ಹೆಲ್ಮೆಟ್ ಇಲ್ಲದೇ ಬೈಕ್ ಚಾಲನೆ ಸೇರಿದಂತೆ ಹಲವು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದ ಆರೋಪದ ಮೇಲೆ, ದ್ವಿಚಕ್ರ ವಾಹನ ಸವಾರನಿಗೆ ನ್ಯಾಯಾಲಯ 14 ಸಾವಿರ ದಂಡ ವಿಧಿಸಿ ತೀರ್ಪು ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.
ಬೈಕ್ ಚಾಲನೆ ಮಾಡುತ್ತಿದ್ದ ರುದ್ರೇಶ್ ನಾಯ್ಕ ಎಂಬ ವ್ಯಕ್ತಿಯು ಹೆಲ್ಮೆಟ್ ಇಲ್ಲದೇ ಬೈಕ್ ಚಾಲನೆ ಜೊತೆಗೆ ಹೊಗೆ ತಪಾಸಣೆ , ಡಿ.ಎಲ್. ಸೇರಿದಂತೆ ಬೈಕ್ ಗೆ ಹಾಗೂ ಮಾಹಿತಿಯನ್ನು ಆಧಾರಿಸಿ ಸೂಕ್ತ ದಾಖಲೆಗಳಿಲ್ಲದ ಕಾರಣ ನ್ಯಾಯಾಲಯ ತೀರ್ಪು ನೀಡಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಜಿಂಕೆ ಬೇಟೆ: ಇಬ್ಬರ ಆರೋಪಿಗಳ ಬಂಧನ
ಜೂನ್ 2 ರಂದು ಮೂಡಿಗೆರೆ ತಾಲೂಕಿನ ಪೊಲೀಸ್ ಠಾಣಾಧಿಕಾರಿ ಶ್ರೀನಾಥ್ ರೆಡ್ಡಿ ಅವರು ತಮ್ಮ ಸಿಬ್ಬಂದಿಯೊಂದಿಗೆ ಪಟ್ಟಣದ ಎಂ.ಜಿ ರಸ್ತೆಯಲ್ಲಿ ವಾಹನ ತಪಾಸಣೆ ನಡೆಸುತ್ತಿರುವ ವೇಳೆ, ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ ಮಾಡುತ್ತಿದ್ದ ಚಾಲಕನನ್ನು ತಡೆದು ದಾಖಲೆಗಳನ್ನು ಪರಿಶೀಲಿಸಿದರು. ಬೈಕ್ ಗೆ ಸಂಬಂಧಿಸಿದ ಸೂಕ್ತ ದಾಖಲೆಗಳಿಲ್ಲದ ಕಾರಣ ಬೈಕ್ ಸವಾರನ ಮೇಲೆ ಕೇಸು ದಾಖಲಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮೂಡಿಗೆರೆ ಜೆ ಎಂ ಎಫ್ ಸಿ ನ್ಯಾಯಾಲಯದ ನ್ಯಾಯಾದೀಶರು ಬೈಕ್ ಚಾಲಕನಿಗೆ 14 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.