ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಆರಂಭವಾಗಿದೆ. ಬೆಂಗಳೂರು ನಗರದಲ್ಲಿ ಸಂಜೆ ವೇಳೆ ಜೋರು ಮಳೆಯಾಗಿದೆ.
ರಾಜಾಜಿ ನಗರ, ಮಲ್ಲೇಶ್ವರಂ, ಸಿಲಿಕಾನ್ ಸಿಟಿಯ ಟೌನ್ಹಾಲ್, ಕಾರ್ಪೋರೇಷನ್ ಸರ್ಕಲ್, ಮೆಜೆಸ್ಟಿಕ್, ಹೆಬ್ಬಾಳ, ಮೇಖ್ರಿ ಸರ್ಕಲ್, ಶಿವಾನಂದ, ಕೆ.ಆರ್ ಮಾರ್ಕೆಟ್ ಸೇರಿದಂತೆ ಹಲವು ಕಡೆ ವಿಪರೀತ ಮಳೆಯಾಗಿದೆ. ಎಂ.ಜಿ ರೋಡ್, ಬ್ರಿಗೇಡ್ ರೋಡ್, ಕಬ್ಬನ್ ಪಾರ್ಕ್, ವಿಧಾನಸೌಧ, ಕಸ್ತೂರಿ ಬಾ ರಸ್ತೆ, ಮಲ್ಯ ರಸ್ತೆಯಲ್ಲೂ ವರಣನ ಆರ್ಭಟವಿತ್ತು. ಸಂಜೆಯ ಮಳೆ ರಾತ್ರಿ ಕೂಡ ಮುಂದುವರೆಯುವ ಸಾಧ್ಯತೆ ಇದೆ.
ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಮುಂದಿನ ನಾಲ್ಕು ದಿನಗಳವರೆಗೆ ಮಳೆ ಅಲರ್ಟ್ ಘೋಷಿಸಿದೆ. ಸಂಜೆ ವೇಳೆಗೆ ಭಾರೀ ಮಳೆಯಾಗಲಿದ್ದು,ಜೂನ್ 14ರವರೆಗೆ ಮಳೆ ಮುಂದುವರಿಯಲಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಭ್ರಷ್ಟಾಚಾರಿಯನ್ನು ಶಿಕ್ಷಿಸುವುದಾದರೆ ಕೋಮುವಾದಿಯನ್ನು ರಕ್ಷಿಸಬಹುದೇ?
ಕೆಲವು ಜಿಲ್ಲೆ ಹೊರತುಪಡಿಸಿ ಉಳಿದ ಎಲ್ಲಾ 30 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.
ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲ್ಬುರ್ಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ ಮತ್ತು ಮಂಡ್ಯ ಸೇರಿದಂತೆ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಧಾರವಾಡ, ಗದಗ, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಹಾಗೂ ಇತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.