ವಿಜಯಪುರ | ಮಾತನಾಡಲು ನಿರಾಕರಿಸಿದ ಮಹಿಳೆಯ ಹತ್ಯೆ

Date:

Advertisements

ಸಮಾಜ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿ ತನ್ನೊಂದಿಗೆ ಮಾತನಾಡಲು ನಿರಾಕರಣೆ ಮಾಡುತ್ತಿದ್ದಾಳೆಂದು ಸಿಟ್ಟಾದ ಯುವಕ ಆಕೆಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಘಟನೆ ನಡೆದಿದೆ.

ಇಂಡಿ ತಾಲೂಕಿನ ಕೊಟ್ನಾಳ ಗ್ರಾಮದ ರೇಣುಕಾ ಸಾಯಬಣ್ಣ ಕನ್ನೊಳ್ಳಿ (30) ಕೊಲೆಯಾದ ಮಹಿಳೆ. ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಸಂಜು ಬನಸೋಡೆ ಕೊಲೆ ಮಾಡಿದ ಆರೋಪಿ.

ರೇಣುಕಾ ಅವರು ಸಮಾಜ ಕಲ್ಯಾಣ ಇಲಾಖೆಯಲ್ಲಿ ಗುಮಾಸ್ತೆಯಾಗಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ರೇಣುಕಾ ಬುಧವಾರ (ಜೂ.11) ಕೊಟ್ನಾಳ ಗ್ರಾಮದಿಂದ ಬಸ್ ಮೂಲಕ ಬಂದಿಳಿದ್ದರು. ಈ ವೇಳೆ ಬೈಕ್​ನಲ್ಲಿ ಆಗಮಿಸಿದ ಸಂಜು ಬನಸೋಡೆ ಚಾಕುವಿನಿಂದ ಚುಚ್ಚಿ ಹಲ್ಲೆ ಮಾಡಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ರೇಣುಕಾ ಅವರನ್ನು ಇಂಡಿ ತಾಲೂಕಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರೇಣುಕಾ ಕನ್ನೊಳ್ಳಿ ಮೃತಪಟ್ಟಿದ್ದಾರೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಭ್ರಷ್ಟಾಚಾರಿಯನ್ನು ಶಿಕ್ಷಿಸುವುದಾದರೆ ಕೋಮುವಾದಿಯನ್ನು ರಕ್ಷಿಸಬಹುದೇ?

ರೇಣುಕಾ ಸಾವಿನಿಂದ ಅವರ ತಾಯಿ ಸಹೋದರರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಕುರಿತು ಮಾಹಿತಿ ನೀಡಿದ ಕೊಲೆಯಾಗಿರುವ ರೇಣುಕಾ ತಾಯಿ ಹಾಗೂ ಸಹೋದರ, “ರೇಣುಕಾರ ಪತಿ ಸಾಯಬಣ್ಣ ಅಗ್ನಿಶಾಮಕ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸಾಯಬಣ್ಣ ಸೇವೆಯಲ್ಲಿರುವಾಗಲೇ ಮೃತಪಟ್ಟ ಕಾರಣ ರೇಣುಕಾ ಅವರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ಸಿಕ್ಕಿದೆ. ತವರೂರು ಕೊಟ್ನಾಳದಿಂದ ನಿತ್ಯ ಇಂಡಿಯಲ್ಲಿನ ಸಮಾಜ ಕಲ್ಯಾಣ ಇಲಾಖೆಗೆ ಬಂದು ಹೋಗುತ್ತಿದ್ದರಂತೆ. ಈ ವೇಳೆ ಇಂಡಿ ತಾಲೂಕಿನ ಅಗರಖೇಡ್ ಗ್ರಾಮದ ಸಂಜು ಬನಸೋಡೆ ಎಂಬ ಯುವಕ ರೇಣುಕಾಗೆ ತನ್ನ ಜೊತೆಗೆ ಮಾತನಾಡು ಎಂದು ಬೆನ್ನು ಬಿದ್ದಿದ್ದನಂತೆ. ಆತನ ಜೊತೆಗೆ ಮಾತನಾಡಲು ನಿರಾಕರಣೆ ಮಾಡಿದ ಪರಿಣಾಮ ಸಂಜು ಬನಸೋಡೆ ಇಂದು ರೇಣುಕಾರಿಗೆ ಹರಿತವಾದ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ” ಎಂದು ಹೇಳಿದರು.

ಇಂಡಿ ಪಟ್ಟಣ ಠಾಣೆಯ ಪೊಲೀಸರು ಆರೋಪಿ ಸಂಜುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಕುರಿತು ತನಿಖೆ ಮುಂದವರೆದಿದೆ. ಇಂಡಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮೂಲ ಸೌಕರ್ಯವಿಲ್ಲದ ಮಹಿಳಾ ಕಾಲೇಜು; ನೂತನ ಕಟ್ಟಡ ಮಂಜೂರಿಗೆ ದವಿಪ ಮನವಿ

ವಿಜಯಪುರ ನಗರದ ಗಾಂಧಿ ಚೌಕ್‌ನಲ್ಲಿರುವ ಮಹಿಳಾ ಶಾಲಾ ಕಾಲೇಜು ಮೂಲ ಸೌಕರ್ಯಗಳಿಲ್ಲದೆ...

ವಿಜಯಪುರ | ಆಲಮಟ್ಟಿ ಜಲಾಶಯ ಭರ್ತಿಗೆ ಕೆಲವೇ ಗಂಟೆಗಳು ಬಾಕಿ

ಆಲಮಟ್ಟಿ ಜಲಾಶಯದ ಒಳಹರಿವು ಕಡಿಮೆಯಾಗಿದೆ. ಒಂದು ವಾರದಿಂದ ಜಲಾಶಯದ ಹೊರಹರಿವು ಕಡಿಮೆ...

ವಿಜಯಪುರ | ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಸಂಘ ಪ್ರತಿಭಟನೆ

ಕನಿಷ್ಠ 10 ಸಾವಿರ ರೂ. ಗೌರವಧನ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ...

ವಿಜಯಪುರ | ಕುರಿಗಾಹಿಗಳ ರಕ್ಷಣೆಗೆ ಆಗ್ರಹ: ಆ.19ರಂದು ‘ಕುರಿಗಾರರ ನಡಿಗೆ ವಿಧಾನಸೌಧದ ಕಡೆಗೆ’ ಹೋರಾಟ

ಕುರಿಗಾಹಿಗಳ ಮೇಲಿನ ದೌರ್ಜನ್ಯ, ಸುಲಿಗೆ ತಡೆ ಹಾಗೂ ಸಂಚಾರಿ ಕುರಿಗಾಹಿಗಳ ರಕ್ಷಣೆಗಾಗಿ...

Download Eedina App Android / iOS

X