕಾರಿಗಳು ಹಲವು ಬಾರಿ ಮನೆಗೆ ಹೋಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದ್ದಾರೆ. ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ. ಹೊರರಾಜ್ಯದಲ್ಲಿ ಇರುವವರು ತಮ್ಮ ಮಾಹಿತಿ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಲಾಗಿದೆ. ನಮ್ಮ ಪಕ್ಷದ ಅಧ್ಯಕ್ಷರು ತಂದೆ ಸ್ಥಾನದಲ್ಲಿ ನಿಂತು ಕೆಲವು ಮಾರ್ಗದರ್ಶನ ನೀಡಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಗಳು ಸಚಿವ ಸಂಪುಟದಲ್ಲಿ ಯಾವ ರೀತಿ ಮಾಡಬೇಕು ಎಂದು ಚರ್ಚೆ ಮಾಡುತ್ತಾರೆ. ಈ ಪ್ರಕ್ರಿಯೆಯಲ್ಲಿ 1 ಲಕ್ಷ ಜನರನ್ನು ಒಳಗೊಳ್ಳಬೇಕಾಗುತ್ತದೆ” ಎಂದು ತಿಳಿಸಿದರು.

ಜಾತಿ ಗಣತಿ ವಿಚಾರದಲ್ಲಿ ಪ್ರಬಲ ಜಾತಿಗಳ ಒತ್ತಡಕ್ಕೆ ಮಣಿಯಲಾಗಿದೆ ಎಂದು ಕೇಳಿದಾಗ, “ನಾವು ಎಲ್ಲರ ಒತ್ತಡಕ್ಕೂ ಮಣಿದಿದ್ದೇವೆ. ನಾವು ಮಾಧ್ಯಮಗಳ ಒತ್ತಡಕ್ಕೂ ಮಣಿಯುತ್ತೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭ್ರಷ್ಟಾಚಾರಿಯನ್ನು ಶಿಕ್ಷಿಸುವುದಾದರೆ ಕೋಮುವಾದಿಯನ್ನು ರಕ್ಷಿಸಬಹುದೇ?

ಮಾಹಿತಿ ಒದಗಿಸುವಂತೆ ಸ್ವಾಮೀಜಿಗಳು ಹೇಳಬೇಕು

ಸರ್ಕಾರದ ತೀರ್ಮಾನವನ್ನು ವೀರಶೈವ ಸಮಾಜ ಸ್ವಾಗತಿಸಿದೆ ಎಂದು ಕೇಳಿದಾಗ, “ವೀರಶೈವ, ಒಕ್ಕಲಿಗ ಸೇರಿದಂತೆ ಬೇರೆ ಸಮಾಜಗಳ ಸ್ವಾಮೀಜಿಗಳು ನನಗೆ ಕರೆ ಮಾಡಿ ಈ ತೀರ್ಮಾನವನ್ನು ಸ್ವಾಗತಿಸಿದ್ದಾರೆ. ಎಲ್ಲಾ ಸಮಾಜಗಳ ಸ್ವಾಮೀಜಿಗಳು ತಮ್ಮ ಸಮುದಾಯದವರಿಗೆ ತಿಳುವಳಿಕೆ ನೀಡಿ ಈ ಸಮೀಕ್ಷೆಯಲ್ಲಿ ಭಾಗಿಯಾಗುವಂತೆ ಮಾಡಬೇಕು. ಈ ಸಮೀಕ್ಷೆಯಲ್ಲಿ ಎಲ್ಲರೂ ತಮ್ಮ ಸಮುದಾಯದ ಬಗ್ಗೆ ಸರಿಯಾಗಿ ವಿವರ ನೀಡಬೇಕು” ಎಂದು ಕರೆ ನೀಡಿದರು.

ಜಾತಿ ಗಣತಿ ವಿಚಾರದಲ್ಲಿ ಹೈಕಮಾಂಡ್ ಮಟ್ಟದಲ್ಲಿ ಡಿ.ಕೆ. ಶಿವಕುಮಾರ್ ಅವರು ಮೇಲುಗೈ ಸಾಧಿಸಿದರೇ ಎಂದು ಕೇಳಿದಾಗ, “ಇದರಲ್ಲಿ ಯಾರ ಕೈ ಮೇಲಾಗುವ ವಿಚಾರವಿಲ್ಲ” ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರ ಜನಗಣತಿ ಜತೆ ಜಾತಿಗಣತಿ ಮಾಡುವಾಗ ರಾಜ್ಯ ಸರ್ಕಾರ ಮಾಡುವ ಅಗತ್ಯವಿದೆಯೇ ಎಂದು ಕೇಳಿದಾಗ, “ಇದು ನಮ್ಮ ಪಕ್ಷದ ರಾಜಕೀಯ ಅಜೆಂಡಾ. ಇದನ್ನು ಬಿಜೆಪಿಯವರು ಕಾಪಿ ಮಾಡಿದ್ದಾರೆ. ಜಾತಿಗಣತಿ ಮಾಡಿ ಹಿಂದುಳಿದ ವರ್ಗಗಳಿಗೆ ನ್ಯಾಯ ಸಿಗಬೇಕು ಎಂದು ರಾಹುಲ್ ಗಾಂಧಿ ಅವರು ಪ್ರತಿಪಾದಿಸಿದ್ದಾರೆ” ಎಂದು ತಿಳಿಸಿದರು.

ವಾಲ್ಮೀಕಿ ನಿಗಮ ಅಕ್ರಮಕ್ಕೂ ನಮ್ಮ ಶಾಸಕರು, ಸಂಸದರಿಗೂ ಸಂಬಂಧವಿಲ್ಲ

ವಾಲ್ಮೀಕಿ ನಿಗಮದ ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರು ಹಾಗೂ ಸಂಸದರ ಮನೆ ಮೇಲೆ ಇಡಿ ದಾಳಿ ವಿಚಾರವಾಗಿ ಕೇಳಿದಾಗ, “ಈ ವಾಲ್ಮೀಕಿ ಹಗರಣಕ್ಕೂ ನಮ್ಮ ಶಾಸಕರಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ನಮ್ಮ ಮುಖಂಡರು ಯಾವುದೇ ಚುನಾವಣೆಯಲ್ಲಿ ಹಣ ಹಂಚಿಕೆ ಮಾಡಿಲ್ಲ. ಅಧಿಕಾರಿಗಳು ದುರ್ಬಳಕೆ ಮಾಡಿದ್ದ ಶೇ.90 ರಷ್ಟು ಹಣವನ್ನು ಮತ್ತೆ ವಶಕ್ಕೆ ಪಡೆಯಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X